ಬೆಂಗಳೂರು,ಫೆಬ್ರವರಿ,6,2026 (www.justkannada.in): ಕೃಷಿ ಕ್ಷೇತ್ರಕ್ಕೆ ನಮ್ಮ ಸರ್ಕಾರ ಸಹಕಾರಿಯಾಗಿದೆ. ರೈತರು ಸಬಲೀಕರಣವಾಗಬೇಕು. ಮಹಿಳೆಯರೂ ಕೂಡ ಕೃಷಿಯಲ್ಲಿ ತೊಡಗಬೇಕು ಎಂದು ಸಿಎಂ ಸಿದ್ದರಾಮಯ್ಯ ನುಡಿದರು.
ಬೆಂಗಳೂರಿನ ಅರಮನೆ ಮೈದಾನದಲ್ಲಿ “ಅಂತಾರಾಷ್ಟ್ರೀಯ ವಾಣಿಜ್ಯ ಮೇಳ-2026 ಹಾಗೂ ಉತ್ಪಾದನೋತ್ತರ ಕೃಷಿ-ರೈತರ ಸಬಲೀಕರಣ ಕಾರ್ಯಕ್ರಮ”ವನ್ನು ಉದ್ಘಾಟಿಸಿ, ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿ ಪ್ರದಾನ ಮಾಡಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.
ಕೃಷಿ ಕ್ಷೇತ್ರ ಲಾಭದಾಯಕವಾಗಬೇಕು. ರೈತರು ಸಬಲೀಕರಣ ಆಗಬೇಕು. ಈಗಾಗಲೇ ಕೃಷಿ ಪಂಡಿತ ಪ್ರಶಸ್ತಿ ಪ್ರದಾನ ಮಾಡಿದ್ದೇವೆ. ಪ್ರಶಸ್ತಿ ಪಡೆದವರು ಇನ್ನಷ್ಟು ಸಾಧನೆ ಮಾಡಲಿ ಎಂದು ಬಯಸುತ್ತೇನೆ. ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡುವ ರೈತರಿಗೆ ಮಾರ್ಗದರ್ಶಕರಾಗಬೇಕು. ಉತ್ಪಾದನಾ ಚಟುವಟಿಕೆಯಲ್ಲಿ ರೈತರು ತೊಡಗಬೇಕು. ಕೃಷಿ ಕ್ಷೇತ್ರದಲ್ಲಿ ಮಹಿಳೆಯರು ತೊಡಗಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಕೃಷಿ ಸಚಿವ ಚಲುವರಾಯಸ್ವಾಮಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
Key words: Farmers, empowered, agriculture, CM Siddaramaiah
The post ರೈತರು ಸಬಲೀಕರಣವಾಗಬೇಕು: ಕೃಷಿಯಲ್ಲಿ ಮಹಿಳೆಯರೂ ತೊಡಗಬೇಕು- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




