8
September, 2026

A News 365Times Venture

8
Tuesday
September, 2026

A News 365Times Venture

ಮೈಸೂರಿನಲ್ಲಿ ಫಿಲಂ ಸಿಟಿ ಯೋಜನೆ: ಪರಿಶೀಲನಾ ಸಭೆ ನಡೆಸಿ ಚರ್ಚಿಸಿದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

Date:

ಬೆಂಗಳೂರು,ಸೆಪ್ಟಂಬರ್,8,2026 (www.justkannada.in): ಇಂದು ವಿಕಾಸಸೌಧದ ಸಭಾಂಗಣದಲ್ಲಿ ಮೈಸೂರಿನಲ್ಲಿ ಸಾರ್ವಜನಿಕ-ಖಾಸಗಿ ಪಾಲುದಾರಿಕೆ (PPP) ಮಾದರಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಂತಾರಾಷ್ಟ್ರೀಯ ದರ್ಜೆಯ ಚಿತ್ರನಗರಿ ಯೋಜನೆಯ ಪ್ರಗತಿ ಕುರಿತು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು.

ಮೈಸೂರು ಈಗಾಗಲೇ ಕಲೆ, ಸಂಸ್ಕೃತಿ, ಪರಂಪರೆ ಹಾಗೂ ಪ್ರವಾಸೋದ್ಯಮದ ಪ್ರಮುಖ ತಾಣವಾಗಿದ್ದು, ಚಿತ್ರನಗರಿಯಂತಹ ಮಹತ್ವಾಕಾಂಕ್ಷೆಯ ಯೋಜನೆಯು ನಗರದ ಸಾಂಸ್ಕೃತಿಕ ಮತ್ತು ಆರ್ಥಿಕ ಬೆಳವಣಿಗೆಗೆ ಮತ್ತಷ್ಟು ವೇಗ ನೀಡುವ ಸಾಮರ್ಥ್ಯ ಹೊಂದಿದೆ. ಈ ಹಿನ್ನೆಲೆಯಲ್ಲಿ, ಉದ್ದೇಶಿತ ಚಿತ್ರನಗರಿಯನ್ನು ಕೇವಲ ಚಿತ್ರೀಕರಣಕ್ಕೆ ಸೀಮಿತವಾಗಿರದೆ, ಅತ್ಯಾಧುನಿಕ ಚಿತ್ರೀಕರಣ ಸೌಲಭ್ಯಗಳು, ಸ್ಟುಡಿಯೋಗಳು, ತಾಂತ್ರಿಕ ಮೂಲಸೌಕರ್ಯ, ಪೋಸ್ಟ್-ಪ್ರೊಡಕ್ಷನ್ ಸೌಲಭ್ಯಗಳು ಹಾಗೂ ಚಲನಚಿತ್ರ ಕ್ಷೇತ್ರಕ್ಕೆ ಅಗತ್ಯವಿರುವ ಸಮಗ್ರ ವ್ಯವಸ್ಥೆಗಳನ್ನು ಒಳಗೊಂಡ ದೇಶದ ಅತ್ಯುತ್ತಮ ಚಿತ್ರನಗರಿಯಾಗಿ ರೂಪಿಸುವ ನಿಟ್ಟಿನಲ್ಲಿ ಸಭೆಯಲ್ಲಿ ವಿವರವಾದ ಚರ್ಚೆ ನಡೆಸಿದರು.

ಯೋಜನೆಯ ಅನುಷ್ಠಾನದಲ್ಲಿ ಯಾವುದೇ ವಿಳಂಬವಾಗದಂತೆ ಪ್ರತಿ ಹಂತದ ಕಾರ್ಯಯೋಜನೆ, ಪ್ರಗತಿ ಹಾಗೂ ಎದುರಾಗಬಹುದಾದ ಸವಾಲುಗಳ ಕುರಿತು ನಿರಂತರವಾಗಿ ಮಾಹಿತಿ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸಾರ್ವಜನಿಕ ಹಿತಾಸಕ್ತಿ ಹಾಗೂ ಮೈಸೂರಿನ ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಸಾಮರ್ಥ್ಯವನ್ನು ಗಮನದಲ್ಲಿಟ್ಟುಕೊಂಡು, ಯೋಜನೆಯನ್ನು ಪರಿಣಾಮಕಾರಿಯಾಗಿ ಹಾಗೂ ಗುಣಮಟ್ಟದೊಂದಿಗೆ ಸಾಕಾರಗೊಳಿಸುವಂತೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಮಾಹಿತಿ ಕಾರ್ಯದರ್ಶಿಗಳಾದ ಜೆ. ಮಂಜುನಾಥ್ ಮತ್ತು ವಾರ್ತಾ ಮತ್ತು ಪ್ರಚಾರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Key words: Film City, project, Mysore:,  Minister, Dr. Yathindra Siddaramaiah, meeting

The post ಮೈಸೂರಿನಲ್ಲಿ ಫಿಲಂ ಸಿಟಿ ಯೋಜನೆ: ಪರಿಶೀಲನಾ ಸಭೆ ನಡೆಸಿ ಚರ್ಚಿಸಿದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಎಸ್.ಸಿಎಸ್ ಪಿ ಹಾಗೂ ಟಿಎಸ್ ಪಿ ಅನುದಾನಕ್ಕೆ ಯೋಜನೆ ರೂಪಿಸಿ- ಮೈಸೂರು ಡಿಸಿ ಲಕ್ಷ್ಮಿಕಾಂತ ರೆಡ್ಡಿ

ಮೈಸೂರು, ಸೆಪ್ಟಂಬರ್,8,2026 (www.justkannada.in): ಮೈಸೂರು ಮಹಾನಗರಪಾಲಿಕೆಯಲ್ಲಿ ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ  ಅನುದಾನದಡಿ...

ವಿದ್ಯುತ್ ನಿಗಮಕ್ಕೆ ಆರ್ಥಿಕ ನಷ್ಟ ಆರೋಪ: ನಾಲ್ವರು ಸಿಬ್ಬಂದಿ ಅಮಾನತು

ಮೈಸೂರು,ಸೆಪ್ಟಂಬರ್,8,2026 (www.justkannada.in):  ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ (ಚಾವಿಸನಿನಿ) ಎನ್.ಆರ್.ಮೊಹಲ್ಲಾ ಶಾಖೆಯಲ್ಲಿ...

ಮೈಸೂರು: ರಾಜ್ಯಮಟ್ಟದ ಬ್ಯಾಡ್ಮಿಂಟನ್ ಟೂರ್ನಿ ಗೆ ಚಾಲನೆ

ಮೈಸೂರು,ಸೆಪ್ಟಂಬರ್.7,2026 (www.justkannada.in):  ನಗರದ ಬೋಗಾದಿ ರಸ್ತೆಯಲ್ಲಿರುವ ಸ್ಪೋರ್ಟ್ಸ್ ಪಾರ್ಕ್‌ನಲ್ಲಿ ಇಂಡಿಯನ್ ಡೆಂಟಲ್...

ಕಸ್ತೂರಿ ರಂಗನ್ ವರದಿ: ಮಲೆನಾಡಿನ ಜನರ ಬದುಕಿಗೆ ಧಕ್ಕೆ ತರುವ ಯಾವುದೇ ಕ್ರಮಕ್ಕೆ ಅವಕಾಶವಿಲ್ಲ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ, ಸೆಪ್ಟಂಬರ್,7,2026 (www.justkannada.in): ಕಸ್ತೂರಿ ರಂಗನ್ ವರದಿ ಜಾರಿ ವಿಚಾರದಲ್ಲಿ ರಾಜ್ಯದ...