ಬೆಂಗಳೂರು,ಏಪ್ರಿಲ್,6,2026 (www.justkannada.in): ರಾಜ್ಯದಲ್ಲಿ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಅಭಾವದಿಂದ ಆಟೋ ಚಾಲಕರು, ಹೋಟೆಲ್ ಉದ್ಯಮ ಸಂಕಷ್ಟಕ್ಕೆ ಸಿಲುಕಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವ ರಾಮಲಿಂಗರೆಡ್ಡಿ, ಅಟೋ ಚಾಲಕರಿಗೆ ಎಲ್ ಪಿಜಿ ಗ್ಯಾಸ್ ಅಭಾವ ಉಂಟಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಎಲ್ ಪಿಜಿ ಗ್ಯಾಸ್ ಪೆಟ್ರೋಲ್ ಡೀಸೆಲ್ ಎಲ್ಲವನ್ನೂ ಪೂರೈಸುವುದು ಕೇಂದ್ರ ಸರ್ಕಾರದ ಹೊಣೆ. ರಾಜ್ಯದಲ್ಲಿ ಗ್ಯಾಸ್ ಅಭಾವದಿಂದಾಗಿ ಹಲವು ಗ್ಯಾಸ್ ಏಜೆನ್ಸಿಗಳು ಬಂದ್ ಆಗುತ್ತಿವೆ ಎಂದರು.
ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಎಲ್ ಪಿಜಿ ಗ್ಯಾಸ್ ಪೂರೈಕೆ ಸಂಬಂದ ಸಿಎಂ ಸಿದ್ದರಾಮಯ್ಯ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ ಆಹಾರ ಸಚಿವರು ಕೇಂದ್ರದ ಸಂಪರ್ಕದಲ್ಲಿದ್ದಾರೆ. ಇನ್ನು ಸದ್ಯಕ್ಕೆ ಸಾರಿಗೆ ಬಸ್ ಪ್ರಯಾಣದ ಟಿಕೆಟ್ ದರ ಏರಿಕೆ ಮಾಡಲ್ಲ ಎಂದು ಸಚಿವ ರಾಮಲಿಂಗರೆಡ್ಡಿ ಸ್ಪಷ್ಟಪಡಿಸಿದರು.
Key words: no increase, bus fares, Minister, Ramalingareddy
The post ಸದ್ಯಕ್ಕೆ ಬಸ್ ಪ್ರಯಾಣದ ಟಿಕೆಟ್ ದರ ಏರಿಕೆ ಇಲ್ಲ- ಸಚಿವ ರಾಮಲಿಂಗರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




