4
March, 2026

A News 365Times Venture

4
Wednesday
March, 2026

A News 365Times Venture

ಗಾಯಕ ಸೋನು ನಿಗಮ್ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್ ಸೂಚನೆ

Date:

ಬೆಂಗಳೂರು,ಮೇ,15,2025 (www.justkannada.in): ಕನ್ನಡವನ್ನ ಪಹಲ್ಗಾಮ್ ದಾಳಿಗೆ ಹೋಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಗಾಯಕ ಸೋನು ನಿಗಮ್ ವಿರುದ್ದ ಯಾವುದೇ ಬಲವಂತ ಕ್ರಮ ಕೈಗೊಳ್ಳಬಾರದೆಂದು ಎಂದು ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದೆ.

ಸೋನು ನಿಗಮ್  ವಿರುದ್ಧ ನಗರದ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಕನ್ನಡಪರ ಸಂಘಟನೆಗಳು ದೂರು ನೀಡಿದ್ದು ಎಫ್ ಐಆರ್ ದಾಖಲಾಗಿತ್ತು. ಈ ಮಧ್ಯೆ ಗಾಯಕ ಸೋನು ನಿಗಂ ತಮ್ಮ ಮೇಲಿನ ಎಫ್​ಐಆರ್ ರದ್ದು ಮಾಡುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದು ಈ ಅರ್ಜಿ ವಿಚಾರಣೆ ಇಂದು ನ್ಯಾ. ಶಿವಶಂಕರ್ ಅಮರಣ್ಣನವರ್ ಅವರಿದ್ದ ಪೀಠದಲ್ಲಿ ನಡೆಯಿತು.

ತನಿಖೆಗೆ ಹಾಜರಾಗಿಲ್ಲವೆಂದು ಹೆಚ್ಚುವರಿ SPP ಬಿ.ಎನ್.ಜಗದೀಶ್ ನ್ಯಾಯಾಲಯಕ್ಕೆ ಹೇಳಿದರು. ಬೆಂಗಳೂರಿಗೆ ಸೋನು ನಿಗಮ್ ಹಾಜರಾದರೆ ಸಮಸ್ಯೆ ಆಗಬಹುದು, ವಿಚಾರಣೆಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಬೇಕು ಎಂದು ಸೋನು ನಿಗಮ್ ಪರ ವಕೀಲರು ಹೈಕೋರ್ಟ್​ಗೆ ಮನವಿ ಮಾಡಿದರು.

ಎರಡೂ ಕಡೆಯ ವಾದ ಆಲಿಸಿದ ನ್ಯಾ.ಶಿವಶಂಕರ್ ಅಮರಣ್ಣವರ್ ಅವರು, ಸೋನು ನಿಗಂ ಅವರಿರುವ ಸ್ಥಳದಲ್ಲಿಯೇ ಅವರ ವೆಚ್ಚದಲ್ಲಿಯೇ ವಿಚಾರಣೆ ಮಾಡುವಂತೆ ಅಥವಾ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ಮಾಡುವಂತೆ ಪೊಲೀಸರಿಗೆ ಸೂಚಿಸಿದರು.

ಅಲ್ಲದೆ ಸೋನು ನಿಗಂ ಅವರ ವಿರುದ್ಧ ಯಾವುದೇ ಬಲವಂತ ಕ್ರಮ ಕೈಗೊಳ್ಳಬಾರದೆಂದು. ನ್ಯಾಯಾಲಯದ ಅನುಮತಿ ಇಲ್ಲದೆ  ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಬಾರದು ಎಂದು ಸಹ ಪ್ರಕರಣದ ತನಿಖಾಧಿಕಾರಿಗಳಿಗೆ ಸೂಚನೆ ನೀಡಿದರು.

Key words: No action, against, singer, Sonu Nigam, High Court

The post ಗಾಯಕ ಸೋನು ನಿಗಮ್ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್ ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರು: ಕುದುರೆಗೆ ಕೃತಕ ಕಾಲು ಜೋಡಣೆ ಯಶಸ್ವಿ

ಮೈಸೂರು,ಮಾರ್ಚ್,4,2026 (www.justkannada.in): ಮೈಸೂರು ಮೈಸೂರಿನಲ್ಲಿ ಇದೇ ಮೊದಲ ಬಾರಿಗೆ ಗಂಭೀರವಾಗಿ ಗಾಯಗೊಂಡಿದ್ದ...

ಕೆಪಿಎಸ್ ಸಿಯಲ್ಲಿ ಅಕ್ರಮ:  ಭಾಸ್ಕರ್ ರಾವ್ ತೀವ್ರ ಕಳವಳ

ಬೆಂಗಳೂರು, ಮಾರ್ಚ್​,4,2026 (www.justkannada.in):  ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಮತ್ತೆ ಅಕ್ರಮ ಆರೋಪ...

KPSC ಫಲಿತಾಂಶ ಅಕ್ರಮ ಆರೋಪ: ಬಜೆಟ್ ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ- ಬಿವೈ ವಿಜಯೇಂದ್ರ

ಬೆಂಗಳೂರು,ಮಾರ್ಚ್,4,2026 (www.justkannada.in): ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಕೆಎಎಸ್ ಮುಖ್ಯ ಪರೀಕ್ಷೆಯ...

ಭೀಕರ ಅಪಘಾತದಲ್ಲಿ ಐವರು ದುರ್ಮರಣ

ಚಿತ್ತೂರು,ಮಾರ್ಚ್,4,2026 (www.justkannada.in): ಹಿಂಬದಿಯಿಂದ ಲಾರಿಗೆ ಕಾರು ಡಿಕ್ಕಿಯಾಗಿ ಬೆಂಗಳೂರು ಮೂಲದ ಐವರು...