26
June, 2026

A News 365Times Venture

26
Friday
June, 2026

A News 365Times Venture

ನೆಹರು ಹಾಕಿದ ಅಡಿಪಾಯಗಳಿಂದ ಭಾರತ ವಿಶ್ವದ ಐದನೇ ದೊಡ್ಡ ಆರ್ಥಿಕ ಶಕ್ತಿಯಾಗಿದೆ: ಸಿ.ಎಂ ಸಿದ್ದರಾಮಯ್ಯ

Date:

ಬೆಂಗಳೂರು ಮೇ, 27,2025 (www.justkannada.in):  ನೆಹರು ಹಾಕಿದ ಅಡಿಪಾಯಗಳಿಂದ ಭಾರತ ವಿಶ್ವದ ಐದನೇ ದೊಡ್ಡ ಆರ್ಥಿಕ ಶಕ್ತಿಯಾಗಿದೆ. ಅಪಾರ ಶಿಕ್ಷಣ ಮತ್ತು ಜ್ಞಾನ ಹೊಂದಿದ್ದ ನೆಹರು ಆಧುನಿಕ‌ ಭಾರತದ ನಿರ್ಮಾಣಕ್ಕೆ ಭದ್ರವಾದ ಅಡಿಪಾಯ ಹಾಕಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವರಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಆಧುನಿಕ ಭಾರತದ ನಿರ್ಮಾತೃ ಜವಾಹರಲಾಲ್ ನೆಹರೂ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ದೇಶದಲ್ಲಿ ಭಾರತೀಯರ ಕಣ್ಣೀರು ಒರೆಸುವ, ನೋವುಗಳಿಗೆ ಪರಿಹಾರ ಒದಗಿಸುವುದು ನಮ್ಮ ಕೆಲಸ ಎಂದು ಆರಂಭದಲ್ಲಿ ಘೋಷಣೆ ಮಾಡಿ ನೆಹರೂ ದೇಶ ನಿರ್ಮಾಣದಲ್ಲಿ ತೊಡಗಿಸಿಕೊಂಡರು ಎಂದು ಸಿಎಂ ಸಿದ್ದರಾಮಯ್ಯ ವಿವರಿಸಿದರು.

ಬ್ರಿಟೀಷರು ಲೂಟಿ ಮಾಡಿದ್ದ ದೇಶದಲ್ಲಿ ಯಾವ ಸವಲತ್ತುಗಳೂ ಇರಲಿಲ್ಲ. ಅಂಥಾ ಹೊತ್ತಲ್ಲಿ ಪ್ರಧಾನಿಯಾಗಿ ದೇಶದ ಚುಕ್ಕಾಣಿ ಹಿಡಿದ ನೆಹರೂ ದೇಶವನ್ನು ದಶ ದಿಕ್ಕುಗಳಿಂದ ಕಟ್ಟಿ ನಿಲ್ಲಿಸಿದ್ದರು. ಅಪಾರ ಶ್ರೀಮಂತ ಕುಟುಂಬದ ನೆಹರೂ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿ ದೇಶದ ಪ್ರತಿಯೊಂದು ಕ್ಷೇತ್ರಗಳೂ ಪ್ರಗತಿ ಪಥದಲ್ಲಿ ಸಾಗುವಂತೆ ನೋಡಿಕೊಂಡಿದ್ದರು ಎಂದು  ಸಿಎಂ ಸಿದ್ದರಾಮಯ್ಯ ವಿವರಿಸಿದರು.vtu

ಆಹಾರ ಕ್ರಾಂತಿ, ಹಸಿರು ಕ್ರಾಂತಿಯ ಜೊತೆಗೆ ವಿಜ್ಞಾನ-ತಂತ್ರಜ್ಞಾನದ ಪ್ರಗತಿಗೆ ಕಾರ್ಯಕ್ರಮಗಳು, ತಾಂತ್ರಿಕ‌ ವಿಶ್ವ ವಿದ್ಯಾನಿಲಯಗಳನ್ನು ಸ್ಥಾಪಿಸುವ ಮೂಲಕ , ತಾಂತ್ರಿಕ ಕ್ಷೇತ್ರ ಪ್ರಗತಿ ಮೂಲಕ ವೈಜ್ಞಾನಿಕ ಭಾರತದ ನಿರ್ಮಾತೃ ಕೂಡ ಆದ ನೆಹರೂ ಅವರ ಕೊಡುಗೆಯನ್ನು ಬಿಜೆಪಿ , RSS ಎಷ್ಟೇ ಅಳಿಸಲು ಹೆಣಗಾಡಿದರೂ ಅದು ಸಾಧ್ಯವಾಗುತ್ತಿಲ್ಲ ಎಂದರು.

ಸ್ವಾತಂತ್ರ್ಯ ಹೋರಾಟದಲ್ಲೇ ಭಾಗವಹಿಸದೆ ಬ್ರಿಟೀಷರ ಜೊತೆಗಿದ್ದ RSS, BJP ಯವರು ಈಗ ದೇಶಭಕ್ತಿ ಬಗ್ಗೆ ಬರಿ ಭಾಷಣ ಮಾಡುವುದು ಡೋಂಗಿತನ ಎಂದು ಟೀಕಿಸಿದರು.

ಪ್ರಜಾಪ್ರಭುತ್ವ, ಸಂಸದೀಯ ವ್ಯವಸ್ಥೆಯಲ್ಲಿ, ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲದ ಬಿಜೆಪಿಯವರು ಸಾಮಾಜಿಕ ನ್ಯಾಯದ ಪರವಾಗಿದ್ದ ಅಂಬೇಡ್ಕರ್, ನೆಹರೂ ಬಗ್ಗೆ ಬಿಜೆಪಿ, RSS ಸಹಸ್ರ ಸಹಸ್ರ ಸುಳ್ಳುಗಳನ್ನು ಸೃಷ್ಟಿಸುತ್ತಿದೆ ಎಂದರು.

ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಡಾಂಗೆ ಮತ್ತು ಸಾವರ್ಕರ್ ಎಂದು ಸ್ವತಃ ಅಂಬೇಡ್ಕರ್ ಅವರೇ ತಮ್ಮದೇ ಹಸ್ತಾಕ್ಷರದಲ್ಲಿ ಪತ್ರ ಬರೆದಿದ್ದಾರೆ. ಆದರೂ ಬಿಜೆಪಿ, RSS ಅಂಬೇಡ್ಕರ್ ಸೋಲಿಗೆ ಕಾಂಗ್ರೆಸ್ ಕಾರಣ ಎಂದು ಹಸಿ ಹಸಿ ಸುಳ್ಳುಗಳನ್ನು ಹಂಚುತ್ತಾ ತಿರುಗುತ್ತಿದ್ದಾರೆ ಎಂದರು.

ಬಿಜೆಪಿಗೆ ಗೊತ್ತಿರುವುದು ಬರಿ ಹಿಂಸೆ ಮತ್ತು ಸುಳ್ಳು

ಬಿಜೆಪಿಗೆ ಗೊತ್ತಿರುವುದು ಬರಿ ಹಿಂಸೆ ಮತ್ತು ಸುಳ್ಳು. ದಲಿತರು, ಶೂದ್ರರ ಮೇಲೆ ಕೇಸುಗಳು ಬೀಳುವಂತೆ ಮಾಡುವುದು ಇದೇ BJP ಮತ್ತು RSS. ಆಮೇಲೆ ಅವರನ್ನು ಜೈಲಿನಿಂದ ಕರೆದುಕೊಂಡು ಬರುವುದೂ ಇವರೇ. ಇದೇ ನಾಟಕ ಆಡಿಕೊಂಡೇ ಅವರು ಕಾಲ‌ಕಳೆಯುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದರು.

Key words: India, economic power, foundations, Nehru, CM Siddaramaiah

The post ನೆಹರು ಹಾಕಿದ ಅಡಿಪಾಯಗಳಿಂದ ಭಾರತ ವಿಶ್ವದ ಐದನೇ ದೊಡ್ಡ ಆರ್ಥಿಕ ಶಕ್ತಿಯಾಗಿದೆ: ಸಿ.ಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ್ರಕೃತಿ ವಿಕೋಪ ನಿರ್ವಹಣೆ: ಜಿಲ್ಲೆಗಳ ಮೇಲುಸ್ತುವಾರಿಗೆ ಸಚಿವರ ನೇಮಕ

ಬೆಂಗಳೂರು, ಜೂನ್, 24,2026 (www.justkannada.in):  ರಾಜ್ಯದಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ...

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ: ಅರುಣ್ ಯೋಗಿರಾಜ್ ಶಿಲ್ಪಕ್ಕೆ ಮೆಚ್ಚುಗೆ

ಮೈಸೂರು,ಜೂನ್,25,2026 (www.justkannada.in):  ನಗರದ ಜಿಲ್ಲಾಧಿಕಾರಿ (ಡಿಸಿ) ಕಚೇರಿ ಆವರಣದ ಬಳಿ ರಾಜ್ಯದ...

ವಿದ್ಯುತ್‌ ವಿತರಣೆಗೆ ಟಾಟಾ ಸಂಸ್ಥೆ ಪರವಾನಗಿ ಅರ್ಜಿ: ಸೆಸ್ಕ್‌ ನಿಂದ ಆಕ್ಷೇಪಣೆ ಸಲ್ಲಿಕೆ

ಮೈಸೂರು, ಜೂನ್. 25, 2026 (www.justkannada.in): ಟಾಟಾ ಪವರ್ ಕಂಪನಿ ಲಿಮಿಟೆಡ್...

ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್

ಕೊಪ್ಪಳ, ಜೂನ್,25,2026 (www.justkannada.in):  “ತುಂಗಭದ್ರಾ ನದಿ ಪಾತ್ರದ ರೈತರ ಹಿತರಕ್ಷಣೆಗೆ ಕರ್ನಾಟಕ,...