27
April, 2026

A News 365Times Venture

27
Monday
April, 2026

A News 365Times Venture

ವಿಬಿ ಜಿ ರಾಮ್ ಜಿ ಕಾಯ್ದೆ ವಿರುದ್ಧ ಸಿಎಂ ಸಿದ್ದರಾಮಯ್ಯ ನಿರ್ಣಯ ಮಂಡನೆ: ವಿಪಕ್ಷಗಳಿಂದ ಗದ್ದಲ

Date:

ಬೆಂಗಳೂರು,ಫೆಬ್ರವರಿ,3,2026 (www.justkannada.in): ಕೇಂದ್ರ ಸರ್ಕಾರ ಇತ್ತೀಚಿಗೆ ಜಾರಿಗೆ ತಂದ ವಿಬಿ ಜಿ ರಾಮ್ ಜಿ ಕಾಯ್ದೆದ ವಿರುದ್ದ ಸಿಎಂ ಸಿದ್ದರಾಮಯ್ಯ ಇಂದು ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು.

ವಿಧಾನಸಭೆ ಕಲಾಪದಲ್ಲಿ ವಿಪಕ್ಷ ಬಿಜೆಪಿಯ ತೀವ್ರ ವಿರೋಧದ ನಡುವೆಯೂ ವಿಬಿಜಿ ರಾಮ್ ಜಿ ಕಾಯ್ದೆ ರದ್ದುಗೊಳಿಸಿ ಮನರೇಗಾವನ್ನು ಮರು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಸಿಎಂ ಸಿದ್ದರಾಮಯ್ಯ ನಿರ್ಣಯ ಮಂಡಿಸಿದರು.

ಕರ್ನಾಟಕದ ಗ್ರಾಮೀಣ ಜನರ ಬದುಕುವ ಹಕ್ಕನ್ನು ರಕ್ಷಿಸುವ ದೃಷ್ಟಿಯಿಂದ, ಈ ಸದನವು ಕೇಂದ್ರ ಸರ್ಕಾರವನ್ನು ತಕ್ಷಣವೇ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್(ಗ್ರಾಮೀಣ) (ವಿಬಿ-ಗ್ರಾಮ್-ಜಿ) ಕಾಯ್ದೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಸಿಎಂ ಸಿದ್ದರಾಮಯ್ಯ ಮಂಡಿಸಿದ ನಿರ್ಣಯಕ್ಕೆ ಬಿಜೆಪಿ ಸದಸ್ಯರು ವಿರೋಧ ವ್ಯಕ್ತಪಡಿಸಿದರು. ಈ ವೇಳೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ವಿಪಕ್ಷ ನಾಯಕ ಆರ್.ಅಶೋಕ್ ಇದು ಸದನದ ನಿರ್ಣಯವಲ್ಲ. ಈ ನಡೆಯನ್ನು ಸದನ ತೀವ್ರವಾಗಿ ವಿರೋಧಿಸುತ್ತದೆ ಎಂದು ಕಿಡಿಕಾರಿದರು.

Key words: CM Siddaramaiah, against, VB G Ram Ji Act, Session

The post ವಿಬಿ ಜಿ ರಾಮ್ ಜಿ ಕಾಯ್ದೆ ವಿರುದ್ಧ ಸಿಎಂ ಸಿದ್ದರಾಮಯ್ಯ ನಿರ್ಣಯ ಮಂಡನೆ: ವಿಪಕ್ಷಗಳಿಂದ ಗದ್ದಲ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರು: ಜೆಎಸ್ಎಸ್ ಕಾರ್ಪೊರೇಟ್ ಲಾ ಮೂಟ್ ಕೋರ್ಟ್ ಸ್ಪರ್ಧೆ ಯಶಸ್ವಿ

ಮೈಸೂರು,ಏಪ್ರಿಲ್,27,2026 (www.justkannada.in): ಜೆಎಸ್ಎಸ್ ಮಹಾವಿದ್ಯಾಪೀಠದ ಅಧೀನದಲ್ಲಿರುವ ಮೈಸೂರು ಕುವೆಂಪುನಗರದ ಜೆಎಸ್ಎಸ್ ಕಾನೂನು...

ಸಚಿವ ಸುಧಾಕರ್ ಗೆ ಏನಾಗಿದೆ? ಮಾಹಿತಿ ಏಕೆ ಮುಚ್ಚಿಡುತ್ತಿದ್ದೀರಿ? ಬಹಿರಂಗಪಡಿಸಿ- ಕೇಂದ್ರ ಸಚಿವ HDK ಆಗ್ರಹ

ಬೆಂಗಳೂರು,ಏಪ್ರಿಲ್,27,2026 (www.justkannada.in): ಸಚಿವ ಡಿ.ಸುಧಾಕರ್ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು...

ಹಠಾತ್ ಕುಸಿದು ಬಿದ್ದು ಕೋಮಾಗೆ ಜಾರಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಸಾವು

ಹಾಸನ, ಏಪ್ರಿಲ್,27,2026 (www.justkannada.in): ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ...

ಸಂಪುಟ ಪುನಾರಚನೆಯಾಗಿ ಬೇರೆಯವರಿಗೂ ಅವಕಾಶ ಸಿಗಬೇಕು- ಸಚಿವ ದಿನೇಶ್ ಗುಂಡೂರಾವ್

ಹುಬ್ಬಳ್ಳಿ,ಏಪ್ರಿಲ್,27,2026 (www.justkannada.in): ಸಚಿವ ಸಂಪುಟ ಪುನಾರಚನೆಯಾಗಿ ಬೇರೆಯವರಿಗೂ ಅವಕಾಶ  ಸಿಗಬೇಕು ಎಂದು...