12
February, 2026

A News 365Times Venture

12
Thursday
February, 2026

A News 365Times Venture

ಫೆ.14ರಿಂದ ಮಲೆ ಮಹದೇಶ್ವರ ಬೆಟ್ಟದಲ್ಲಿ ಜಾತ್ರೆ ಹಿನ್ನೆಲೆ:  DC ಮತ್ತು SP ಭೇಟಿ, ಪರಿಶೀಲನೆ

Date:

ಚಾಮರಾಜನಗರ,ಫೆಬ್ರವರಿ,9,2026 (www.justkannada.in): ಫೆಬ್ರವರಿ 14ರಿಂದ 18ರವರೆಗೆ ಐದು ದಿನಗಳ ಕಾಲ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯಲಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ, ಕಾವೇರಿ ನದಿ ದಾಟಿ ಪಾದಯಾತ್ರೆ ಬರುವ ಬಸವನಕಡ ಪ್ರದೇಶಕ್ಕೆ ಜಿಲ್ಲಾಧಿಕಾರಿ ರೂಪ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕರ್ನಾಟಕ ಮತ್ತು ತಮಿಳುನಾಡಿನಿಂದ ಲಕ್ಷಾಂತರ ಭಕ್ತರು ಪಾದಯಾತ್ರೆಯ ಮೂಲಕ ಆಗಮಿಸುವುದರಿಂದ, ಕನಕಪುರ–ರಾಮನಗರ–ಚನ್ನಪಟ್ಟಣ–ಮಾಗಡಿ ಪ್ರದೇಶಗಳಿಂದ ಕಾವೇರಿ ನದಿ ಸಂಗಮದ ಮೂಲಕ ಬಸವನಕಡ ತಲುಪಿ ಅರಣ್ಯ ಮಾರ್ಗವಾಗಿ ಎಲ್ಲೇಮಾಳ–ಶಾಗ್ಯ–ಹಲಗಾಪುರ–ತೋಮಿಯಾರ್ ಪಾಳ್ಯ–ಡಿ.ಎಮ್. ಸಮುದ್ರ ಮಾರ್ಗವಾಗಿ ಶ್ರೀ ಕ್ಷೇತ್ರಕ್ಕೆ ತೆರಳುವ ಈ ಸಾಂಪ್ರದಾಯಿಕ ಮಾರ್ಗದ ಸುರಕ್ಷತೆ ಮತ್ತು ವ್ಯವಸ್ಥೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಯಿತು.

ಕೆ.ಆರ್.ಎಸ್ ಜಲಾಶಯದಿಂದ ನೀರಿನ ಪ್ರಮಾಣ ಕಡಿತಗೊಂಡಿರುವ ಹಿನ್ನೆಲೆಯಲ್ಲಿ, ಕಾವೇರಿ ನದಿಯನ್ನು ದಾಟುವ ಸ್ಥಳದಲ್ಲಿ ಭಕ್ತರ ಸುರಕ್ಷತೆಗೆ ಹೆಚ್ಚುವರಿ ಸಿಬ್ಬಂದಿ ನಿಯೋಜನೆ ಮಾಡಬೇಕು. ಅರಣ್ಯ ಪ್ರದೇಶದಲ್ಲಿ ಪಾದಯಾತ್ರೆ ಮಾಡುವ ಭಕ್ತರಿಗಾಗಿ ಅರಣ್ಯ ಇಲಾಖೆ ಹೆಚ್ಚಿನ ಪೆಟ್ರೋಲಿಂಗ್ ತಂಡ ನಿಯೋಜನೆ ಮಾಡಬೇಕು. ಗ್ರಾಮ ಪಂಚಾಯಿತಿ ವತಿಯಿಂದ ಶುದ್ಧ ಕುಡಿಯುವ ನೀರು, ಬೆಳಕು ಮತ್ತು ಮೂಲಭೂತ ಸೌಲಭ್ಯಗಳ ವ್ಯವಸ್ಥೆ. ಎಸ್‌ಟಿಆರ್‌ಎಫ್ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳನ್ನು ಮುಂಜಾಗ್ರತ ಕ್ರಮವಾಗಿ ನಿಯೋಜಿಸುವಂತೆ ಸೂಚನೆ ನೀಡಿದರು.

ಪಾದಯಾತ್ರೆಯ ಮಾರ್ಗದಲ್ಲಿ ಆರೋಗ್ಯ ಇಲಾಖೆಯ ತುರ್ತು ಚಿಕಿತ್ಸಾ ಕೇಂದ್ರಗಳು, ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳ ನಿಯೋಜನೆ ಮಾಡುವಂತೆ ಸೂಚನೆ ನೀಡಲಾಯಿತು. ಪಾದಯಾತ್ರಿಕರು ಬೆಳಕು ಇರುವ ಸಮಯದಲ್ಲಷ್ಟೇ ಅರಣ್ಯ ಪ್ರದೇಶದಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿ ರೂಪ ಅವರು ಮನವಿ ಮಾಡಿದರು.

ಲಕ್ಷಾಂತರ ಭಕ್ತರು ನಿರೀಕ್ಷೆಗೂ ಮೀರಿ ಆಗಮಿಸುವ ಸಾಧ್ಯತೆ ಇದೆ. ಪಾದಯಾತ್ರಿಕರ ಆಚಾರ–ವಿಚಾರಗಳಿಗೆ ಧಕ್ಕೆಯಾಗದಂತೆ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಭಕ್ತಾದಿಗಳು ಕೂಡ ಜಿಲ್ಲಾಡಳಿತ, ಪೋಲಿಸ್ ಇಲಾಖೆ ಹಾಗೂ ಅರಣ್ಯ ಇಲಾಖೆಗೆ ಸಹಕರಿಸಿ ತಮ್ಮ ಪಾದಯಾತ್ರೆಯನ್ನು ಯಶಸ್ವಿಗೊಳಿಸಬೇಕು, ಎಂದು  ಜಿಲ್ಲಾಧಿಕಾರಿ ರೂಪ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು, ಕೊಳ್ಳೇಗಾಲ ಉಪ ವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ಭಾಸ್ಕರ್, ಸುರೇಂದ್ರ, ಪ್ರಾಧಿಕಾರದ ಕಾರ್ಯದರ್ಶಿ ರಘು, ತಹಸೀಲ್ದಾರ್ ಚೈತ್ರ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Key words: Male Mahadeshwara Hill, fair, Feb. 14, DC, SP visit, inspect

The post ಫೆ.14ರಿಂದ ಮಲೆ ಮಹದೇಶ್ವರ ಬೆಟ್ಟದಲ್ಲಿ ಜಾತ್ರೆ ಹಿನ್ನೆಲೆ:  DC ಮತ್ತು SP ಭೇಟಿ, ಪರಿಶೀಲನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗಾಂಜಾ ಮಾರಾಟ: ಆರೋಪಿತನಿಗೆ 4 ವರ್ಷಗಳ ಕಠಿಣ ಶಿಕ್ಷೆ ಮತ್ತು ದಂಡ ವಿಧಿಸಿದ ಕೋರ್ಟ್

ಮೈಸೂರು,ಫೆಬ್ರವರಿ,12,2026 (www.justkannada.in): ಗಾಂಜಾ ಮಾರಾಟ: ಆರೋಪಿತನಿಗೆ 4 ವರ್ಷಗಳ ಕಠಿಣ ಶಿಕ್ಷೆ...

ಅಭಿವೃದ್ಧಿಗೆ ಹಣವಿಲ್ಲದ್ದಕ್ಕೆ ಶಾಸಕರಿಂದ ಫಾರಿನ್ ಟೂರ್- ಆರ್ .ಅಶೋಕ್ ವ್ಯಂಗ್ಯ

ಬೆಂಗಳೂರು,ಫೆಬ್ರವರಿ,12,2026 (www.justkannada.in): ಕಾಂಗ್ರೆಸ್ ಕೆಲ ಶಾಸಕರು ವಿದೇಶ ಪ್ರವಾಸ ಕೈಗೊಂಡಿರುವ ವಿಚಾರ...

ಇನ್ನೊಬ್ಬರ ಹೇಳಿಕೆಗೆ ಪ್ರತಿಕ್ರಿಯಿಸಿದ್ರೆ ನನ್ನತನ ಏನು ಉಳಿಯುತ್ತೆ- ಸಚಿವ ಕೃಷ್ಣಭೈರೇಗೌಡ

ಶಿವಮೊಗ್ಗ,ಫೆಬ್ರವರಿ,12,2026 (www.justkannada.in):  ಸಿಎಂ ಬದಲಾವಣೆ  ಮತ್ತು ಡಿಸಿಎಂ ಡಿಕೆ ಶಿವಕುಮಾರ್ ದೆಹಲಿ...

ಸಿಎಂ ಬದಲಾವಣೆ ವಿಚಾರ: ಇದು ಹೆಚ್ಚು ಚರ್ಚೆ ಮಾಡೋ ವಿಷಯ ಅಲ್ಲ ಎಂದ ಸಚಿವ ಮಹದೇವಪ್ಪ

ಬೆಂಗಳೂರು,ಫೆಬ್ರವರಿ,12,2026 (www.justkannada.in):   ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಹೈಕಮಾಂಡ್...