23
August, 2026

A News 365Times Venture

23
Sunday
August, 2026

A News 365Times Venture

ವಿಪಕ್ಷಗಳ ದನಿ ಅಡಗಿಸುವ ಪ್ರಯತ್ನ: ಮಾನನಷ್ಟ ಮೊಕದ್ದಮೆಗೆ ಮುಂದಾದ ಸರ್ಕಾರದ ವಿರುದ್ದ ಆರ್.ಅಶೋಕ್ ಕಿಡಿ

Date:

ಬೆಂಗಳೂರು,ಮೇ,26,2025 (www.justkannada.in): ರಾಜ್ಯ ಸರ್ಕಾರದ ವೈಪಲ್ಯಗಳ ಬಗ್ಗೆ ಚಾರ್ಜ್ ಶೀಟ್ ಬಿಡುಗಡೆ ಮಾಡಿದ ರಾಜ್ಯ ಬಿಜೆಪಿ ವಿರುದ್ದ ಕಾಂಗ್ರೆಸ್ ಸರ್ಕಾರ ಮಾನನಷ್ಟ ಮೊಕದ್ದಮೆ ಹೂಡಲು ಮುಂದಾಗಿದ್ದು ಈ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಆರ್.ಅಶೋಕ್, 40% ಸರ್ಕಾರ ಎಂಬ ಹಸಿ ಸುಳ್ಳು, ಅಪಪ್ರಚಾರದ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಜವಾಬ್ದಾರಿಯುತ ವಿಪಕ್ಷವಾಗಿ ಸರ್ಕಾರದ ಭ್ರಷ್ಟಾಚಾರ, ವೈಫಲ್ಯಗಳ ಬಗ್ಗೆ ದನಿ ಎತ್ತುತ್ತಿರುವ ಬಿಜೆಪಿ ಪಕ್ಷದ ಮೇಲೆ ಸುಳ್ಳು ಕೇಸು ದಾಖಲಿಸುವ ಮೂಲಕ ವಿಪಕ್ಷಗಳ ದನಿ ಅಡಗಿಸುವ ಪ್ರಯತ್ನ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಿಎಂ ಸಿದ್ದರಾಮಯ್ಯನವರೇ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರೇ, ನಿಮ್ಮ ಗೊಡ್ಡು ಬೆದರಿಕೆಗಳಿಗೆ, ನಟ್ಟು-ಬೋಲ್ಟು ಟೈಟು ಮಾಡುವ ಧಮ್ಕಿಗಳಿಗೆ ನಾವು ಜಗ್ಗುವುದು ಇಲ್ಲ, ಬಗ್ಗುವುದೂ ಇಲ್ಲ. ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ, ವೈಫಲ್ಯ, ಎಡವಟ್ಟುಗಳನ್ನು ಜನರಿಗೆ ತಲುಪಿಸುವ ನಮ್ಮ ಸಾಂವಿಧಾನಿಕ ದತ್ತ ಕರ್ತವ್ಯ ಎಗ್ಗಿಲ್ಲದೆ ಮುಂದುವರೆಯಲಿದೆ ಎಂದು ಆರ್.ಅಶೋಕ್ ಹರಿಹಾಯ್ದಿದ್ದಾರೆ.

Key words: R. Ashok, government, defamation case

The post ವಿಪಕ್ಷಗಳ ದನಿ ಅಡಗಿಸುವ ಪ್ರಯತ್ನ: ಮಾನನಷ್ಟ ಮೊಕದ್ದಮೆಗೆ ಮುಂದಾದ ಸರ್ಕಾರದ ವಿರುದ್ದ ಆರ್.ಅಶೋಕ್ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ತಮಿಳುನಾಡಿಗೆ ನೀರು: ಕಬಿನಿ ಡ್ಯಾಂ ಬಳಿ ರೈತರ ಪ್ರತಿಭಟನೆ, ಮುತ್ತಿಗೆಗೆ ಯತ್ನ

ಮೈಸೂರು,ಆಗಸ್ಟ್,22,2026 (www.justkannada.in):  ತಮಿಳುನಾಡಿಗೆ ನಿತ್ಯ ನೀರು ಹರಿಸುವ ಮೂಲಕ ಕಾವೇರಿ ನೀರು...

KSOU ಬಿಒಎಂ ನೇಮಕಕ್ಕೆ ರಾಜಕೀಯ ಲೆಕ್ಕಾಚಾರ : ಸಾಮಾಜಿಕ ನ್ಯಾಯದ ಸಮೀಕರಣದಲ್ಲಿ ತಿಮ್ಮಯ್ಯ–ಶಿವಕುಮಾರ್ ಹೆಸರು!

ಮೈಸೂರು, ಆ.೨೨,೨೦೨೬: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಬೋರ್ಡ್ ಆಫ್ ಮ್ಯಾನೇಜ್‌ಮೆಂಟ್‌...

ಬಗೆದಷ್ಟು ಬಯಲಿಗೆ ‘ಚಿನ್ನತಂಬಿ’ಯ ಕರ್ಮಕಾಂಡ: ಮತ್ತೆರೆಡು FIR ದಾಖಲು

ಮೈಸೂರು,ಆಗಸ್ಟ್,22,2026 (www.justkannada.in): ಚಿನ್ನ ಗಿರವಿ ಇಟ್ಟುಕೊಂಡು ನೂರಾರು ಗ್ರಾಹಕರಿಗೆ ವಂಚಿಸಿರುವ ಸುಂದರ್‌...

IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ ನಾಪತ್ತೆ

ಬೆಂಗಳೂರು, ಆಗಸ್ಟ್, 22,2026 (www.justkannada.in):   ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ...