ಬೆಂಗಳೂರು,ಜೂನ್,6,2026 (www.justkannada.in): ರಾಮಲಿಂಗರೆಡ್ಡಿ ಅವರು ಸಚಿವ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ವಾಪಸ್ ಪಡೆದು ಸಚಿವ ಸಂಪುಟದಲ್ಲಿ ಮುಂದುವರೆಯಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟಪಡಿಸಿದ್ದಾರೆ.
ಸಚಿವ ರಾಮಲಿಂಗರೆಡ್ಡಿ ಜೊತೆ ಮಾತುಕತೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಣದೀಪ್ ಸಿಂಗ್ ಸುರ್ಜೇವಾಲ, ರಾಮಲಿಂಗರೆಡ್ಡಿ ಹಲವು ಬಾರಿ ಸಚಿವರಾಗಿ ಕೆಲಸ ಮಾಡಿದ್ದಾರೆ . ರಾಜೀನಾಮೆ ಸುದ್ದಿ ಹೊರ ಬರ್ತಿದ್ದಂತೆ ಸಿಎಂ ಡಿಕೆ ಶಿವಕುಮಾರ್ ಹರಿಪ್ರಸಾದ್ ನಾವು ಚರ್ಚಿಸಿದ್ದೇವೆ. ರಾಜೀನಾಮೆ ವಾಪಸ್ ಪಡೆದು ಸಚಿವರಾಗಿ ಕೆಲಸ ಮಾಡಲು ಒಪ್ಪಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಬಿಜೆಪಿಯವರು ರಾಜಕೀಯಕ್ಕಾಗಿ ಹುಳಿ ಹಿಂಡುತ್ತಿದ್ದಾರೆ. ರಾಮಲಿಂಗರೆಡ್ಡಿ ಬಹುಕಾಲದಿಂದ ಕಾಂಗ್ರೆಸ್ ನಲ್ಲಿದ್ದಾರೆ. ಅವರ ವಿಚಾರದಲ್ಲಿ ಬಿಜೆಪಿ ಸುಳ್ಳು ಸುದ್ದಿ ಹಬ್ಬಿಸುತ್ತಿದೆ. ರಾಮಲಿಂಗರೆಡ್ಡಿ ಸಂಪುಟದಲ್ಲಿ ಮುಂದುವರೆಯಲಿದ್ದಾರೆ. ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲಾಗುತ್ತಿದೆ. ಜನರಿಗೆ ಅನುಕೂಲ ಮಾಡಿಕೊಡುವುದು ನಮ್ಮ ಬದ್ದತೆ ಎಂದರು.
Key words: Ramalinga Reddy, withdraw, resignation, Randeep Singh Surjewala
The post ರಾಜೀನಾಮೆ ವಾಪಸ್ ಪಡೆಯಲು ರಾಮಲಿಂಗರೆಡ್ಡಿ ಒಪ್ಪಿದ್ದಾರೆ- ರಣದೀಪ್ ಸಿಂಗ್ ಸುರ್ಜೇವಾಲ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




