2
October, 2026

A News 365Times Venture

2
Friday
October, 2026

A News 365Times Venture

ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಅವರ ಜೀವನ ಎಲ್ಲರಿಗೂ ಮಾದರಿ – ನ್ಯಾ. ಸಿ ಚಂದ್ರಶೇಖರ್

Date:

ಮಂಡ್ಯ,ಅಕ್ಟೋಬರ್,2,2026 (www.justkannada.in): ಶಾಸ್ತ್ರೀ ಅವರ ಸತ್ಯ, ಅಹಿಂಸೆ, ಶಾಂತಿ, ಸರಳತೆ, ಪ್ರಾಮಾಣಿಕತೆ ಮತ್ತು ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಮಂಡ್ಯ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಸಿ. ಚಂದ್ರಶೇಖರ್ ಕರೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಕಾವೇರಿ ಉದ್ಯಾನವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ನ್ಯಾಯಾಂಗ, ವಕೀಲರ ಸಂಘ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 157ನೇ ಹಾಗೂ ಮಾಜಿ ಪ್ರಧಾನಿ ಲಾಲ್‌ ಬಹದ್ದೂ‌ರ್ ಶಾಸ್ತ್ರೀಜಿಯವರ 122ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಜಯಂತಿ ಆಚರಣೆ ಕೇವಲ ಮಹನೀಯರ ಭಾವಚಿತ್ರಕ್ಕೆ ಹೂವು, ಹಾರ ಅರ್ಪಿಸುವುದಕ್ಕೆ ಸೀಮಿತವಾಗದೆ, ಅವರ ಆದರ್ಶಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವ ಸಂಕಲ್ಪದ ದಿನವಾಗಬೇಕು. ಗಾಂಧೀಜಿಯವರ ಸತ್ಯ, ಅಹಿಂಸೆ ಮತ್ತು ಶಾಂತಿಯ ಸಂದೇಶಗಳು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿವೆ ಎಂದರು.

ಪ್ರತಿಯೊಬ್ಬರೂ ತಮ್ಮ ಕರ್ತವ್ಯ, ಜವಾಬ್ದಾರಿ ಹಾಗೂ ನಡೆ-ನುಡಿಗಳ ಕುರಿತು ಆತ್ಮಾವಲೋಕನ ಮಾಡಿಕೊಳ್ಳಬೇಕು. ಸಮಾಜದಲ್ಲಿ ಪ್ರಾಮಾಣಿಕತೆ, ನೈತಿಕತೆ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವ ಮೂಲಕ ಗಾಂಧೀಜಿಯವರ ಆಶಯಗಳನ್ನು ಸಾಕಾರಗೊಳಿಸಬಹುದು ಎಂದು ಹೇಳಿದರು.

ಲಾಲ್‌ ಬಹದ್ದೂ‌ರ್ ಶಾಸ್ತ್ರೀಜಿಯವರು ಸರಳತೆ, ಪ್ರಾಮಾಣಿಕತೆ ಮತ್ತು ನೈತಿಕ ಹೊಣೆಗಾರಿಕೆಗೆ ಮಾದರಿಯಾಗಿದ್ದರು. ‘ಜೈ ಜವಾನ್, ಜೈ ಕಿಸಾನ್’ ಘೋಷಣೆಯ ಮೂಲಕ ದೇಶದ ಸೈನಿಕರು ಹಾಗೂ ರೈತರ ಮಹತ್ವವನ್ನು ಎತ್ತಿಹಿಡಿದ ಅವರು, ಸಾರ್ವಜನಿಕ ಜೀವನದಲ್ಲಿ ನೈತಿಕ ಮೌಲ್ಯಗಳಿಗೆ ವಿಶೇಷ ಸ್ಥಾನ ನೀಡಿದ್ದರು. ರೈಲು ಅಪಘಾತದ ಸಂದರ್ಭದಲ್ಲಿ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಅವರ ನಡೆ ಸಾರ್ವಜನಿಕ ಜೀವನದಲ್ಲಿನ ಜವಾಬ್ದಾರಿಗೆ ಉತ್ತಮ ಉದಾಹರಣೆಯಾಗಿದೆ ಎಂದು ಸ್ಮರಿಸಿದರು.

ಗಾಂಧೀಜಿಯವರ ಸತ್ಯ, ಅಹಿಂಸೆ ಹಾಗೂ ಶಾಂತಿಯ ತತ್ವಗಳು ಭಾರತಕ್ಕೆ ಮಾತ್ರವಲ್ಲದೆ ಇಡೀ ವಿಶ್ವಕ್ಕೆ ಪ್ರೇರಣೆಯಾಗಿವೆ. ಅವರ ವಿಚಾರಗಳಿಂದ ಪ್ರೇರಿತರಾಗಿ ಮಾರ್ಟಿನ್ ಲೂಥ‌ರ್ ಕಿಂಗ್ ಜೂನಿಯ‌ರ್ ಸೇರಿದಂತೆ ಹಲವು ನಾಯಕರು ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದ್ದಾರೆ ಎಂದು ಹೇಳಿದರು.

ಇದೇ ವೇಳೆ ಹಿರಿಯ ನ್ಯಾಯಾಧೀಶ ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ. ಆನಂದ್‌ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ, ವಕೀಲರ ಸಂಘದ ಅಧ್ಯಕ್ಷ ಟಿ.ಎಸ್‌. ಸತ್ಯಾನಂದ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಟಿ.ಕೆ. ಹರೀಶ್‌, ಜಿಲ್ಲಾ ಯುವ ಅಧಿಕಾರಿ ಶೃತಿ ಎಸ್. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

 

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರು ದಸರಾ: ರಾಜಮನೆತನಕ್ಕೆ ಆಹ್ವಾನ ನೀಡಿದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಮೈಸೂರು ಅಕ್ಟೋಬರ್,2,2026 (www.justkannada.in) ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ...

ನೈಸ್ ಹಗರಣದಿಂದ ಗಮನ ಬೇರೆಡೆ ಸೆಳೆಯಲು ಕಾಂಗ್ರೆಸ್ SIR ನಾಟಕ- ಕೇಂದ್ರ ಸಚಿವ HDK

ಬೆಂಗಳೂರು,ಅಕ್ಟೋಬರ್,2,2026 (www.justkannada.in): ಸಿಎಂ ಕುಟುಂಬದ ನೈಸ್ ಭೂಕಬಳಿಕೆ ಹಗರಣವನ್ನು ಬಹಿರಂಗಪಡಿಸಿದ ಹಿನ್ನೆಲೆಯಲ್ಲಿ...

ಅ. 4 ರಂದು ಚೀ. ಜ.ರಾಜೀವ ಅವರ ‘ಪ್ರಿಯ ಗಾಂಧಿ’ ಕೃತಿ ಕುರಿತು ಸಂವಾದ

ಮೈಸೂರು.ಅಕ್ಟೋಬರ್‌,2,2026 (www.justkannada.in):  ಗಾಂಧಿ ಸ್ಮರಣೆಯ ವಿಶೇಷ ನೆಪದಲ್ಲಿ, ಹಿರಿಯ ಪತ್ರಕರ್ತ ಚೀ....

ಗಣೇಶ ಹಬ್ಬಕ್ಕೆಂದು ಬಂದಿದ್ದ ಯುವಕನ ಬರ್ಬರ ಹತ್ಯೆ

ಮೈಸೂರು ಅಕ್ಟೋಬರ್‌,1,2026 (www.justkannada.in): ಗಣೇಶ ಹಬ್ಬದ ಸಂಭ್ರಮಕ್ಕೆಂದು ಹಾಸನದಿಂದ ಮೈಸೂರಿಗೆ ಬಂದಿದ್ದ...