10
March, 2026

A News 365Times Venture

10
Tuesday
March, 2026

A News 365Times Venture

ಪಾಕಿಸ್ತಾನದ 16 ಯೂಟ್ಯೂಬ್ ಚಾನೆಲ್ ಗಳನ್ನು ಬ್ಯಾನ್ ಮಾಡಿದ ಕೇಂದ್ರ ಸರ್ಕಾರ

Date:

ನವದೆಹಲಿ,ಏಪ್ರಿಲ್,28,2025 (www.justkannada.in): ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ಬಳಿಕ ಪಾಕಿಸ್ತಾನದ ವಿರುದ್ದ ಹಲವು ಕಠಿಣ ಕ್ರಮಗಳನ್ನ ಕೈಗೊಂಡಿರುವ ಕೇಂದ್ರ ಸರ್ಕಾರ ಇದೀಗ ಮತ್ತೊಂದು ಮಾಸ್ಟರ್ ಸ್ಟ್ರೋಕ್ ನೀಡಿದೆ.

ಹೌದು, ಪಾಕಿಸ್ತಾನದ 16 ಯೂಟ್ಯೂಬ್ ಚಾನೆಲ್ ಗಳನ್ನು ಬಂದ್ ಮಾಡಿ ಕೇಂದ್ರ ಗೃಹ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಪಹಲ್ಗಾಮ್​ ನಲ್ಲಿ ನಡೆದ ಭಯೋತ್ಪಾದಕ ದಾಳಿ ಬಗ್ಗೆ ಸುಳ್ಳು ಸುದ್ದಿ, ತಪ್ಪು ಮಾಹಿತಿ ನೀಡಿ ಜನರ ಹಾದಿ ತಪ್ಪಿಸುತ್ತಿದ್ದ ಪಾಕಿಸ್ತಾನಿ ಯೂಟ್ಯೂಬ್​ ಚಾನೆಲ್ ಗಳನ್ನು ಭಾರತ ನಿಷೇಧಿಸಿದೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪ್ರಚೋದನಕಾರಿ ಮತ್ತು ಕೋಮು ಸೂಕ್ಷ್ಮ ವಿಷಯವನ್ನು ಹರಡಿದ್ದಕ್ಕಾಗಿ ಒಟ್ಟು 63 ಮಿಲಿಯನ್ ಚಂದಾದಾರರನ್ನು ಹೊಂದಿರುವ ಹದಿನಾರು ಪಾಕಿಸ್ತಾನಿ ಯೂಟ್ಯೂಬ್  ಚಾನೆಲ್ ಗಳನ್ನ ಬ್ಯಾನ್ ಮಾಡಿದೆ.

ನಿಷೇಧಿತ ಪ್ಲಾಟ್ ಫಾರ್ಮ್ ಗಳಲ್ಲಿ ಡಾನ್, ಸಮಾ ಟಿವಿ, ಎಆರ್ ವೈ ನ್ಯೂಸ್, ಬೋಲ್ ನ್ಯೂಸ್, ರಾಫ್ತಾರ್, ಜಿಯೋ ನ್ಯೂಸ್ ಮತ್ತು ಸುನೋ ನ್ಯೂಸ್ ಸುದ್ದಿ ಸಂಸ್ಥೆಗಳ ಯೂಟ್ಯೂಬ್ ಚಾನೆಲ್ ಗಳು ಸೇರಿವೆ. ಪತ್ರಕರ್ತರಾದ ಇರ್ಷಾದ್ ಭಟ್ಟಿ, ಅಸ್ಮಾ ಶಿರಾಜಿ, ಉಮರ್ ಚೀಮಾ ಮತ್ತು ಮುನೀಬ್ ಫಾರೂಕ್ ಅವರ ಯೂಟ್ಯೂಬ್ ಚಾನೆಲ್ ಗಳನ್ನು ಸಹ ನಿಷೇಧಿಸಲಾಗಿದೆ. ಪಾಕಿಸ್ತಾನ್ ರೆಫರೆನ್ಸ್, ಸಮಾ ಸ್ಪೋರ್ಟ್ಸ್, ಉಜೈರ್ ಕ್ರಿಕೆಟ್ ಮತ್ತು ರಝಿ ನಾಮಾ ಸೇರಿದಂತೆ ಇತರ ಹ್ಯಾಂಡಲ್ಗಳನ್ನು ನಿಷೇಧಿಸಲಾಗಿದೆ.

Key words: Central government, bans, 16 Pakistani , YouTube channels

The post ಪಾಕಿಸ್ತಾನದ 16 ಯೂಟ್ಯೂಬ್ ಚಾನೆಲ್ ಗಳನ್ನು ಬ್ಯಾನ್ ಮಾಡಿದ ಕೇಂದ್ರ ಸರ್ಕಾರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಎಪಿಎಂಸಿಗಳಲ್ಲಿ 70 ಲಕ್ಷ ಕೋಟಿ ರೂ. ವಹಿವಾಟು ನಡೆದಿದೆ: ಸಚಿವ ಶಿವಾನಂದ ಪಾಟೀಲ್

ಬೆಂಗಳೂರು,ಮಾರ್ಚ್,10,2026 (www.justkannada.in):  ಪ್ರಸಕ್ತ ಹಣಕಾಸು ವರ್ಷದ ಜನವರಿ ಅಂತ್ಯಕ್ಕೆ ರಾಜ್ಯದ ಎಪಿಎಂಸಿಗಳಲ್ಲಿ...

14 ವರ್ಷದ ಹೆಣ್ಣು ಮಕ್ಕಳಿಗೆ ‘HPV ಲಸಿಕಾ’ ಅಭಿಯಾನ

ಮೈಸೂರು, ಮಾರ್ಚ್,10,2026 (www.justkannada.in): HPV ಲಸಿಕೆಯು ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಸೋಂಕುಗಳಿಂದ...

ಕೃಷಿ ಕ್ಷೇತ್ರದಲ್ಲಿ AI ಬಳಕೆ ಅಗತ್ಯ : ವಿಟಿಯು ಕುಲಪತಿ ಎಸ್. ವಿದ್ಯಾಶಂಕರ್

  ಮೈಸೂರು, ಮಾ.೧೦,೨೦೨೬ : ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕೃತಕ ಬುದ್ಧಿಮತ್ತೆ...

KPCC ಅಧ್ಯಕ್ಷರಾಗಿ 6 ವರ್ಷ ಯಶಸ್ವಿ: ಡಿಕೆ ಶಿವಕುಮಾರ್ ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು,ಮಾರ್ಚ್,10,2026 (www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ ಯಶಸ್ವಿಯಾಗಿ 6 ವರ್ಷಗಳನ್ನು ಪೂರೈಸಿದ ಡಿಸಿಎಂ...