ಬೆಂಗಳೂರು ಗ್ರಾಮಾಂತರ, ಜುಲೈ,17,2025 (www.justkannada.in):ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ನವದೆಹಲಿ ಇವರಿಂದ ಪ್ರತಿ ವರ್ಷದ ಡಿಸೆಂಬರ್ 3ನೇ ದಿನಾಂಕದಂದು ಆಚರಿಸಲಾಗುವ ರಾಷ್ಟ್ರ ಮಟ್ಟದ “ವಿಕಲಚೇತನರ ದಿನಾಚರಣೆ” ಸಮಾರಂಭದಲ್ಲಿ ವಿಕಲಚೇತನರ ಕ್ಷೇತ್ರಕ್ಕೆ ಗಣನೀಯ ಸೇವೆ ಸಲ್ಲಿಸಿದ ವ್ಯಕ್ತಿಗಳ ಮತ್ತು ಸಂಸ್ಥೆಗಳಿಗೆ “ರಾಷ್ಟ್ರ ಪ್ರಶಸ್ತಿ-2025” ನೀಡುವ ಸಂಬಂಧ ಅರ್ಹ ವ್ಯಕ್ತಿ, ಸಂಸ್ಥೆಗಳಿಂದ ಅರ್ಜಿ ಅಹ್ವಾನಿಸಲಾಗಿದೆ.
ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ನವದೆಹಲಿ ಇವರು ಅರ್ಜಿ ಆಹ್ವಾನಿಸಿದ್ದು, www.depwd.gov.in ಮತ್ತು ರಾಷ್ಟ್ರೀಯ ಪುರಸ್ಕಾರ ಪೋರ್ಟಲ್ www.awards.gov.in ವೆಬ್ಸೈಟ್ ಮೂಲಕ ಜುಲೈ 31 ರೊಳಗೆ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು ಎಂದು ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Key words: Service, disabled people, Applications, National Award
The post ವಿಕಲಚೇತನರ ಕ್ಷೇತ್ರದಲ್ಲಿ ಸೇವೆ: ರಾಷ್ಟ್ರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.