15
April, 2026

A News 365Times Venture

15
Wednesday
April, 2026

A News 365Times Venture

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಿ: MLC ಡಾ. ಯತೀಂದ್ರ ಸಿದ್ದರಾಮಯ್ಯ

Date:

ಮೈಸೂರು, ಏಪ್ರಿಲ್,15,2026 (www.justkannada.in): ಬೇಸಿಗೆ ಕಾಲ ಪ್ರಾರಂಭವಾಗಿದ್ದು, ಜಿಲ್ಲೆಯಲ್ಲಿ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ವಿಧಾನಪರಿಷತ್ ಶಾಸಕ ಡಾ: ಯತೀಂದ್ರ ಸಿದ್ದರಾಮಯ್ಯ ಅವರು ತಿಳಿಸಿದರು.

ಇಂದು‌ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು, ಅಧಿಕಾರಿಗಳು ಈಗಾಗಲೇ‌ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಹುದಾದ ಗ್ರಾಮಗಳನ್ನು ಗುರುತಿಸಿರುತ್ತೀರಿ, ಈ ಗ್ರಾಮಗಳಿಗೆ ನಿಗದಿತವಾಗಿ ಭೇಟಿ ನೀಡಿ ಕುಡಿಯುವ ನೀರಿನ ಸ್ಥಿತಿ ಗತಿಗಳನ್ನು ತಿಳಿದುಕೊಂಡು ಅಗತ್ಯ ವ್ಯವಸ್ಥೆ ಮಾಡಿ ಎಂದರು.

ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಕಾರ್ಯನಿರ್ವಹಣೆಯ ಬಗ್ಗೆ ಪರಿಶೀಲನೆ ನಡೆಸಿ, ಯಾವುದಾದರೂ ತೊಂದರೆ ಇದ್ದಲ್ಲಿ ಸರಿಪಡಿಸಿಕೊಳ್ಳಿ, ಖಾಸಗಿ ಬೋರ್ ವೆಲ್ ಗಳ ಪಟ್ಟಿ ಹಾಗೂ ಟ್ಯಾಂಕರ್ ಗಳ  ಮೂಲಕ ನೀರು ಸರಬರಾಜು ಮಾಡಬೇಕಿರುವ ಗ್ರಾಮಗಳನ್ನು ಪಟ್ಟಿ‌ ಮಾಡಿಕೊಂಡು ಯೋಜನೆ ರೂಪಿಸಿಕೊಳ್ಳಿ ಎಂದರು.

ಕುಡಿಯುವ ನೀರಿನ ಯೋಜನೆಗಳಿಗೆ ಸಂಬಂಧಿಸಿದಂತೆ ಅನುದಾನದ ಕೊರತೆ ಅಥವಾ ಯಾವುದೇ ತೊಂದರೆ  ಇದ್ದಲ್ಲಿ ಕೂಡಲೇ ಮೇಲಾಧಿಕಾರಿಗಳ ಗಮನಕ್ಕೆ ತನ್ನಿ, ಕುಡಿಯುವ ನೀರಿನ ಸಮಸ್ಯೆಗಳನ್ನು ಮೊದಲ ಆದ್ಯತೆ ನೀಡಿ ಪರಿಹರಿಸಬೇಕು ಎಂದರು.

ಸಭೆಯ ನಂತರ ಸಾರ್ವಜನಿಕರು, ಸ್ಮಶಾನಕ್ಕೆ ಸ್ಥಳ, ಹಕ್ಕು ಪತ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಸಮಸ್ಯೆಗಳ ಬಗ್ಗೆ ಕುಂದು ಕೊರತೆಗಳನ್ನು ಸಲ್ಲಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಒ ಎಸ್.ಯುಕೇಶ್ ಕುಮಾರ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Key words: drinking water, problems, MLC, Dr. Yathindra Siddaramaiah

The post ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಿ: MLC ಡಾ. ಯತೀಂದ್ರ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೃಷಿ ಪ್ರಾಯೋಗಿಕ (Agriculture Practical) ಪರೀಕ್ಷೆ: ವಿದ್ಯಾರ್ಥಿಗಳಿಗಾಗಿ ಉಚಿತ ತರಬೇತಿ ಕಾರ್ಯಾಗಾರ.

  ಮೈಸೂರು, ಏ.೧೫,೨೦೨೬: ಕೃಷಿ ಪ್ರಾಯೋಗಿಕ (Agriculture Practical) ಪರೀಕ್ಷೆಗೆ ಸಿದ್ಧರಾಗುತ್ತಿರುವ ವಿದ್ಯಾರ್ಥಿಗಳಿಗಾಗಿ...

ಮುಂದಿನ ಟಾರ್ಗೆಟ್ ನಾನೇ ಎಂದು ಪ್ರಚಾರ: ಸಿದ್ದರಾಮಯ್ಯ, ಡಿಕೆಶಿ ಜೊತೆ ಚರ್ಚೆ ಮಾಡ್ತೇನೆ- ಸಚಿವ ಜಮೀರ್

ಬೆಂಗಳೂರು,ಏಪ್ರಿಲ್,15,2026 (www.justkannada.in): ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪದ...

ಚನ್ನಪಟ್ಟಣ ಕ್ಷೇತ್ರಕ್ಕೆ ಚುನಾವಣಾ ಜ್ವರ ಕ್ರಿಯೇಟ್ ಮಾಢುವುದು ಬೇಡ-ಹೆಚ್ ಡಿಕೆಗೆ ಯೋಗೇಶ್ವರ್ ಟಾಂಗ್

ರಾಮನಗರ,ಏಪ್ರಿಲ್,15,2026(www.justkannada.in): ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಮತ್ತೆ ಕೇಂದ್ರ ಸಚಿವ...

ಯೋಗೀಶ್ ಗೌಡ ಕೊಲೆ ಕೇಸ್: ಶಾಸಕ ವಿನಯ್ ಕುಲಕರ್ಣಿ ಅಪರಾಧಿ- ಕೋರ್ಟ್ ತೀರ್ಪು ಪ್ರಕಟ

ಬೆಂಗಳೂರು,ಏಪ್ರಿಲ್,15,2026 (www.justkannada.in):  ಬಿಜೆಪಿ ಮುಖಂಡ, ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್...