ಮಂಗಳೂರು,ಸೆಪ್ಟಂಬರ್,18,2026 (www.justkannada.in): ಕರಾವಳಿ ಭಾಗದಲ್ಲಿ ಇದೇ ಮೊದಲ ಬಾರಿ ಸಚಿವ ಸಂಪುಟ ಸಭೆ ನಡೆಯುತ್ತಿದ್ದು ಸಭೆಯಲ್ಲಿ ಕರಾವಳಿ ಭಾಗದ ಅಭಿವೃದ್ದಿ ಬಗ್ಗೆ ಚರ್ಚಿಸಲಾಗುತ್ತಿದೆ.
ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ವಿಶೇಷ ಸಚಿವ ಸಂಪುಟ ಸಭೆ ಆರಂಭವಾಗಿದ್ದು ತುಳು ಭಾಷೆಗೆ 2ನೇ ಅಧಿಕೃತ ಭಾಷೆ ಸ್ಥಾನ ಮಾನ ನೀಡುವ ಬಗ್ಗೆ ಜಿಲ್ಲಾ ಉಸ್ತುವಾರಿ ಮತ್ತು ಆರೋಗ್ಯ ಸಚಿವ ಯು ಟಿ ಖಾದರ್ ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ.
ಇನ್ನು ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಠಿ ಪ್ರವಾಸೋದ್ಯಮ ಅಭಿವೃದ್ದಿಗೆ ಒತ್ತು ನೀಡುವಂತೆ ಸ್ಥಳೀಯರು ಒತ್ತಾಯಿಸಿದ್ದು ಕರಾವಳಿ ಜನರ ಬಹುದಿನಗಳ ಬೇಡಿಕೆ ಈಡೇರುತ್ತಾ ಕಾದು ನೋಡಬೇಕಿದೆ. ಸಭೆ ಬಳಿಕ ನಿರ್ಣಯಗಳ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಘೋಷಣೆ ಮಾಡಲಿದ್ದಾರೆ.




