4
May, 2026

A News 365Times Venture

4
Monday
May, 2026

A News 365Times Venture

ದ್ವಿತೀಯ ಪಿಯುಸಿ ಫಲಿತಾಂಶ: ಶೇ 73.45ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ: ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..

Date:

ಬೆಂಗಳೂರು, ಏಪ್ರಿಲ್, 8, 2025 (www.justkannada.in): 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು  ಶೇ 73.45ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ.  ಉಡುಪಿ ಜಿಲ್ಲೆ 93.90 ಶೇಕಾಡ ಫಲಿತಾಂಶ ಪಡೆದು ಮೊದಲ ಸ್ಥಾನದಲ್ಲಿದೆ. ದಕ್ಷಿಣ ಕನ್ನಡ ಜಿಲ್ಲೆ 93.57, ಬೆಂಗಳೂರು ದಕ್ಷಿಣ 85.36, ಕೊಡಗು ಜಿಲ್ಲೆ 83.84ರಷ್ಟು ಫಲಿತಾಂಶ, ಬೆಂಗಳೂರು ಉತ್ತರ 83.31, ಉತ್ತರ ಕನ್ನಡ ಜಿಲ್ಲೆ 82.93ರಷ್ಟು ಫಲಿತಾಂಶ ಬಂದಿದೆ. ಯಾದಗಿರಿ ಜಿಲ್ಲೆಯು ಶೇ.48.45 ಫಲಿತಾಂಶ ಪಡೆದು ಕೊನೆಯ ಸ್ಥಾನದಲ್ಲಿದೆ.

6,37,805 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಿದ್ದರು. ಈ ಪೈಕಿ 4,68,439 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟಾರೆ ಶೇಕಡಾ 73.45ರಷ್ಟು ಫಲಿತಾಂಶ ಬಂದಿದೆ. ಕಲಾ ವಿಭಾಗದಲ್ಲಿ ಶೇಕಡಾ 53.29ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇಕಡಾ 76.07ರಷ್ಟು ಹಾಗೂ ವಿಜ್ಞಾನ ವಿಭಾಗದಲ್ಲಿ ಶೇಕಡಾ 82.54ರಷ್ಟು ವಿದ್ಯಾರ್ಥಿಗಳು  ಉತ್ತೀರ್ಣರಾಗಿದ್ದಾರೆ.

 ರಾಜ್ಯಕ್ಕೆ ಟಾಪರ್ಸ್ ಇವರೇ ನೋಡಿ..

ದಕ್ಷಿಣ ಕನ್ನಡದ ಎಕ್ಸ್​ಪರ್ಟ್​ ಪಿಯು ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯ ಕಾಮತ್ ವಿಜ್ಞಾನ ವಿಭಾಗದಲ್ಲಿ 600ಕ್ಕೆ 599 ಅಂಕ ಗಳಿಸಿ ಮೊದಲ ಸ್ಥಾನ ಪಡೆದಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ದೀಪಶ್ರೀ 600 ಕ್ಕೆ ‌ 599 ಅಂಕಗಳನ್ನು ಪಡೆದು ಮೊದಲ ಸ್ಥಾನದಲ್ಲಿದ್ದು ದಕ್ಷಿಣ ಕನ್ನಡದ ಕೆನಾರ ಪಿಯು ಕಾಲೇಜು‌ ವಿದ್ಯಾರ್ಥಿನಿಯಾಗಿದ್ದಾರೆ.

ಕಲಾ ವಿಭಾಗದಲ್ಲಿ ಸಂಜನಾ ಬಾಯಿ ಪ್ರಥಮ ಸ್ಥಾನ ಪಡೆದಿದ್ದಾರೆ.ಬಳ್ಳಾರಿ ಜಿಲ್ಲೆಯ ಇಂದು ಪಿಯು ಕಾಲೇಜು ವಿದ್ಯಾರ್ಥಿನಿಯಾಗಿದ್ದು, 600 ಕ್ಕೆ ‌597 ಅಂಕ ಪಡೆದಿದ್ದಾರೆ.

ಜಿಲ್ಲೆವಾರು  ಫಲಿತಾಂಶ ಹೀಗಿದೆ..

1. ಉಡುಪಿ  93.90
2. ದ.ಕನ್ನಡ  93.57
3. ಬೆಂಗಳೂರು ದಕ್ಷಿಣ  85.36
4. ಕೊಡಗು  83.84
5. ಬೆಂಗಳೂರು ಉತ್ತರ  83.31
6. ಉತ್ತರ ಕನ್ನಡ  82.93
7. ಶಿವಮೊಗ್ಗ  79.91
8. ಬೆಂಗಳೂರು ಗ್ರಾ.  79.70
9. ಚಿಕ್ಕಮಗಳೂರು 79.56
10. ಹಾಸನ 77.56
11. ಚಿಕ್ಕಬಳ್ಳಾಪುರ 75.80
12. ಮೈಸೂರು 74.30
13. ಚಾಮರಾಜನಗರ 73.97
14. ಮಂಡ್ಯ 73.27
15. ಬಾಗಲಕೋಟೆ 72.83
16. ಕೋಲಾರ 72.45
17. ಧಾರವಾಡ 72.32
18. ತುಮಕೂರು 72.02
19. ರಾಮನಗರ 69.71
20. ದಾವಣಗೆರೆ 69.45
21. ಹಾವೇರಿ 67.56
22. ಬೀದರ್​ 67.31
23. ಕೊಪ್ಪಳ 67.20
24. ಚಿಕ್ಕೋಡಿ 66.76
25. ಗದಗ 66.64
26. ಬೆಳಗಾವಿ 65.37
27. ಬಳ್ಳಾರಿ 64.41
28. ಚಿತ್ರದುರ್ಗ 59.87
29. ವಿಜಯಪುರ 58.81
30. ರಾಯಚೂರು 58.75
31. ಕಲಬುರುಗಿ 55.70
32. ಯಾದಗಿರಿ 48.45

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2025 ಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳು ಪಿಯುಸಿ ಫಲಿತಾಂಶವನ್ನು karresults.nic.inನಲ್ಲಿ ಮಧ್ಯಾಹ್ನ 1.30ರ ಬಳಿಕ ವೀಕ್ಷಿಸಬಹುದು.

Key words: Secondary PUC, Result, 73.45 % Students, Passed

The post ದ್ವಿತೀಯ ಪಿಯುಸಿ ಫಲಿತಾಂಶ: ಶೇ 73.45ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ: ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗೆಲ್ಲುವ ಕಡೆ ಜಮೀರ್, ಸೋಲುವ ಕಡೆ ಡಿಕೆಶಿ ಕಳಿಸ್ತಾರೆ- ಆರ್.ಅಶೋಕ್ ಲೇವಡಿ

ಬೆಂಗಳೂರು,ಮೇ,4,2026 (www.justkannada.in):  ಗೆಲ್ಲುವ ಕಡೆ ಜಮೀರ್ ರನ್ನು ಸೋಲುವ ಕಡೆ ಡಿಕೆ...

ಕೆ.ಸಿ ರೆಡ್ಡಿ ಅವರು ಒಬ್ಬ ಸಮರ್ಥ, ಪ್ರಾಮಾಣಿಕ  ಆಡಳಿತಗಾರರಾಗಿದ್ದರು:ಸಿಎಂ  ಸಿದ್ದರಾಮಯ್ಯ

ಬೆಂಗಳೂರು, ಮೇ,04,2026 (www.justkannada.in):  ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ ರೆಡ್ಡಿಯವರು ಒಬ್ಬ...

ಬಾಗಲಕೋಟೆ ಬೈ ಎಲೆಕ್ಷನ್: ‘ಕೈ’ ಅಭ್ಯರ್ಥಿ ಉಮೇಶ ಮೇಟಿಗೆ ಭರ್ಜರಿ ಜಯ

ಬಾಗಲಕೋಟೆ,ಮೇ,4,2026 (www.justkannada.in):  ಬಾಗಲಕೋಟೆ ವಿಧಾನಸಭಾ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ...

ಸಿದ್ದರಾಮಯ್ಯ ಜನಪ್ರಿಯತೆ, ಗ್ಯಾರಂಟಿ ನಮ್ಮ ಕೈಹಿಡಿದಿದೆ – ಸಚಿವ ಆರ್.ಬಿ ತಿಮ್ಮಾಪುರ

ಬಾಗಲಕೋಟೆ,ಮೇ,4,2026 (www.justkannada.in):  ಬಾಗಲಕೋಟೆ ಉಪಚುನಾವಣೆ ಫಲಿತಾಂಶ ಪ್ರಕಟ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ...