ಬೆಂಗಳೂರು, ಜೂನ್,19,2026 (www.justkannada.in): ಮೊಬೈಲ್ ಕದ್ದು ಬೈಕ್ ನಲ್ಲಿ ಪರಾರಿಯಾಗುತ್ತಿದ್ದ ಖದೀಮ ಹೃದಯಾಘಾತದಿಂದ ಸ್ಥಳದಲ್ಲೇ ಮೃತಪಟ್ಟ ಘಟನೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಜುನೈದ್ ಎಂಬಾತ ಮೃತಪಟ್ಟ ಕಳ್ಳ. ಈತ ಮತ್ತು ಮತ್ತೋರ್ವ ಆರೋಪಿ ಅರ್ಬಾಜ್ ವ್ಯಕ್ತಿಯೋರ್ವರ ಮೊಬೈಲ್ ಕಸಿದು ಸ್ಕೂಟಿಯಲ್ಲಿ ಪರಾರಿಯಾಗಲು ಯತ್ನಿಸಿದ್ದರು. ಈ ವೇಳೆ ಎದುರಿನಿಂದ ಬರುತ್ತಿದ್ದ ಕಾರ್ಮಿಕ ಕಳ್ಳರ ಬೈಕ್ ಮೇಲೆ ಮೂಟೆಯನ್ನು ಎಸೆದಿದ್ದಾರೆ. ಈ ವೇಳೆ ನಿಯಂತ್ರಣ ತಪ್ಪಿ ಬಿದ್ದ ಜುನೈದ್ ಅಲ್ಲಿಂದ ತಪ್ಪಿಸಿಕೊಂಡು ಓಡಿದ್ದಾನೆ.
ಆದರೆ ಫುಟ್ಪಾತ್ ಮೇಲೆ ಕುಳಿತುಕೊಳ್ಳುತ್ತಿದ್ದಂತೆಯೇ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ಹೃದಯ ಸಂಬಂಧಿ ಸಮಸ್ಯೆಯಿಂದ ಜುನೈದ್ ಬಳಲುತ್ತಿದ್ದ ಎನ್ನಲಾಗಿದ್ದು, ಮತ್ತೋರ್ವ ಆರೋಪಿ ಅರ್ಬಾಜ್ನನ್ನು ಪೊಲೀಸರು ಬಂಧಿಸಿದ್ದಾರೆ.
Key words: Thief, mobile phone, dies, on the spot
The post ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ್ದ ಕಳ್ಳ ಸ್ಥಳದಲ್ಲೇ ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




