ಬೆಂಗಳೂರು,ಏಪ್ರಿಲ್,25,2026 (www.justkannada.in): ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತನಗೆ ವಿಧಿಸಿರುವ ಜೀವಾವಧಿ ಶಿಕ್ಷೆ ಪ್ರಶ್ನಿಸಿ ಅಪರಾಧಿ ವಿನಯ್ ಕುಲಕರ್ಣಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನೀಡಿರುವ ಜೀವಾವಧಿ ಶಿಕ್ಷೆಗೆ ತಡೆ ಕೋರಿ ಅಪರಾಧಿ ವಿನಯ್ ಕುಲಕರ್ಣಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಈ ಮೇಲ್ಮನವಿ ಅರ್ಜಿ ಸೋಮವಾರ ವಿಚಾರಣೆಗೆ ಬರುವ ಸಾಧ್ಯತೆ ಇದೆ.
ಇತ್ತೀಚೆಗೆ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 17 ಮಂದಿ ಆರೋಪಿಗಳನ್ನ ಅಪರಾಧಿ ಎಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿತ್ತು.
Key words: Vinay Kulkarni, High Court, challenging, life sentence
The post ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




