24
August, 2026

A News 365Times Venture

24
Monday
August, 2026

A News 365Times Venture

ತಮಿಳುನಾಡಿಗೆ ನೀರು: ಕಬಿನಿ ಡ್ಯಾಂ ಬಳಿ ರೈತರ ಪ್ರತಿಭಟನೆ, ಮುತ್ತಿಗೆಗೆ ಯತ್ನ

Date:

ಮೈಸೂರು,ಆಗಸ್ಟ್,22,2026 (www.justkannada.in):  ತಮಿಳುನಾಡಿಗೆ ನಿತ್ಯ ನೀರು ಹರಿಸುವ ಮೂಲಕ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಪಾಲಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ರೈತರ ಆಕ್ರೋಶ ಭುಗಿಲೆದ್ದಿದೆ.

ಪ್ರತಿನಿತ್ಯ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲ್ಲೂಕು ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದ ನೀರಿನ ಮಟ್ಟ 10 ಅಡಿ ಕುಸಿದಿದೆ. 10 ಅಡಿ ನೀರು ಖಾಲಿಯಾದ ಮೇಲೆ ಎಚ್ಚೆತ್ತ ರೈತರು ಹಾಗೂ ಜನರು ಇದೀಗ ಪ್ರತಿಭಟನೆಗಿಳಿದಿದ್ದು ಕೋಟೆ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದಂತಾಗಿದೆ.

ಕಬಿನಿ ಜಲಾಶಯದ ಬಳಿ ಸಾವಿರಾರು ರೈತರ ಪ್ರತಿಭಟನೆ ನಡೆಸುತ್ತಿದ್ದು ಕಬಿನಿ ಡ್ಯಾಂಗೆ ಮುತ್ತಿಗೆ ಹಾಕಲು‌ ಮುಂದಾದರು. ತಮಿಳುನಾಡಿಗೆ ನೀರು ಹರಿಸುವುದನ್ನ ನಿಲ್ಲಿಸಿ ಎಂದು ರಾಜ್ಯಸರ್ಕಾರ, ತಮಿಳುನಾಡು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಸಿಎಂ  ಡಿ.ಕೆ.ಶಿವಕುಮಾರ್,  ತಮಿಳುನಾಡು ಜೋಸೆಫ್ ವಿಜಯ್ ವಿರುದ್ಧ ಕಿಡಿಕಾರಿರುವ ಪ್ರತಿಭಟನಾಕಾರರು ರೈತರ ಹಿತ ಕಾಪಾಡಿ, ಕುಡಿಯಲು ನೀರು ಉಳಿಸಿ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Key words: Water, Tamil Nadu,  Farmers,  protest, Kabini Dam

The post ತಮಿಳುನಾಡಿಗೆ ನೀರು: ಕಬಿನಿ ಡ್ಯಾಂ ಬಳಿ ರೈತರ ಪ್ರತಿಭಟನೆ, ಮುತ್ತಿಗೆಗೆ ಯತ್ನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸದನದಲ್ಲಿ ಸದ್ದು ಮಾಡಿದ ಅದಾನಿ-ಸಿಎಂ ಡಿಕೆಶಿ ಭೇಟಿ ವಿಚಾರ: ಆರ್.ಅಶೋಕ್ ವ್ಯಂಗ್ಯ

ಬೆಂಗಳೂರು,ಆಗಸ್ಟ್,24,2026 (www.justkannada.in):  ಉದ್ಯಮಿ ಗೌತಮ್ ಅದಾನಿ ಹಾಗೂ ಸಿಎಂ ಡಿಕೆ ಶಿವಕುಮಾರ್...

ತಮಿಳುನಾಡಿಗೆ ಹರಿದ ನೀರು: ಕಬಿನಿ ಡ್ಯಾಂ ಖಾಲಿ : ಇಂದು ರೈತರಿಂದ ಹೋರಾಟ

ಮೈಸೂರು,ಆಗಸ್ಟ್,24,2026 (www.justkannada.i):  ಕಾವೇರಿ ನದಿ ನೀರು ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಲೇ ಇದ್ದು...

VTU ಬೆಂಗಳೂರು ಕೇಂದ್ರಕ್ಕೆ ಜಪಾನ್ ನಿಯೋಗ ಭೇಟಿ, ಚರ್ಚೆ

ಬೆಂಗಳೂರು,ಆಗಸ್ಟ್,24,2026 (www.justkannada.in): ಕೈಗಾರಿಕೆ–ಶೈಕ್ಷಣಿಕ ಸಂಸ್ಥೆಗಳ ಸಹಭಾಗಿತ್ವದ ಅವಕಾಶಗಳನ್ನು ಅನ್ವೇಷಿಸ ಸಲುವಾಗಿ ಜಪಾನ್‌ನ...

KSOU ಬಿಒಎಂ ನೇಮಕಕ್ಕೆ ರಾಜಕೀಯ ಲೆಕ್ಕಾಚಾರ : ಸಾಮಾಜಿಕ ನ್ಯಾಯದ ಸಮೀಕರಣದಲ್ಲಿ ತಿಮ್ಮಯ್ಯ–ಶಿವಕುಮಾರ್ ಹೆಸರು!

ಮೈಸೂರು, ಆ.೨೨,೨೦೨೬: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಬೋರ್ಡ್ ಆಫ್ ಮ್ಯಾನೇಜ್‌ಮೆಂಟ್‌...