ಬೆಂಗಳೂರು,ಜೂನ್,13,2025 (www.justkannada.in): ತಮಿಳಿನಿಂದ ಕನ್ನಡ ಭಾಷೆ ಹುಟ್ಟಿತು ಎಂದು ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿರುವ ನಟ ಕಮಲ್ ಹಾಸನ್ ನಟಿಸಿರುವ ‘ಥಗ್ ಲೈಫ್’ ಸಿನಿಮಾಕ್ಕೆ ಕರ್ನಾಟಕದಲ್ಲಿ ಅನಧಿಕೃತ ನಿಷೇಧ ಹೇರಲಾಗಿದೆ. ಥಗ್ ಲೈಫ್’ ಸಿನಿಮಾ ರಿಲೀಸ್ಗೆ ಭದ್ರತೆ ಕೋರಿ ಕಮಲ್ ಹಾಸನ್ ಅವರು ಕರ್ನಾಟಕ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಕಮಲ್ ಹಾಸನ್ ನಟನೆಯ ‘ಥಗ್ ಲೈಫ್’ ಚಿತ್ರದ ವಿತರಣೆ ಮತ್ತು ಬಿಡುಗಡೆಗೆ ಬೇಕಾದ ಸೌಲಭ್ಯಗಳನ್ನು ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿ ಎಂದು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇಂದು ವಿಚಾರಣೆ ನಡೆಸಿತು. ಹೈಕೋರ್ಟ್ನ ಏಕ ಸದಸ್ಯ ಪೀಠದ ನ್ಯಾಯಮೂರ್ತಿ ಎಂ. ನಾಗ ಪ್ರಸನ್ನ ಅವರು ಅರ್ಜಿ ವಿಚಾರಣೆ ವೇಳೆ, ಕಮಲ್ ಹಾಸನ್ ಇನ್ನೂ ಕ್ಷಮೆ ಕೇಳಿಲ್ಲವೇ? ಸುಪ್ರೀಂ ಕೋರ್ಟ್ ಏನಾಯಿತು ಎಂದು ಕಮಲ್ ಪರ ವಕೀಲರಿಗೆ ಪ್ರಶ್ನಿಸಿತು.
ಕನ್ನಡ ಸಾಹಿತ್ಯ ಪರಿಷತ್ ಪ್ರತಿನಿಧಿಸಿರುವ ಹಿರಿಯ ವಕೀಲ ಎಸ್ ಬಸವರಾಜು, ಕ್ಷಮೆ ಕೇಳಿಲ್ಲ. ಸುಪ್ರೀಂ ಕೋರ್ಟ್ ಇಂದು ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆಯಷ್ಟೇ ಎಂದು ಪೀಠದ ಗಮನಕ್ಕೆ ತಂದರು. ವಾದ ಆಲಿಸಿದ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಜೂನ್ 20 ಕ್ಕೆ ಮುಂದೂಡಿದೆ.
Key words: Kamal Haasan, apologize, High Court, Petition, hearing
The post ನಟ ಕಮಲ್ ಹಾಸನ್ ಇನ್ನೂ ಕ್ಷಮೆ ಕೇಳಿಲ್ವಾ ? ಹೈಕೋರ್ಟ್ ಪ್ರಶ್ನೆ : ಅರ್ಜಿ ವಿಚಾರಣೆ ಮುಂದೂಡಿಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




