10
March, 2026

A News 365Times Venture

10
Tuesday
March, 2026

A News 365Times Venture

ನಾಲ್ಕು ಹುಲಿಗಳ ಅಸಹಜ ಸಾವು: ತನಿಖೆಗೆ ಆದೇಶಿಸಿದ  ಸಚಿವ ಈಶ್ವರ ಖಂಡ್ರೆ’

Date:

ಬೆಂಗಳೂರು,ಜೂನ್,26,2025 (www.justkannada.in):  ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ನಾಲ್ಕು ಹುಲಿಗಳ ಅಸಹಜ ಸಾವಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್  ಖಂಡ್ರೆ ಆದೇಶ ಹೊರಡಿಸಿದ್ದಾರೆ.

ಒಂದು ಹುಲಿ ಮತ್ತು ಮೂರು ಮರಿಗಳು ಅಸಜ ಸಾವಿಗೀಡಾಗಿದ್ದು, ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿರುವ ಸಚಿವ ಈಶ್ವರ್ ಖಂಡ್ರೆ, ಅರಣ್ಯದಲ್ಲಿ 4 ಹುಲಿಗಳು ಸಾವಿಗೀಡಾಗಿರುವುದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಅಳಿವಿನಂಚಿನಲ್ಲಿರುವ ಹುಲಿಗಳ ಸಂರಕ್ಷಣೆಗೆ ದಿ. ಪ್ರಧಾನಿ ಇಂದಿರಾಗಾಂಧಿ ಅವರು ಹುಲಿ ಯೋಜನೆ (ಪ್ರಾಜೆಕ್ಟ್ ಟೈಗರ್) ಆರಂಭಿಸಿದ ತರುವಾಯ ರಾಜ್ಯದಲ್ಲಿಯೂ ಹುಲಿಗಳ ಸಂರಕ್ಷಣೆಗೆ ಕ್ರಮ ವಹಿಸಲಾಗಿದ್ದು, 563 ಹುಲಿಗಳೊಂದಿಗೆ ಕರ್ನಾಟಕ ದೇಶದಲ್ಲೇ 2ನೇ ಸ್ಥಾನದಲ್ಲಿದೆ. ಹುಲಿ ಸಂರಕ್ಷಣೆಗೆ ಹೆಸರಾಗಿರುವ ರಾಜ್ಯದಲ್ಲಿ, ಒಂದೇ ದಿನ 4 ಹುಲಿಗಳು ಅಸಹಜ ಸಾವಿಗೀಡಾಗಿರುವುದು ಅತ್ಯಂತ ನೋವು ತಂದಿದೆ. ಕೂಡಲೇ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಿ, ಸ್ಥಳ ತನಿಖೆ ಕೈಗೊಂಡು, ಅರಣ್ಯ ಸಿಬ್ಬಂದಿ ನಿರ್ಲಕ್ಷ್ಯ ಇದ್ದರೆ ಅವರ ವಿರುದ್ಧ ಅಥವಾ ವಿದ್ಯುತ್ ಸ್ಪರ್ಶ, ವಿಷ ಪ್ರಾಷನ ಇತ್ಯಾದಿ ಸಾವಿಗೆ ಕಾರಣವಾಗಿದ್ದರೆ ಅದಕ್ಕೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕ್ರಮ ವಹಿಸುವಂತೆ ಸೂಚನೆ ನೀಡಿದ್ದಾರೆ.vtu

Key words: ‘Unnatural death, four tigers, Minister, Eshwar Khandre , investigation

The post ನಾಲ್ಕು ಹುಲಿಗಳ ಅಸಹಜ ಸಾವು: ತನಿಖೆಗೆ ಆದೇಶಿಸಿದ  ಸಚಿವ ಈಶ್ವರ ಖಂಡ್ರೆ’ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಡಿಕೆಶಿ ಅತ್ಯಂತ ಯಶಸ್ವಿ ಅಧ್ಯಕ್ಷರು: ಪಕ್ಷ ಅಧಿಕಾರಕ್ಕೆ ತರುವುದೇ ಅವರ ಕನಸಾಗಿತ್ತು- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು,ಮಾರ್ಚ್,10,2026 (www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ 6 ವರ್ಷ ಪೂರೈಸಿದ್ದು...

ಕಲ್ಯಾಣ ಕರ್ನಾಟಕ ಭಾಗದಲ್ಲಿ ವಿಮಾನ ನಿಲ್ದಾಣ: ಸಭೆ ಮಾಡಿ ಅಂತಿಮ ನಿರ್ಧಾರ- ಎಂ.ಬಿ ಪಾಟೀಲ್

ಬೆಂಗಳೂರು,ಮಾರ್ಚ್,10,2026 (www.justkannada.in): ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಳ್ಳಾರಿ, ವಿಜಯನಗರ ಮತ್ತು ಕೊಪ್ಪಳ...

ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ಕೇಂದ್ರ ಸಚಿವರಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,10,2026 (www.justkannada.in):  ಮಧ್ಯಪ್ರಾಚ್ಯ ದೇಶಗಳಲ್ಲಿ ಸಂಘರ್ಷ ಪರಿಸ್ಥಿತಿಯ ಬಿಸಿ ಭಾರತಕ್ಕೂ ತಟ್ಟಿದ್ದು...

ನಾಳೆ ಸರ್ಕಾರಿ ವೈದ್ಯರು ಸಿಬ್ಬಂದಿಗಳ ಮುಷ್ಕರ: ಸಂಧಾನ ಸಭೆಗೆ ಮುಂದಾದ ಸಿಎಂ

ಬೆಂಗಳೂರು,ಮಾರ್ಚ್,10,2026 (www.justkannada.in):  ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆಯಿಂದ  ಆರೋಗ್ಯ ಇಲಾಖೆಯ...