ಬೆಂಗಳೂರು ದಕ್ಷಿಣ,ಜುಲೈ,2,2026 (www.justkannada.in): ಕ್ರಷರ್ ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಬಂಡೆ ಕುಸಿದು 7 ಕಾರ್ಮಿಕರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ವಾರಿ ಮಾಲೀಕರ ವಿರುದ್ದ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಬಸವೇಶ್ವರ ಕ್ರಷರ್ ಮಾಲೀಕ ಡಿ.ಆನಂದಸ್ವಾಮಿ, ಕಾವೇರಿ ಕ್ರಷರ್ ಮಾಲೀಕ ಉದಯ್ ಶಂಕರ್ ವಿರುದ್ದ ತಾವರೆಕೆರೆಯ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಕಾರ್ಮಿಕ ಗೋಪಿಕೃಷ್ಣನ್ ಟಿ ದೂರಿನ ಮೇರೆಗೆ ಎಫ್ ಐಆರ್ ದಾಖಲಾಗಿದೆ.
ಬೆಂಗಳೂರು ದಕ್ಷಿಣ ಜಿಲ್ಲೆ ಮಾದಪಟ್ಟಣ ಗ್ರಾಮದ ಬಳಿಯ ಕಾವೇರಿ ಕ್ರಷರ್ ನಲ್ಲಿ ಬಂಡೆ ಕುಸಿದು 7 ಮಂದಿ ಕೂಲಿ ಕಾರ್ಮಿಕರು ಮೃತೊಟ್ಟಿದ್ದರು. ರಾಮು (46), ರಾಜಪಾಲ್ ಸಿಂಗ್ (35), ಸತ್ಯನಾರಾಯಣ ಸಿಂಗ್ (31), ರಾಮ ವತಾರ್ ಸಿಂಗ್ (31), ರಾಜೇಂದ್ರ ಪ್ರಸಾದ್, ನೂಹರ್ ಸಿಂಗ್ ಮತ್ತು ಭುವನೇಶ್ವರ ಸಿಂಗ್ ಮೃತರು ಎಂದು ಗುರುತಿಸಲಾಗಿದೆ.
Key words: 7 workers, death, rock, collapse, case, FIR
The post ಬಂಡೆ ಕುಸಿದು 7 ಕಾರ್ಮಿಕರ ಸಾವು ಕೇಸ್: ಕ್ವಾರಿ ಮಾಲೀಕರ ವಿರುದ್ದ FIR appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




