10
March, 2026

A News 365Times Venture

10
Tuesday
March, 2026

A News 365Times Venture

ಡಿಕೆ ಶಿವಕುಮಾರ್ ಔತಣಕೂಟಕ್ಕೆ ಪರಮೇಶ್ವರ್ ಗೈರಾಗಿದ್ದಕ್ಕೆ ಸ್ಪಷ್ಟನೆ ಕೊಟ್ಟ ಸಚಿವ ಎಂ.ಬಿ ಪಾಟೀಲ್

Date:

ಬೆಂಗಳೂರು,ಮಾರ್ಚ್, 15,2025 (www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಐದು ವರ್ಷ ಅವಧಿ ಪೂರೈಸಿದ ಅಂಗವಾಗಿ ಪಕ್ಷದ ಶಾಸಕರಿಗೆ ಆಯೋಜಿಸಿದ್ದ ಔತಣಕೂಟಕ್ಕೆ ಗೃಹ ಸಚಿವ ಪರಮೇಶ್ವರ್ ಗೈರಾಗಿದಕ್ಕೆ ಸಚಿವ ಎಂ.ಬಿ ಪಾಟೀಲ್ ಕಾರಣ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಎಂ.ಬಿ ಪಾಟೀಲ್,  ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಐದು ವರ್ಷ ಅವಧಿ ಪೂರೈಸಿದ ಅಂಗವಾಗಿ ಪಕ್ಷದ ಶಾಸಕರಿಗೆ ಭೋಜನಾ ವ್ಯವಸ್ಥೆ ಮಾಡಿದ್ದರು. ಪರಮೇಶ್ವರ್‌ ಹೊರತುಪಡಿಸಿ ಎಲ್ಲರೂ ಅದರಲ್ಲಿ ಭಾಗವಹಿಸಿದ್ದರು. ಪರಮೇಶ್ವರ್‌ ಅವರ ಕಡೆಯ ವ್ಯಕ್ತಿಯೊಬ್ಬರು ನಿಧನರಾಗಿದ್ದರು. ಈ ಕಾರಣಕ್ಕಾಗಿ ಅವರು ಔತಣಕೂಟದಲ್ಲಿ ಭಾಗವಹಿಸಿರಲಿಲ್ಲ ಎಂದು ಸ್ಪಷ್ಟಪಡಿಸಿದರು.

ಇನ್ನು ಡಿ.ಕೆ.ಶಿವಕುಮಾರ್‌ರವರ ಔತಣಕೂಟಕ್ಕೆ ಸಚಿವ ಸತೀಶ್‌ ಜಾರಕಿಹೊಳಿ, ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಭಾಗವಹಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಇದ್ದರು. ಮತ್ತೆ ಇನ್ನ್ಯಾವ ಬೇಗುದಿ ಇರಲು ಸಾಧ್ಯ. ಕಾಂಗ್ರೆಸ್‌‍ ನಲ್ಲಿ ಯಾವುದೇ ಬೇಗುದಿಯಿಲ್ಲ ಎಂದು ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.

ಅಧಿವೇಶನ ನಡೆದಾಗ ಸಾಮಾನ್ಯವಾಗಿ ಸಚಿವರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರು ಭೋಜನಾ ಕೂಟ ಆಯೋಜಿಸುತ್ತಾರೆ. ನಾನೂ ಕೂಡ ಹಲವು ಬಾರಿ ಭೋಜನಾಕೂಟ ಆಯೋಜಿಸಿದ್ದೇನೆ. ಅದರಲ್ಲಿ ವಿಶೇಷ ಏನಿಲ್ಲ ಎಂದರು.

Key words: Minister, M.B. Patil, Parameshwar, absence, DK Shivakumar, dinner party

The post ಡಿಕೆ ಶಿವಕುಮಾರ್ ಔತಣಕೂಟಕ್ಕೆ ಪರಮೇಶ್ವರ್ ಗೈರಾಗಿದ್ದಕ್ಕೆ ಸ್ಪಷ್ಟನೆ ಕೊಟ್ಟ ಸಚಿವ ಎಂ.ಬಿ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

MUDA ಪ್ರಕರಣ: ದಿನೇಶ್ ಕುಮಾರ್ ವಿರುದ್ದ ವಿಚಾರಣೆಗೆ ತಡೆ ನೀಡಿದ ಹೈಕೋರ್ಟ್

ಬೆಂಗಳೂರು,ಮಾರ್ಚ್,10,2026 (www.justkannada.in):  ಮುಡಾ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ  ಹಗರಣಕ್ಕೆ ಸಂಬಂಧಿಸಿದಂತೆ  ಮಾಜಿ...

ಎಪಿಎಂಸಿಗಳಲ್ಲಿ 70 ಲಕ್ಷ ಕೋಟಿ ರೂ. ವಹಿವಾಟು ನಡೆದಿದೆ: ಸಚಿವ ಶಿವಾನಂದ ಪಾಟೀಲ್

ಬೆಂಗಳೂರು,ಮಾರ್ಚ್,10,2026 (www.justkannada.in):  ಪ್ರಸಕ್ತ ಹಣಕಾಸು ವರ್ಷದ ಜನವರಿ ಅಂತ್ಯಕ್ಕೆ ರಾಜ್ಯದ ಎಪಿಎಂಸಿಗಳಲ್ಲಿ...

14 ವರ್ಷದ ಹೆಣ್ಣು ಮಕ್ಕಳಿಗೆ ‘HPV ಲಸಿಕಾ’ ಅಭಿಯಾನ

ಮೈಸೂರು, ಮಾರ್ಚ್,10,2026 (www.justkannada.in): HPV ಲಸಿಕೆಯು ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಸೋಂಕುಗಳಿಂದ...

ಕೃಷಿ ಕ್ಷೇತ್ರದಲ್ಲಿ AI ಬಳಕೆ ಅಗತ್ಯ : ವಿಟಿಯು ಕುಲಪತಿ ಎಸ್. ವಿದ್ಯಾಶಂಕರ್

  ಮೈಸೂರು, ಮಾ.೧೦,೨೦೨೬ : ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕೃತಕ ಬುದ್ಧಿಮತ್ತೆ...