29
August, 2026

A News 365Times Venture

29
Saturday
August, 2026

A News 365Times Venture

ಶಿಕ್ಷಕರ ದಿನಾಚರಣೆ ಸಿದ್ಧತೆ ಕುರಿತು ಪೂರ್ವಭಾವಿ ಸಭೆ: ಅಧಿಕಾರಿಗಳಿಗೆ ಅಗತ್ಯ ಸೂಚನೆ

Date:

ಬೆಂಗಳೂರು, ಆಗಸ್ಟ್,28,2026 (www.justkannada.in):   ಸೆಪ್ಟೆಂಬರ್ 5ರಂದು ಆಯೋಜಿಸಲಾಗಿರುವ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಸಿದ್ಧತೆ ಕುರಿತು ಇಂದು ಬೆಂಗಳೂರಿನ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್‌ ನಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಸಭೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹಾಗೂ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರು ಕಾರ್ಯಕ್ರಮದ ಸಿದ್ಧತೆಗಳ ಕುರಿತು ಸಮಾಲೋಚನೆ ನಡೆಸಿದರು.

ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಯೋಜಿಸುವುದು, ಕಾರ್ಯಕ್ರಮದ ರೂಪುರೇಷೆ, ವಿವಿಧ ಕಾರ್ಯಕ್ರಮಗಳ ಆಯೋಜನೆ, ಶಿಕ್ಷಕರಿಗೆ ಗೌರವ ಸಲ್ಲಿಸುವ ವಿಧಾನ ಸೇರಿದಂತೆ ಹಲವು ಪ್ರಮುಖ ವಿಚಾರಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಶಿಕ್ಷಕರ ದಿನಾಚರಣೆಯ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳು ಹಾಗೂ ಕಾರ್ಯಕ್ರಮದ ಯಶಸ್ವಿ ಆಯೋಜನೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಯಿತು.

ಸಭೆಯಲ್ಲಿ ಕಂಪ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ ಎನ್ ಗಣೇಶ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Key words: Preparatory, meeting, Teachers’ Day, Minister Madhu Bangarappa

The post ಶಿಕ್ಷಕರ ದಿನಾಚರಣೆ ಸಿದ್ಧತೆ ಕುರಿತು ಪೂರ್ವಭಾವಿ ಸಭೆ: ಅಧಿಕಾರಿಗಳಿಗೆ ಅಗತ್ಯ ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಾನವ–ಆನೆ ಸಂಘರ್ಷ, ಕಸ್ತೂರಿ ರಂಗನ್ ವರದಿ ಅನುಷ್ಠಾನ: ಸಮಗ್ರ ಪ್ರಸ್ತಾವನೆ ಸಲ್ಲಿಸಿದ ಸಂಸದ ಯದುವೀರ್

ಬೆಂಗಳೂರು/ಮೈಸೂರು, ಆಗಸ್ಟ್, 28, 2026 (www.justkannada.in): ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದ...

ನನ್ನಿಂದ ಪಕ್ಷಕ್ಕೆ ಮುಜುಗರವಾದ್ರೆ ರಾಜೀನಾಮೆ ಕೊಡ್ತೀನಿ- ಸಚಿವ ಬಿ. ನಾಗೇಂದ್ರ

ಬೆಂಗಳೂರು,ಆಗಸ್ಟ್,28,2026 (www.justkannada.in): ನನ್ನಿಂದ ಪಕ್ಷಕ್ಕೆ ಮುಜುಗರವಾದರೆ ರಾಜೀನಾಮೆ ಕೊಡುತ್ತೇನೆ ಎಂದು ಸಚಿವ...

ಮಂಡ್ಯಕ್ಕೆ ಜಪಾನ್‌ ನಿಯೋಗ ಭೇಟಿ: HPV, TT ಲಸಿಕಾ ಅಭಿಯಾನಕ್ಕೆ ಮೆಚ್ಚುಗೆ.

  ಕೆ.ಶೆಟ್ಟಿಹಳ್ಳಿ ಆರೋಗ್ಯ ಕೇಂದ್ರದ ಕಾರ್ಯವೈಖರಿಗೆ ಜಪಾನ್‌ ತಂಡ ಮೆಚ್ಚುಗೆ — ಹೊಸ...

ಡಿ.ಎನ್.ಸೊಲ್ಯೂಷನ್ಸ್ ಉದ್ಘಾಟನೆ: ವಿಜಯಪುರದ ನೌಕರರಿಂದ ಸಚಿವ ಎಂ.ಬಿ ಪಾಟೀಲ್ ಭೇಟಿ

ಬೆಂಗಳೂರು,ಆಗಸ್ಟ್,28,2026 (www.justkannada.in):  ಯಾವುದೋ ಒಂದು ಪ್ರತಿಷ್ಠಿತ ಕಂಪನಿಯ ಉದ್ಘಾಟನೆಯೋ, ಮತ್ತೊಂದು ಕಂಪನಿಯೊಂದಿಗೆ...