31
August, 2025

A News 365Times Venture

31
Sunday
August, 2025

A News 365Times Venture

ಬಾಹ್ಯಾಕಾಶ ಯಾತ್ರೆ ಯಶಸ್ವಿ: ಭಾರತದಿಂದ ಈ ದಿನ ಹೊಸ ಮೈಲಿಗಲ್ಲು- ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು,ಜುಲೈ,15,2025 (www.justkannada.in): ಬಾಹ್ಯಾಕಾಶಯಾನ ಕೈಗೊಂಡಿದ್ದ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳು ಸುರಕ್ಷಿತವಾಗಿ ಭೂಮಿಗೆ ಮರಳಿದ್ದು ಈ ಸಾಧನೆಯನ್ನು ಸಿಎಂ ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಯಶಸ್ವಿ ಬಾಹ್ಯಾಕಾಶ ಯಾತ್ರೆಯನ್ನು ಮುಗಿಸಿ, ಸುರಕ್ಷಿತವಾಗಿ ಭೂಮಿಗೆ ಮರಳಿದ ಶುಭಾಂಶು ಶುಕ್ಲಾ ಅವರನ್ನು ದೇಶವಾಸಿಗಳ ಪರವಾಗಿ ಸ್ವಾಗತಿಸುತ್ತೇನೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿನೀಡಿದ ಮೊದಲ ಭಾರತೀಯನೆಂಬ ದಾಖಲೆ ಬರೆದ ಅವರಿಗೆ ಅಭಿನಂದನೆಗಳು.

ಇಡೀ ರಾಷ್ಟ್ರ ಈ ಐತಿಹಾಸಿಕ ಕ್ಷಣಗಳನ್ನು ಕಣ್ತುಂಬಿಕೊಂಡು ಹೆಮ್ಮೆಪಡುತ್ತಿದೆ. ಶುಭಾಂಶು ಶುಕ್ಲಾರವರು ತಮ್ಮ ಪರಿಶ್ರಮ ಮತ್ತು ಧೈರ್ಯದ ಮೂಲಕ ಕೋಟ್ಯಂತರ ಜನರ ಕನಸುಗಳಿಗೆ ರೆಕ್ಕೆಯಾಗಿದ್ದಾರೆ. ಅವರ ಈ ಬಾಹ್ಯಾಕಾಶ ಪಯಣವು ಭವಿಷ್ಯದ ಸಂಶೋಧನೆಗಳ ಹಾದಿಯನ್ನು ಸುಗಮವಾಗಿಸಿದೆ. ಬಾಹ್ಯಾಕಾಶ ಸಂಶೋಧನೆಯಲ್ಲಿ ಭಾರತ ಈ ದಿನ ಹೊಸ ಮೈಲಿಗಲ್ಲು ಸಾಧಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.vtu

Key words: Space, new milestone, India, CM, Siddaramaiah

The post ಬಾಹ್ಯಾಕಾಶ ಯಾತ್ರೆ ಯಶಸ್ವಿ: ಭಾರತದಿಂದ ಈ ದಿನ ಹೊಸ ಮೈಲಿಗಲ್ಲು- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಕೇಸ್ :ಗೃಹ ಸಚಿವರ ಭೇಟಿಯಾಗಿ ಚರ್ಚಿಸಿದ SIT ಮುಖ್ಯಸ್ಥರು: ತನಿಖಾ ಪ್ರಗತಿ ವರದಿ ಸಲ್ಲಿಕೆ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಕುರಿತು...

ಧರ್ಮಸ್ಥಳ ಕೇಸ್: ದೂರುದಾರನನ್ನು ಮಂಪರು ಪರೀಕ್ಷೆಗೆ ಒಳಪಡಿಸಿ- MLC ಸಿ.ಟಿ ರವಿ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಯಾಗುತ್ತಿದ್ದು...

ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿ ರಾಜಕೀಯ: ಸದನದಲ್ಲಿ ಇಂದು ಪರಮೇಶ್ವರ್ ಮಾತು-ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಆಗಸ್ಟ್,18,2025 (www.justkannada.in):  ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಾರಿಗೆ...

ಮೈಸೂರು: ಅತಿಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಉದ್ಘಾಟಿಸಿದ ಸೆಸ್ಕ್ ಎಂಡಿ

ಮೈಸೂರು, ಆಗಸ್ಟ್‌, 18, 2025 (www.justkannada.in): ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ...