10
March, 2026

A News 365Times Venture

10
Tuesday
March, 2026

A News 365Times Venture

ಬಿಜೆಪಿಯವರು ಟೀಕೆ ಬಿಟ್ಟು ರಸಗೊಬ್ಬರ ಪೂರೈಕೆಗೆ ಕೇಂದ್ರದ ಬಳಿ ಮಾತನಾಡಲಿ- ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು,ಜುಲೈ,29,2025 (www.justkannada.in):  ರಾಜ್ಯದಲ್ಲಿ ರಸಗೊಬ್ಬರ ಕೊರತೆಗೆ ಕೇಂದ್ರ ಸರ್ಕಾರವೇ ನೇರ ಹೊಣೆ. ಹೀಗಾಗಿ ಬಿಜೆಪಿ  ಟೀಕೆ ಮಾಡುವುದನ್ನ ಬಿಟ್ಟು ಕೇಂದ್ರದ ಬಳಿ ಮಾತನಾಡಿ ರಸಗೊಬ್ಬರ ಪೂರೈಕೆ ಮಾಡಿಸಲಿ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈ ಸಂಬಂಧ ಟ್ವೀಟ್ ಮಾಇರುವ ಸಿಎಂ ಸಿದ್ದರಾಮಯ್ಯ, ರಾಜ್ಯದ ಬೇಡಿಕೆಗೆ ಅನುಗುಣವಾಗಿ ಕೇಂದ್ರ ಸರ್ಕಾರ ರಸಗೊಬ್ಬರ ಪೂರೈಕೆ ಮಾಡಿಲ್ಲ. ಈ ಬಗ್ಗೆ ಪತ್ರ ಬರೆದು ಮನವಿಯನ್ನು ಸಹ ಮಾಡಲಾಗಿದೆ. ಕೇಂದ್ರದಿಂದ 6.82 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಬರಬೇಕಿತ್ತು, ಆದರೆ ನಮಗೆ ಪೂರೈಕೆಯಾಗಿರುವುದು 5.27 ಲಕ್ಷ ಮೆಟ್ರಿಕ್ ಟನ್ ಎಂದು ಮಾಹಿತಿ ನೀಡಿದ್ದಾರೆ.

ರಸಗೊಬ್ಬರ ಉತ್ಪಾದನೆ ಮಾಡುವವರು ನಾವಲ್ಲ, ರಸಗೊಬ್ಬರ ಸರಬರಾಜು ಮಾಡುವವರು ನಾವಲ್ಲ. ಬಿಜೆಪಿ ಪಕ್ಷವೇ ಆಡಳಿತದಲ್ಲಿರುವ ಹರಿಯಾಣ, ಮಧ್ಯ ಪ್ರದೇಶ ರಾಜ್ಯಗಳಲ್ಲಿಯೂ ರಸಗೊಬ್ಬರ ಕೊರತೆ ಇದೆ. ಇದಕ್ಕೆ ಕೇಂದ್ರ ಸರ್ಕಾರವೇ ಹೊಣೆ.

ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ರಸಗೊಬ್ಬರ ಕೇಳಿದ ರೈತರನ್ನು ಗುಂಡಿಕ್ಕಿ ಕೊಂದಿದ್ದರು. ನಾವು ಅವರಂತಲ್ಲ.  ಬಿಜೆಪಿ ನಾಯಕರು ರಾಜಕೀಯ ಟೀಕೆ ಮಾಡಿ ಕಾಲಹರಣ ಮಾಡುವ ಬದಲು ಕೇಂದ್ರ ಸರ್ಕಾರದ ಬಳಿ ಮಾತನಾಡಿ, ತಕ್ಷಣ ರಸಗೊಬ್ಬರ ಪೂರೈಕೆ ಮಾಡಿಸಲಿ ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.vtu

Key words: BJP, talk, Central Government,  fertilizer, CM Siddaramaiah

The post ಬಿಜೆಪಿಯವರು ಟೀಕೆ ಬಿಟ್ಟು ರಸಗೊಬ್ಬರ ಪೂರೈಕೆಗೆ ಕೇಂದ್ರದ ಬಳಿ ಮಾತನಾಡಲಿ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

14 ವರ್ಷದ ಹೆಣ್ಣು ಮಕ್ಕಳಿಗೆ ‘HPV ಲಸಿಕಾ’ ಅಭಿಯಾನ

ಮೈಸೂರು, ಮಾರ್ಚ್,10,2026 (www.justkannada.in): HPV ಲಸಿಕೆಯು ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಸೋಂಕುಗಳಿಂದ...

ಕೃಷಿ ಕ್ಷೇತ್ರದಲ್ಲಿ AI ಬಳಕೆ ಅಗತ್ಯ : ವಿಟಿಯು ಕುಲಪತಿ ಎಸ್. ವಿದ್ಯಾಶಂಕರ್

  ಮೈಸೂರು, ಮಾ.೧೦,೨೦೨೬ : ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕೃತಕ ಬುದ್ಧಿಮತ್ತೆ...

KPCC ಅಧ್ಯಕ್ಷರಾಗಿ 6 ವರ್ಷ ಯಶಸ್ವಿ: ಡಿಕೆ ಶಿವಕುಮಾರ್ ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು,ಮಾರ್ಚ್,10,2026 (www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ ಯಶಸ್ವಿಯಾಗಿ 6 ವರ್ಷಗಳನ್ನು ಪೂರೈಸಿದ ಡಿಸಿಎಂ...

ಡಿಕೆಶಿ ಅತ್ಯಂತ ಯಶಸ್ವಿ ಅಧ್ಯಕ್ಷರು: ಪಕ್ಷ ಅಧಿಕಾರಕ್ಕೆ ತರುವುದೇ ಅವರ ಕನಸಾಗಿತ್ತು- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು,ಮಾರ್ಚ್,10,2026 (www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ 6 ವರ್ಷ ಪೂರೈಸಿದ್ದು...