ಮೈಸೂರು, ಮೇ, 5,2026 (www.justkannada.in): ಕನ್ನಡ ಪರ ಹೋರಾಟಗಾರರ ವಿರುದ್ಧ ದಾಖಲಾದ ಪ್ರಕರಣಗಳನ್ನು ಹಿಂದಕ್ಕೆ ಪಡೆಯುವಂತೆ ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಮನವಿ ಮಾಡಿದರು.
ಇಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರನ್ನ ಭೇಟಿಯಾದ ಟಿ.ಎ ನಾರಾಯಣಗೌಡರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಹಲವು ಬಾರಿ ನೀಡಿರುವ ಭರವಸೆಯಂತೆ ಕನ್ನಡ ಚಳವಳಿಗಾರರ ಮೇಲಿನ ಪ್ರಕರಣಗಳನ್ನು ವಾಪಸ್ ಪಡೆಯುವ ಕ್ರಮ ಇನ್ನೂ ಜಾರಿಯಾಗಿಲ್ಲ ಎಂಬುದನ್ನು ಗಮನಕ್ಕೆ ತಂದರು. ನಾಡು, ನುಡಿ ರಕ್ಷಣೆಗೆ ಹೋರಾಡುತ್ತಿರುವ ಕಾರ್ಯಕರ್ತರ ಮೇಲೆ ಹೂಡಲಾಗಿರುವ ಮೊಕದ್ದಮೆಗಳನ್ನು ತಕ್ಷಣವೇ ಸಚಿವ ಸಂಪುಟದಲ್ಲಿ ಚರ್ಚಿಸಿ ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.
ಟಿ.ಎ ನಾರಾಯಣಗೌಡ ಅವರ ಮನವಿಗೆ ಸ್ಪಂದಿಸಿದ ಗೃಹಸಚಿವ ಪರಮೇಶ್ವರ್, ಕನ್ನಡ ಹಾಗೂ ರೈತ ಚಳವಳಿಗಾರರ ಮೇಲಿನ ಪ್ರಕರಣಗಳನ್ನು ಹಿಂತೆಗೆದುಕೊಳ್ಳುವ ಪ್ರಸ್ತಾಪ ಸರ್ಕಾರದ ಮುಂದಿದ್ದು, ಶೀಘ್ರದಲ್ಲೇ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಇದೇ ವೇಳೆ ಸಾಮಾಜಿಕ ಜಾಲತಾಣಗಳಲ್ಲಿ ಹೋರಾಟಗಾರರು ಹಾಗೂ ಗಣ್ಯ ವ್ಯಕ್ತಿಗಳ ವಿರುದ್ಧ ಬೆದರಿಕೆ, ಅವಹೇಳನ ಮತ್ತು ಮಹಿಳೆಯರ ಕುರಿತು ಅಸಭ್ಯ ನಿಂದನೆಗಳು ಹೆಚ್ಚುತ್ತಿರುವ ಬಗ್ಗೆ ಗಮನ ಸೆಳೆದರು. ಈ ರೀತಿಯ ವಿಕೃತ ಚಟುವಟಿಕೆಗಳ ಮೂಲವನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಗೃಹಸಚಿವ ಪರಮೇಶ್ವರ್, ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ದುರ್ಬಳಕೆಯನ್ನು ನಿಯಂತ್ರಿಸಲು ಸೂಕ್ತ ಕ್ರಮಗಳು ಹಾಗೂ ನಿಯಮಾವಳಿಗಳನ್ನು ರೂಪಿಸಲಾಗುವುದಾಗಿ ಭರವಸೆ ನೀಡಿದರು.
ENGLISH SUMMARY…
Mysuru, May 5: A representation was submitted to Karnataka Home Minister G. Parameshwara urging withdrawal of cases filed against pro-Kannada activists.
It was highlighted that despite repeated assurances by Chief Minister Siddaramaiah, the decision has not yet been implemented. The minister assured that the proposal to withdraw cases against Kannada and farmers’ activists will soon be placed before the Cabinet.
Concerns were also raised over rising online abuse, threats, and defamatory content targeting activists and women on social media. The Home Minister responded positively, assuring appropriate legal measures and guidelines to curb such activities.
Key words: Minister, G. Parameshwar, withdrawal, cases, against, pro-Kannada activists.
The post ಗೃಹ ಸಚಿವರ ಭೇಟಿ: ಕನ್ನಡ ಪರ ಹೋರಾಟಗಾರರ ವಿರುದ್ದದ ಕೇಸ್ ಹಿಂಪಡೆಯಲು ಮನವಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




