22
February, 2026

A News 365Times Venture

22
Sunday
February, 2026

A News 365Times Venture

ಮಾ.23 ರಿಂದ ವೈರಮುಡಿ ಬ್ರಹ್ಮೋತ್ಸವ: ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ-ಡಿಸಿ ಡಾ.ಕುಮಾರ ಸೂಚನೆ

Date:

ಮಂಡ್ಯ.ಫೆಬ್ರವರಿ,19,2026 (www.justkannada.in): ಮಾರ್ಚ್ 23 ರಿಂದ ಏಪ್ರಿಲ್ 5 ರವರೆಗೆ ವೈರಮುಡಿ ಬ್ರಹ್ಮೋತ್ಸವ 2026 ನಡೆಯಲಿದೆ. ಮಾರ್ಚ್ 28 ಶನಿವಾರದಂದು ವೈರಮುಡಿ ಕಿರೀಟಧಾರಣೆ ಮತ್ತು ಉತ್ಸವ ಆಚರಣೆ ಮಾಡಲಾಗುತ್ತದೆ. ಮಾರ್ಚ್ ಮಾಹೆಯ ಬೇಸಿಗೆ ಇರುವುದರಿಂದ ಬ್ರಹ್ಮೋತ್ಸವಕ್ಕೆ ಭಕ್ತಾದಿಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ. ಹಾಲಿ ಇರುವ ನೀರಿನ ಟ್ಯಾಂಕರ್ ಗಳನ್ನು ಸ್ವಚ್ಛಗೊಳಿಸಿ ನೈರ್ಮಲ್ಯ ಕಾಪಾಡಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಹೇಳಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಶ್ರೀ ವೈರಮುಡಿ ಬ್ರಹ್ಮೋತ್ಸವ -2026 ರ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕುಮಾರ ಅವರು, ವೈರಮುಡಿ ಬ್ರಹ್ಮೋತ್ಸವ ನಡೆಯುವ ಸ್ಥಳದಲ್ಲಿ ಸೂಕ್ತ ಬ್ಯಾರಿಕೇಡ್ ವ್ಯವಸ್ಥೆ ಮಾಡಿ. ಈಗಾಗಲೇ ಜನ‌ಸಂದಣಿ ಹೊಂದುವ ಕಡೆ ಸಿಸಿ ಟಿ.ವಿ ವ್ಯವಸ್ಥೆ ಇದೆ. ಅಗತ್ಯ ಇರುವ ಕಡೆ ಹೆಚ್ಚುವರಿ ಸಿಸಿ ಟಿವಿ ಅಳವಡಿಸಿ. ವಾಹನಗಳ ನಿಲುಗಡೆಗೆ ಅಗತ್ಯ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿ. ಕೊಳದ ಬಳಿ ನೂರಿತ ಈಜು ಪಡೆ, ಅಗ್ನಿಶಾಮಕ ಸಿಬ್ಬಂದಿಗಳನ್ನು ನಿಯೋಜಿಸಿ ಎಂದು ಹೇಳಿದರು.

ಕ್ಷೇತ್ರದಲ್ಲಿ ಡ್ರೈನೇಜ್ ವ್ಯವಸ್ಥೆ ಕಲ್ಪಿಸಿ ಸ್ವಚ್ಚತೆ ಕಾಪಾಡಿ, ಆಂಬುಲೆನ್ಸ್, ಮೆಡಿಸಿನ್ ಗಳ ವ್ಯವಸ್ಥೆಯನ್ನು ಕಲ್ಪಿಸಿ. ಎಲ್ಲಾ ವಿಧದ ವೈದ್ಯರುಗಳು  ಕಡ್ಡಾಯವಾಗಿ ನಿಗದಿ ಪಡಿಸಿದ ಸ್ಥಳದಲ್ಲಿ ಇರಬೇಕು. ಭಕ್ತಾದಿಗಳಿಗೆ ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಉಂಟಾಗದಂತೆ ಕ್ರಮ ವಹಿಸಬೇಕು. ಕುಡಿಯುವ ನೀರಿಗೆ ತೊಂದರೆಯಾಗದಂತೆ ಸೂಕ್ತ ಕ್ರಮ ವಹಿಸಿ. ಕುಡಿಯುವ ನೀರಿನ ಗುಣಮಟ್ಟವನ್ನು ಪರಿಶೀಲಿಸಿ ನೀರು ಪೂರೈಕೆ ಮಾಡಬೇಕು ಎಂದು ಹೇಳಿದರು.

ಮೇಲುಕೋಟೆ ಕಲ್ಯಾಣ, ಬಸ್ ನಿಲ್ದಾಣ, ದೇವಾಲಯದ ಬಳಿ ಬಯೋ ಶೌಚಾಲಯಗಳನ್ನು ನಿರ್ಮಿಸಬೇಕು. ರಸ್ತೆಗಳ ದುರಸ್ತಿ ಮಾಡಿಸಿ. ವಿವಿಧ ತಾಲೂಕಿನಿಂದ ಬರುವ ಸಾರ್ವಜನಿಕರಿಗೆ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸಿ. ಪಾರ್ಕಿಂಗ್ ನಿಂದ ದೇವಾಲಯಕ್ಕೆ ಭಕ್ತಾದಿಗಳು ಸಂಚಾರಿಸಲು ಉಚಿತ ಬಸ್ ವ್ಯವಸ್ಥೆ ಕಲ್ಪಿಸಿ ಎಂದು ಹೇಳಿದರು.

ಮಂಗಳ ವಾದ್ಯ, ನಾದ ಸ್ವರ ಹಾಗೂ ವಿವಿಧ ಕಲಾ ತಂಡಗಳನ್ನು ವೈರಮುಡಿ ಬ್ರಹ್ಮೋತ್ಸವದಲ್ಲಿ  ನಿಯೋಜಿಸಿ. ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ವೈರಮುಡಿ ಬ್ರಹ್ಮೋತ್ಸವ ಪ್ರಾರಂಭವಾಗಿ ಮುಗಿಯುವವರೆಗೂ ನಿರಂತರ ವಿದ್ಯುತ್ ಪೂರೈಕೆ ಮಾಡಿ. ಬೀದಿ ದೀಪಗಳ ದುರಸ್ತಿಗೊಳಿಸಿ ಎಂದು ಹೇಳಿದರು.

ಚೆಲುವನಾರಾಯಣ ಸ್ವಾಮಿ ದೇವಾಲಯ ಶ್ರೀ ಯೋಗ ನರಸಿಂಹ ಸ್ವಾಮಿ ದೇವಾಲಯ ಹಾಗೂ ದೇವಾಲಯದ ವ್ಯಾಪ್ತಿಯ ಪ್ರಮುಖ ಮಂಟಪ ಹಾಗೂ ಕಲ್ಯಾಣಿಯಲ್ಲಿ ವಿಶೇಷ ದಿಪಾಲಂಕಾರ ಹಾಗೂ ಹೂವಿನ ಅಲಂಕಾರ ವ್ಯವಸ್ಥೆ ಕಲ್ಪಿಸಿ ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್ ನಂದಿನಿ ಅವರು ಮಾತನಾಡಿ ವೈರಮುಡಿ ಬ್ರಹ್ಮೋತ್ಸವ ನಡೆಯುವ ಸ್ಥಳದಲ್ಲಿ ಸ್ವಚ್ಛತೆ ಕಾಪಾಡುವುದು ಅತಿ ಮುಖ್ಯ. ಸದರಿ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಅನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ವೈರುಮುಡಿ ಬ್ರಹ್ಮೋತ್ಸವಕ್ಕೆ ಭೇಟಿ ನೀಡುವ ಗಣ್ಯರು ಮತ್ತು ಅತಿ ಗಣ್ಯರಿಗೆ ಸೂಕ್ತ ಶಿಷ್ಟಾಚಾರ ವ್ಯವಸ್ಥೆಯನ್ನು ಕಲ್ಪಿಸಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಸಿ ಶಿವಾನಂದಮೂರ್ತಿ, ಉಪ ವಿಭಾಗಾಧಿಕಾರಿ ಶ್ರೀನಿವಾಸ್, ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಟಿ.ಎನ್ ನರಸಿಂಹಮೂರ್ತಿ, ಮುಜರಾಯಿ ತಹಶೀಲ್ದಾರ್ ತಮ್ಮೆಗೌಡ, ಪಾಂಡವಪುರ ಇಓ ವೀಣಾ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Key words: Vairamudi Brahmotsava, March 23,  DC Dr. Kumar

 

The post ಮಾ.23 ರಿಂದ ವೈರಮುಡಿ ಬ್ರಹ್ಮೋತ್ಸವ: ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ-ಡಿಸಿ ಡಾ.ಕುಮಾರ ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಚಂದ್ರ ಲೋಕಕ್ಕೆ ಕಾಲಿಟ್ಟರೂ, ಕಾಲ ಬುಡದಲ್ಲೇ ಮರ್ಯಾದಾ ಹತ್ಯೆ ಬೇಸರದ ಸಂಗತಿ- ಕೆ.ವಿ.ಪ್ರಭಾಕರ್

ಕೋಲಾರ ಫೆಬ್ರವರಿ, 21,2026 (www.justkannada.in):  ಚಂದ್ರ ಲೋಕಕ್ಕೆ ಕಾಲಿಟ್ಟರೂ, ಕಾಲ ಬುಡದಲ್ಲೇ...

ತಪ್ಪು ಮಾಡಿದವರ ವಿರುದ್ದ ಕ್ರಮ ನಿಶ್ಚಿತ- ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು,ಫೆಬ್ರವರಿ,21,2026 (www.justkannada.in): ಬಾಗಲಕೋಟೆಯಲ್ಲಿ ಶಿವಾಜಿ ಮೆರವಣಿಗೆ ಮೇಲೆ ಕಲ್ಲು ತೂರಾಟ ಪ್ರಕರಣ...

ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಬಿಜೆಪಿ ಶಾಸಕ

ಗದಗ,ಫೆಬ್ರವರಿ,21,2026 (www.justkannadda.in):  ಸಣ್ಣನೀರಾವರಿ ಇಲಾಖೆ ಕಾಮಗಾರಿ ಗುತ್ತಿಗೆ ನೀಡಲು 5 ಲಕ್ಷ...

ಖರ್ಗೆ ಅವರಿಂದ ಆದಷ್ಟು ಬೇಗ ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸುವ ಭರವಸೆ- ಸಚಿವ ಸತೀಶ್ ಜಾರಕಿಹೊಳಿ

ನವದೆಹಲಿ,ಫೆಬ್ರವರಿ,21,2026 (www.justkannada.in): ರಾಜ್ಯದಲ್ಲಿ ಉಂಟಾಗಿರುವ ನಾಯಕತ್ವ ಬದಲಾವಣೆ ಗೊಂದಲ ವಿಚಾರವನ್ನು ಆದಷ್ಟು...