ಬೆಂಗಳೂರು,ಮೇ,4,2026 (www.justkannada.in): ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಮತದಾರರಿಗೆ ಸಿಎಂ ಸಿದ್ದರಾಮಯ್ಯ ಧನ್ಯವಾದ ಅರ್ಪಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಬಾಗಲಕೋಟೆ ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನ ಗೆಲ್ಲಿಸಿದ ಮತದಾರರಿಗೆ ಧನ್ಯವಾದಗಳು ಮತದಾರರಿಗೆ ತುಂಬು ಹೃದಯದ ಧನ್ಯವಾದಗಳು ಎಂದಿದ್ದಾರೆ.
ಇದು ನಮ್ಮ ಸರ್ಕಾರದ ಸಾಧನೆ, ಪಕ್ಷದ ಸಿದ್ದಂತಕ್ಕೆ ಸಿಕ್ಕ ಜಯ. ವಿಪಕ್ಷಗಳ ಅಪಪ್ರಚಾರ, ಹಣದ ಪ್ರಭಾವದ ಹೊರತಾಗಿಯೂ ಎರಡೂ ಕ್ಷೇತ್ರಗಳ ಮತದಾರರು ನಂಬಿಕೆಯಿಟ್ಟು ಕಾಂಗ್ರೆಸ್ ಅಭ್ಯರ್ಥಿಗಳನ್ನ ಗೆಲ್ಲಿಸಿದ್ದಾರೆ. ಜನ ನಮ್ಮ ಮೇಲೆ ಇಟ್ಟಿರುವ ನಂಬಿಕೆ ಉಳಿಸಿಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
Key words: Congress, wins, by-election, CM Siddaramaiah, thanks, voters
The post ಬೈ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ಗೆಲುವು: ಮತದಾರರಿಗೆ ಧನ್ಯವಾದ ಅರ್ಪಿಸಿದ ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




