16
February, 2026

A News 365Times Venture

16
Monday
February, 2026

A News 365Times Venture

ಮತಗಳ್ಳತನ : ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ: ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು ಆಗಸ್ಟ್,8,2025 (www.justkannada.in):   ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಆಗಿರುವ ಹಿನ್ನೆಲೆಯಲ್ಲಿ  ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ. ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದರು.

ಲೋಕಸಭಾ ಚುನಾವಣೆಯಲ್ಲಿ ನಡೆದ ಚುನಾವಣಾ ಅಕ್ರಮ ಮತ್ತು ಮತಗಳ್ಳತನ ವಿರೋಧಿಸಿ ಫ್ರೀಡಂಪಾರ್ಕ್ ನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ  ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಚುನಾವಣಾ ಆಯೋಗ ಬಿಜೆಪಿಯ ಶಾಖಾ ಕಚೇರಿ ಆಗಿದೆ. ಮತಗಳ್ಳತನದ ವಿರುದ್ಧ ಕರ್ನಾಟಕ ರಾಜ್ಯದಿಂದ ಆರಂಭವಾಗಿರುವ ಪ್ರತಿಭಟನಾ ಅಭಿಯಾನ ಇಡೀ ದೇಶಾದ್ಯಂತ ವ್ಯಾಪಿಸಲಿದೆ. ರಾಹುಲ್ ಗಾಂಧಿಯವರು ಸಂಪೂರ್ಣವಾಗಿ ಅಧ್ಯಯನ ಮಾಡಿ, ಮತದಾನದ ಅಂಕಿ ಅಂಶಗಳನ್ನು ಸಂಗ್ರಹಿಸಿ ವಿಶ್ಲೇಷಣೆ ಮಾಡಿ ದಾಖಲೆಗಳ ಸಮೇತ ದೇಶದ ಜನರ ಮುಂದೆ ಇಟ್ಟಿದ್ದಾರೆ ಎಂದು ವಿವರಿಸಿದರು.

ಚುನಾವಣಾ ಆಯೋಗ ಸಂವಿಧನದ ಅಡಿಯಲ್ಲಿ ನ್ಯಾಯಬದ್ದವಾಗಿ ನಡೆದುಕೊಳ್ಳಬೇಕು. ಸಂವಿಧಾನ ಕೊಟ್ಟಿರುವ ಮತದಾನದ ಮೂಲಭೂತ ಹಕ್ಕನ್ನು ಯಾರೂ ಕಿತ್ತುಕೊಳ್ಳಲು ಸಾಧ್ಯವಿಲ್ಲ. ಅದಕ್ಕೆ ದೇಶದ ಜನತೆ ಅವಕಾಶ ಕೊಡುವುದಿಲ್ಲ ಎಂದರು.

ಮನುವಾದಿಗಳು ಸಂವಿಧಾನ ವಿರೋಧಿಗಳು. ಇವರು ಸಂವಿಧಾನದ ಪ್ರಕ್ರಿಯೆಯನ್ನೇ ತಪ್ಪುದಾರಿಗೆ ಎಳೆಯುತ್ತಿದ್ದಾರೆ. ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ವಂಚನೆ ಕಾರಣದಿಂದ ಸೆಂಟ್ರಲ್ ಲೊಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋತಿದೆಯೇ ಹೊರತು ಜನಾಭಿಪ್ರಾಯ ಕಾಂಗ್ರೆಸ್ ಪರವಾಗಿಯೇ ಇತ್ತು ಎನ್ನುವುದು ಈಗ ಗೊತ್ತಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ 14 ಸೀಟುಗಳನ್ನು ಗೆಲ್ಲಬೇಕಿತ್ತು. ಆದರೆ ಮತಕಳ್ಳತನದ ಕಾರಣದಿಂದ ನಾವು ಸೋತಿದ್ದೇವೆ. EVM ಬಂದ ಮೇಲೆ ಇವನ್ನು ದುರುಯೋಗ ಮಾಡಿಕೊಳ್ಳುವ ಕೆಲಸ ಆಗುತ್ತಿರುವುದು ಈಗ ದಾಖಲೆ ಸಮೇತ ಸಿಕ್ಕಿಬಿದ್ದಿದ್ದಾರೆ ಎಂದರು.

ರಾಹುಲ್ ಗಾಂಧಿಯಿಂದ ಪ್ರಜಾಪ್ರಭುತ್ವ ಮತ್ತು ಸಂವಿಧಾನ ರಕ್ಷಣೆಗೆ ಚಳವಳಿ ಆರಂಭವಾಗಿದೆ. ಇದಕ್ಕೆ ಇಡೀ ರಾಜ್ಯದ ಜನತೆ ಬೆಂಬಲಕ್ಕೆ ನಿಲ್ಲಲಿದ್ದಾರೆ ಎಂದು ಘೋಷಿಸಿದರು.

Key words: Vote rigging, Congress, protest, CM Siddaramaiah

The post ಮತಗಳ್ಳತನ : ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ: ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದೇಶದ ಪ್ರದರ್ಶನ ಕಲೆಗಳ ವೈವಿಧ್ಯತೆ ತೆರೆದಿಡುವುದು ಅಂಚೆ ಸಾಂಸ್ಕೃತಿಕ ಸಮ್ಮೇಳನದ ಉದ್ದೇಶ- ಜಿತೇಂದ್ರ ಗುಪ್ತಾ

ಮೈಸೂರು,ಫೆಬ್ರವರಿ,16,2026 (www.justkannada.in): ಭಾರತದ ಪ್ರದರ್ಶನ ಕಲೆಗಳ ವೈವಿಧ್ಯತೆಯನ್ನು ತೆರೆದಿಡುವುದು ಅಖಿಲ ಭಾರತೀಯ...

ಡಿಕೆಶಿ ಬಂಡೆ ಅಲ್ಲ, ರೈಲ್ವೆ ಇಂಜಿನ್: ಎಲ್ಲರನ್ನೂ ಎಳೆದುಕೊಂಡು ಹೋಗ್ತಿದ್ದಾರೆ- ಬಿ.ಕೆ ಹರಿಪ್ರಸಾದ್

ಬೆಂಗಳೂರು,ಫೆಬ್ರವರಿ,16,2026 (www.justkannada.in):  ಡಿಸಿಎಂ ಡಿಕೆ ಶಿವಕುಮಾರ್ ಬಂಡೆ ಅಲ್ಲ, ರೈಲ್ವೆ ಇಂಜಿನ್...

ಕೃತಕ ಬುದ್ದಿಮತ್ತೆ ಅಂದ್ರೆ ರೈತರ ನಿರ್ಧಾರ ಶಕ್ತಿಯನ್ನು ಬಲಪಡಿಸುವ ತಂತ್ರಜ್ಞಾನ – ಡಾ. ಕೆ. ಎಂ. ಹರಿಣಿ ಕುಮಾರ್

ಮೈಸೂರು,ಫೆಬ್ರವರಿ,16,2026 (www.justkannada.in): ಕೃಷಿಯ ಭವಿಷ್ಯವನ್ನು ಕೃಷಿಯಲ್ಲಿ ಕೃತಕ ಬುದ್ಧಿಮತ್ತೆ ಅಳವಡಿಸುವ ಮೂಲಕ...

ನಾನು ಆಕಸ್ಮಿಕವಾಗಿ 2 ಬಾರಿ ಸಿಎಂ ಆಗಿದ್ದೆ: ನನ್ನ ಯೋಜನೆಗಳಿಗೆ ಎಂದೂ ಜಾಹೀರಾತು ನೀಡಿಲ್ಲ- ಕೇಂದ್ರ ಸಚಿವ HDK

ತುಮಕೂರು,ಫೆಬ್ರವರಿ,16,2026 (www.justkannada.in):  ನಾನು ರಾಜ್ಯದಲ್ಲಿ ಎರಡು ಬಾರಿ ಆಕಸ್ಮಿಕವಾಗಿ ಮುಖ್ಯಮಂತ್ರಿಯಾಗಿದ್ದೆ. ಆದರೆ...