30
August, 2025

A News 365Times Venture

30
Saturday
August, 2025

A News 365Times Venture

ಯುವ ಕಾಂಗ್ರೆಸ್ ಸೇನಾನಿಗಳು ‘ಸಮಾಜವಾದ’  ಮತ್ತು ‘ಜಾತ್ಯತೀತ’ ಮೌಲ್ಯದ ರಕ್ಷಣೆಗೆ ನಿಲ್ಲುತ್ತಾರೆ- ಸಿಎಂ ಸಿದ್ದರಾಮಯ್ಯ

Date:

 

ಮೈಸೂರು ಜುಲೈ,18,2025 (www.justkannada.in): ಯುವ ಕಾಂಗ್ರೆಸ್ ಸೇನಾನಿಗಳು ನಮ್ಮ ಸಂವಿಧಾನದ “ಸಮಾಜವಾದ” ಮತ್ತು “ಜಾತ್ಯತೀತ” ಮೌಲ್ಯದ ರಕ್ಷಣೆಗೆ ನಿಲ್ಲುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.

ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಹಾಗೂ “ಯುವ ಶಕ್ರಿ ಪ್ರತಿಜ್ಞೆ 2025” ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳಿಗೆ ಅಭಿನಂದಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಸಂಘ ಪರಿವಾರ ನಮ್ಮ ಸಂವಿಧಾನದಿಂದ ಜಾತ್ಯತೀತ ಮತ್ತು ಸಮಾಜವಾದವನ್ನು ತೆಗೆದು ಹಾಕಲು ಷಡ್ಯಂತ್ರ ನಡೆಸುತ್ತಿದೆ. ಬಿಜೆಪಿ ತನ್ನ ಹುಟ್ಟಿನಿಂದಲೇ‌ ಸಾಮಾಜಿಕ ನ್ಯಾಯದ ವಿರೋಧಿ ಆಗಿರುವುದರಿಂದ ಹೀಗೆ ಮಾಡುತ್ತಿದೆ. ಈ ಷಡ್ಯಂತ್ರವನ್ನು ರಾಜ್ಯದ ಮತ್ತು ದೇಶದ ಯುವ ಜನತೆ ಸೋಲಿಸಲು ಕಟ್ಟಿಬದ್ದವಾಗಿ ನಿಂತು ಹೋರಾಟ ಮುನ್ನಡೆಸುತ್ತದೆ ಎನ್ನುವ ಭರವಸೆ ತಮಗಿದೆ ಎಂದರು.

ಯುವ ಕಾಂಗ್ರೆಸ್ ಕಾರ್ಯಕರ್ತರು ಸೈದ್ಧಾಂತಿಕವಾಗಿ ಯಾವತ್ತೂ ರಾಜಿ ಮಾಡಿಕೊಳ್ಳಬಾರದು. ರಾಜಿ ಮಾಡಿಕೊಂಡವರು ರಾಜಕೀಯವಾಗಿ ಉಳಿಯುವುದಿಲ್ಲ, ಬೆಳೆಯುವುದಿಲ್ಲ ಎಂದು ಎಚ್ಚರಿಸಿದರು.

ಬಿಜೆಪಿ ಪಕ್ಷಕ್ಕೆ ಭಾರತೀಯ ಸಮಾಜಕ್ಕೆ ಪೂರಕವಾದ ಸಿದ್ಧಾಂತವೇ ಇಲ್ಲ. ಸಮಾಜವನ್ನು ವಿಭಜಿಸುವ ಸಿದ್ಧಾಂತ ಬಿಜೆಪಿಯದ್ದು. ಜೆಡಿಎಸ್ ರಾಜ್ಯದ ಕೆಲವೇ ಸ್ಥಳಗಳಲ್ಲಿ ಅಸ್ತಿತ್ವದಲ್ಲಿದೆ. ಈ ಪಕ್ಷಕ್ಕೂ ಸರಿಯಾದ ಸಿದ್ಧಾಂತ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಮಂಡಲ್ ಕಮಿಷನ್ ವರದಿಯನ್ನು ಜಾರಿ ಮಾಡಿದ್ದು ನಮ್ಮ ಕಾಂಗ್ರೆಸ್, ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿಯನ್ನು ಕೊಟ್ಟಿದ್ದು ನಮ್ಮ ಕಾಂಗ್ರೆಸ್ ಸರ್ಕಾರ. ಮಂಡಲ್ ವರದಿಯನ್ನು ವಿರೋಧಿಸಿದ್ದು ಇದೇ ಮನುವಾದಿಗಳು. ಇವರ ಈ ಜನವಿರೋಧಿ ಇತಿಹಾಸವನ್ನು ಯುವ ಕಾಂಗ್ರೆಸ್ ಕಾರ್ಯಕರ್ತರು ನೆನಪಿಡಬೇಕು ಎಂದರು.

ಮಹಿಳಾ ಮೀಸಲಾತಿ ಕೊಟ್ಟಿದ್ದು ಕಾಂಗ್ರೆಸ್. ರಾಜೀವ್ ಗಾಂಧಿಯವರು ಸಂವಿಧಾನಕ್ಕೆ ತಿದ್ದುಪಡಿ ತಂದು 35% ಮಹಿಳಾ ಮೀಸಲಾತಿ ತಂದರು. ಈ ಮೀಸಲಾತಿಯನ್ನು 50% ಗೆ ಹೆಚ್ಚಿಸಲು ಹೋರಾಟ ಮಾಡಿದ್ದು ಸೋನಿಯಾಗಾಂಧಿ. ಇದನ್ನು ನೆನಪಿಡಬೇಕು ಎಂದರು.

ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದ ಯುವ ಕಾಂಗ್ರೆಸ್ಸಿನ ಜಾತ್ಯತೀತ ಸೇನಾನಿಗಳು ಸೈದ್ಧಾಂತಿಕ ಹೋರಾಟ ಮುಂದುವರೆಸುತ್ತಾರೆ, ಸೈದ್ಧಾಂತಿಕವಾಗಿ ಯುವ ಸಂಘಟನೆಯನ್ನು ಬಲಗೊಳಿಸುತ್ತಾರೆ ಎನ್ನುವ ಭರವಸೆ ಇದೆ. ಕಾಂಗ್ರೆಸ್ ಭಾರತ ದೇಶವನ್ನು ಬ್ರಿಟೀಷರ ಗುಲಾಮಗಿರಿಯಿಂದ ಸ್ವಾತಂತ್ರ್ಯ ಕೊಡಿಸಿತು. ಆದರೆ ಸಂಘ ಪರಿವಾರದ ಬಿಜೆಪಿ ಬ್ರಿಟೀಷರ ಜೊತೆ ಶಾಮೀಲಾಗಿ ಭಾರತದ ಸ್ವಾತಂತ್ರ್ಯ ಹೋರಾಟವನ್ನು ಹತ್ತಿಕ್ಕಲು ಯತ್ನಿಸಿತು‌ ಎನ್ನುವುದು ಇತಿಹಾಸ  ಎಂದರು.

RSS 1925 ರಲ್ಲೇ ಆರಂಭವಾದರೂ ಯಾವತ್ತೂ ಕೂಡ ಹೆಡಗೇವಾರ್ ಆಗಲಿ, ಗುರುಜಿ ಹೆಸರಿನವರಾಗಲಿ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿ ಆಗಲಿಲ್ಲ. ಇದನ್ನು ಯುವ‌ಮಿತ್ರರು ಅರ್ಥ ಮಾಡಿಕೊಳ್ಳಬೇಕು. RSSನ‌ ಮುಖವಾಣಿ ರಾಜಕೀಯ ಪಕ್ಷ ಜನಸಂಘ ಆರಂಭವಾಯಿತು. ಬಳಿಕ ಬಿಜೆಪಿ ಆಯಿತು. ಇವರು ದೇಶಭಕ್ತಿ ಬಗ್ಗೆ ಭಯಾನಕವಾಗಿ ಮಾತನಾಡ್ತಾರೆ. ಆದರೆ ದೇಶದ ಸ್ವಾತಂತ್ರ್ಯ ಹೋರಾಟದಿಂದ ದೂರ ಉಳಿದಿದ್ದರು. ದೇಶದ ಪರವಾಗಿ ಇವರು ಬರಲೇ ಇಲ್ಲ ಎಂದು ಟೀಕಿಸಿದರು.

ಭಾರತೀಯ ಸಮಾಜವನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಪ್ರಯತ್ನವನ್ನು ಇವರು ಮಾಡುವುದೇ ಇಲ್ಲ. ಮೋದಿಯವರು ಬಾಯಲ್ಲಿ “ಸಬ್ ಕಾ ಸಾಥ್” ಅಂತ ಡೈಲಾಗ್ ಹೊಡಿತಾರೆ. ಆದರೆ, ಬಿಜೆಪಿಯಲ್ಲಿ 240 ಮಂದಿ MP ಗಳಲ್ಲಿ ಒಬ್ಬರೂ ಅಲ್ಪ ಸಂಖ್ಯಾತರಿಲ್ಲ. ಇವರು ಯಾವತ್ತೂ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಗೌರವಿಸುವುದಿಲ್ಲ. ಇವರು ಕೊಟ್ಟ ಸಂವಿಧಾನವನ್ನು ಗೌರವಿಸುವುದಿಲ್ಲ ಎಂದರು.

ತನ್ನನ್ನು ಚುನಾವಣೆಯಲ್ಲಿ ಸೋಲಿಸಿದ್ದು RSS ನ ಸಾವರ್ಕರ್ ಎಂದು ಸ್ವತಃ ಅಂಬೇಡ್ಕರ್ ಅವರೇ ಪತ್ರ ಬರೆದಿದ್ದಾರೆ. ಇದನ್ನು ಯುವ ಸಮುದಾಯ ಅರ್ಥ ಮಾಡಿಕೊಳ್ಳಬೇಕು. ಅರ್ಥ ಮಾಡಿಸುವ ಕೆಲಸವನ್ನು ಯುವ ಕಾಂಗ್ರೆಸ್ ಸೇನಾನಿಗಳು ಮಾಡಬೇಕು ಎಂದರು.

ಸಂವಿಧಾನದ ಆಶಯ ಮತ್ತು ಮೌಲ್ಯಗಳ ಬಗ್ಗೆ ಬದ್ಧತೆ ಇರುವ ಏಕೈಕ ಪಕ್ಷ ಕಾಂಗ್ರೆಸ್ . ಯುವ ಕಾಂಗ್ರೆಸ್ ಚುನಾವಣೆ ಮುಗಿದ ಮೇಲೆ ಮುಗಿಯಿತು. ಗೆದ್ದವರು, ಸೋತವರೆಲ್ಲಾ ಒಟ್ಟಾಗಿ ಹೋಗಬೇಕು. ಗುಂಪುಗಾರಿಕೆ ಬೇಡ, ಒಬ್ಬ ನಾಯಕರ ಹಿಂದೆ ಹೋಗಬಾರದು. ಸಿದ್ಧಾಂತವೇ ನಾಯಕತ್ವ. ಸಿದ್ಧಾಂತದ ಜೊತೆಗೆ ನೀವೆಲ್ಲಾ ಇರಬೇಕು ಎಂದು ಸಿಎಂ ಸಿದ್ದರಾಮಯ್ಯ ಕಿವಿಮಾತು ಹೇಳಿದರು.

ಬಾವಿಯಲ್ಲಿ ಕಸ ಸೇರಿದಂತೆ ಜಾತಿ ಸೇರಿಕೊಳ್ಳುತ್ತದೆ. ದುರ್ಬಲ ವರ್ಗದವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಶಕ್ತಿ ಬಂದಾಗ ಮಾತ್ರ ನಮಗೆ ಸಿಕ್ಕ ಸ್ವಾತಂತ್ರ್ಯಕ್ಕೆ ಬೆಲೆ ಬರುತ್ತದೆ.  ನೀವೆಲ್ಲರೂ ನಮ್ಮ ಸಂವಿಧಾನವನ್ನು ಮತ್ತು ಸಂವಿಧಾನ ಜಾರಿ ಸಭೆಯ ಚರ್ಚೆಯನ್ನು ತಪ್ಪದೇ ಓದಬೇಕು ಎಂದರು.

ಮಕ್ಕಳಿಗೆ ಅನ್ನಕ್ಕಾಗಿ ಇನ್ನೊಬ್ಬರ ಮನೆ ಬಾಗಿಲಿಗೆ ಬಂದು ನಿಂತ ತಾಯಂದಿರನ್ನು ನಾನು ಕಂಡಿದ್ದೆ. ಈ ಪರಿಸ್ಥಿತಿ ಹೋಗಬೇಕು ಎನ್ನುವ ಕಾರಣಕ್ಕೆ ನಾನು ಅನ್ನಭಾಗ್ಯ ಜಾರಿ ತಂದೆ, ಅನ್ನಕ್ಕಾಗಿ ಯಾರೂ ಯಾರನ್ನೂ ಬೇಡುವ ಅಗತ್ಯವಿಲ್ಲದ ಪರಿಸ್ಥಿತಿ ತಂದೆ ಎಂದರು.

ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೆ ತಂದಿದ್ದು ಮನಮೋಹನ್ ಸಿಂಗ್ ಎನ್ನುವುದನ್ನು ಮರೆಯಬಾರದು. ಮೋದಿ ಮುಖ್ಯಮಂತ್ರಿ ಆಗಿದ್ದಾಗ ಏನೇನು ಹೇಳಿದ್ದರೋ ಅದಕ್ಕೆ ವಿರುದ್ದವಾಗಿ ಪ್ರಧಾನಿ ಮೋದಿ ಕೆಲಸ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದರು.

ಬಿಜೆಪಿಯವರು ಮೈಸೂರಿಗೆ ಏನಾದ್ರೂ ಮಾಡಿದ್ರಾ ? ಬಿಜೆಪಿ ಬರೀ ಬುರುಡೆ ಬಿಡುತ್ತೆ

ಬಿಜೆಪಿಯವರು ಮೈಸೂರಿಗೆ ಏನಾದ್ರೂ ಮಾಡಿದ್ರಾ ? ಇಲ್ಲಿರುವ ಮಹಾರಾಣಿ ಕಾಲೇಜು, ಆಸ್ಪತ್ರೆ, ಜಯದೇವ ಆಸ್ಪತ್ರೆ ಸೇರಿ ಇಲ್ಲಿ ಆಗಿರುವ ಅಭಿವೃದ್ಧಿ ಕೆಲಸಗಳೆಲ್ಲಾ ನಮ್ಮಿಂದ ಆಗಿದ್ದು. ನಾನು ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಸರ್ಕಾರ ಮೈಸೂರಿನ ಅಭಿವೃದ್ಧಿ ಮಾಡಿದ್ದೇ ಹೊರತು ಬುರುಡೆ ಬಿಜೆಪಿ‌ ಮಾಡಿದ್ದೇನೂ ಇಲ್ಲ ಎಂದು ವಿವರಿಸಿದರು.

ಒಂದೇ ವೆದಿಕೆಗೆ ಬನ್ನಿ: ಸಿಎಂ ಸವಾಲು

ಅಭಿವೃದ್ಧಿ ವಿಚಾರದಲ್ಲಿ ಬಿಜೆಪಿ ನಮ್ಮ ಜೊತೆ ಒಂದೇ ವೇದಿಕೆಯಲ್ಲಿ‌ಬಹಿರಂಗ ಚರ್ಚೆಗೆ ಬರಲಿ. ನಾನೇ ಬರುತ್ತೇನೆ. ಈ ಸವಾಲನ್ನು‌ ಬಿಜೆಪಿ‌ ಸ್ವೀಕರಿಸಲು ಸಿದ್ದವಿಲ್ಲ ಏಕೆ? ಬಿಜೆಪಿ ಏನೂ ಕೆಲಸ ಮಾಡದೆ ಕೇವಲ ಬರೀ  ಬುರುಡೆ ಬಿಡತ್ತೆ. ಬಿಜೆಪಿ ಯವರು ಕೆಲಸ ಮಾಡಿದ ಸಾಕ್ಷಿ ಗುಡ್ಡೆ ತೋರಿಸಿ ಎಂದರು.vtu

Key words: Young Congress, stand, Socialism, secular, value, CM Siddaramaiah

The post ಯುವ ಕಾಂಗ್ರೆಸ್ ಸೇನಾನಿಗಳು ‘ಸಮಾಜವಾದ’  ಮತ್ತು ‘ಜಾತ್ಯತೀತ’ ಮೌಲ್ಯದ ರಕ್ಷಣೆಗೆ ನಿಲ್ಲುತ್ತಾರೆ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಕೇಸ್ :ಗೃಹ ಸಚಿವರ ಭೇಟಿಯಾಗಿ ಚರ್ಚಿಸಿದ SIT ಮುಖ್ಯಸ್ಥರು: ತನಿಖಾ ಪ್ರಗತಿ ವರದಿ ಸಲ್ಲಿಕೆ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಕುರಿತು...

ಧರ್ಮಸ್ಥಳ ಕೇಸ್: ದೂರುದಾರನನ್ನು ಮಂಪರು ಪರೀಕ್ಷೆಗೆ ಒಳಪಡಿಸಿ- MLC ಸಿ.ಟಿ ರವಿ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಯಾಗುತ್ತಿದ್ದು...

ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿ ರಾಜಕೀಯ: ಸದನದಲ್ಲಿ ಇಂದು ಪರಮೇಶ್ವರ್ ಮಾತು-ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಆಗಸ್ಟ್,18,2025 (www.justkannada.in):  ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಾರಿಗೆ...

ಮೈಸೂರು: ಅತಿಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಉದ್ಘಾಟಿಸಿದ ಸೆಸ್ಕ್ ಎಂಡಿ

ಮೈಸೂರು, ಆಗಸ್ಟ್‌, 18, 2025 (www.justkannada.in): ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ...