ಬೆಂಗಳೂರು, ಜೂನ್,5,2026 (www.justkannada.in): ಜೂನ್ 18 ರಂದು ನಡೆಯುವ ರಾಜ್ಯಸಭೆ ಚುನಾವಣೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ವಿಧಾನಸಭೆ ಕಾರ್ಯದರ್ಶಿ, ಚುನಾವಣಾಧಿಕಾರಿ ವಿಶಾಲಾಕ್ಷಿ ಅವರಿಗೆ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರವನ್ನು ಸಲ್ಲಿಸಿದ್ದಾರೆ. ಜೂನ್ 18 ರಂದು ಕರ್ನಾಟಕದ 4 ಸ್ಥಾನಗಳು ಸೇರಿದಂತೆ ಒಟ್ಟು 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ನಾಮಪತ್ರ ಸಲ್ಲಿಕೆ ವೇಳೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಹಿರಿಯ ಸಚಿವರಾದ ಎಂ.ಬಿ. ಪಾಟೀಲ್, ಕೆ.ಜೆ. ಜಾರ್ಜ್, ಕೆ.ಹೆಚ್. ಮುನಿಯಪ್ಪ, ಭೈರತಿ ಸುರೇಶ್ ಮತ್ತು ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್ ಸೇರಿ ಹಲವರು ಉಪಸ್ಥಿತರಿದ್ದರು.
Key words: Rajya Sabha elections, Congress, Cadidate, Mallikarjun Kharge, nomination
The post ರಾಜ್ಯಸಭೆ ಚುನಾವಣೆ: ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ ಖರ್ಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




