22
February, 2026

A News 365Times Venture

22
Sunday
February, 2026

A News 365Times Venture

ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಬಿಜೆಪಿ ಶಾಸಕ

Date:

ಗದಗ,ಫೆಬ್ರವರಿ,21,2026 (www.justkannadda.in):  ಸಣ್ಣನೀರಾವರಿ ಇಲಾಖೆ ಕಾಮಗಾರಿ ಗುತ್ತಿಗೆ ನೀಡಲು 5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಬಿಜೆಪಿ ಶಾಸಕ ಚಂದ್ರು ಲಮಾಣಿ ಸೇರಿ ಮೂವರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.

ಗದಗ ಜಿಲ್ಲೆ ಶಿರಹಟ್ಟಿ ಶಾಸಕ ಚಂದ್ರು ಲಮಾಣಿ ಇವರ ಪಿಎಗಳಾದ ಮಂಜುನಾಥ್ , ಗುರು ಲೋಕಾಯುಕ್ತ ಬಲೆಗೆ ಬಿದ್ದವರು. ರಸ್ತೆ ಬದಿ ತಡೆಗೋಡೆ ನಿರ್ಮಾಣ ಕಾಮಗಾರಿ ವಹಿಸಲು ಗುತ್ತಿಗೆದಾರರ ವಿಜಯ್ ಬಳಿ 10 ಲಕ್ಷ ರೂ.ಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಈ ನಡುವೆ ಶಾಸಕ ಚಂದ್ರು ಲಮಾಣಿಗೆ ಸೇರಿದ ಲಕ್ಷ್ಮೇಶ್ವರ ಪಟ್ಟಣದಲ್ಲಿರುವ ಬಾಲಾಜಿ ಆಸ್ಪತ್ರೆ ಮೇಲೆ ಲೋಕಾಯುಕ್ತ ಎಸ್ ಪಿ ಸಿದ್ದಲಿಂಗಪ್ಪ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು  ಶಾಸಕ ಚಂದ್ರು ಲಮಾಣಿ ಮತ್ತು ಪಿಎಗಳು ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿದ್ದಾರೆ. ಶಾಸಕ ಚಂದ್ರು ಲಮಾಣಿ ಅವರನ್ನ ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

Key words: BJP MLA, Lokayukta, trap, accepting, bribe

The post ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಬಿಜೆಪಿ ಶಾಸಕ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಚಂದ್ರ ಲೋಕಕ್ಕೆ ಕಾಲಿಟ್ಟರೂ, ಕಾಲ ಬುಡದಲ್ಲೇ ಮರ್ಯಾದಾ ಹತ್ಯೆ ಬೇಸರದ ಸಂಗತಿ- ಕೆ.ವಿ.ಪ್ರಭಾಕರ್

ಕೋಲಾರ ಫೆಬ್ರವರಿ, 21,2026 (www.justkannada.in):  ಚಂದ್ರ ಲೋಕಕ್ಕೆ ಕಾಲಿಟ್ಟರೂ, ಕಾಲ ಬುಡದಲ್ಲೇ...

ತಪ್ಪು ಮಾಡಿದವರ ವಿರುದ್ದ ಕ್ರಮ ನಿಶ್ಚಿತ- ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು,ಫೆಬ್ರವರಿ,21,2026 (www.justkannada.in): ಬಾಗಲಕೋಟೆಯಲ್ಲಿ ಶಿವಾಜಿ ಮೆರವಣಿಗೆ ಮೇಲೆ ಕಲ್ಲು ತೂರಾಟ ಪ್ರಕರಣ...

ಖರ್ಗೆ ಅವರಿಂದ ಆದಷ್ಟು ಬೇಗ ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸುವ ಭರವಸೆ- ಸಚಿವ ಸತೀಶ್ ಜಾರಕಿಹೊಳಿ

ನವದೆಹಲಿ,ಫೆಬ್ರವರಿ,21,2026 (www.justkannada.in): ರಾಜ್ಯದಲ್ಲಿ ಉಂಟಾಗಿರುವ ನಾಯಕತ್ವ ಬದಲಾವಣೆ ಗೊಂದಲ ವಿಚಾರವನ್ನು ಆದಷ್ಟು...

ಜಾತಿಧರ್ಮಗಳನ್ನು ಮೀರಿ ಮಾನವೀಯತೆಯಿಂದ ಸೇವೆ ಸಲ್ಲಿಸಿ- ಸಿಎಂ ಸಿದ್ದರಾಮಯ್ಯ ಕಿವಿಮಾತು

ಬೆಂಗಳೂರು, ಫೆಬ್ರವರಿ ,21,2026 (www.justkannada.in):  ವೈದ್ಯಕೇತರ ಸಿಬ್ಬಂದಿಗಳೂ ವೈದ್ಯರಷ್ಟೇ ಪ್ರಮುಖರು. ಆರೋಗ್ಯ...