10
March, 2026

A News 365Times Venture

10
Tuesday
March, 2026

A News 365Times Venture

ಸರ್ಕಾರದ ಸುತ್ತೋಲೆ, ನಿರ್ದೇಶನಗಳನ್ನು ಉಲ್ಲಂಘಿಸಿ ಸ್ಥಿರಾಸ್ತಿ ನೋಂದಣಿ ಮಾಡಿದ್ರೆ ಶಿಸ್ತು ಕ್ರಮ- ಉಪನೋಂದಣಾಧಿಕಾರಿಗಳಿಗೆ ಎಚ್ಚರಿಕೆ

Date:

ಬೆಂಗಳೂರು,ಮಾರ್ಚ್,12,2025 (www.justkannada.in): ಕಾವೇರಿ-2.0 ತಂತ್ರಾಂಶದೊಂದಿಗೆ ಇ-ಆಸ್ತಿ ತಂತ್ರಾಂಶವನ್ನು ಸಂಯೋಜನೆಯನ್ನು ಕಡ್ಡಾಯವಾಗಿ ಅನುಷ್ಠಾನದಲ್ಲಿ ತರುವ ಕುರಿತು ನೋಂದಣಿ ಮತ್ತು ಮುದ್ರಣ ಇಲಾಖೆ ಆದೇಶ ಹೊರಡಿಸಿದೆ.

ಈ ಕುರಿತು ಆದೇಶ ಹೊರಡಿಸಿರುವ ನೋಂದಣಿ ಮಹಾ ಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರು,  ಪ್ರಸ್ತಾವಿತ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ಸರ್ಕಾರದ ಸುತ್ತೋಲೆಗಳ ಹಾಗೂ ಈ ಕಛೇರಿಯ ಸಮಸಂಖ್ಯೆ ಪತ್ರಗಳ ನಿರ್ದೇಶನನ್ನಯ ರಾಜ್ಯಾದ್ಯಂತ ಎಲ್ಲಾ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಗ್ರಾಮ ಪಂಚಾಯತಿ ಅಧೀನದಲ್ಲಿನ ಸ್ವತ್ತುಗಳಿಗೆ ಕಡ್ಡಾಯವಾಗಿ ಇ-ಆಸ್ತಿ, ಇ-ಸ್ವತ್ತು ಬಳಸಿ ನೋಂದಣಿ ಪ್ರಕ್ರಿಯೆ ನಡೆಸಲು ಸೂಚಿಸಲಾಗಿದೆ. ಆದಾಗ್ಯೂ ಕೆಲವೊಂದು ಉಪನೋಂದಣಾಧಿಕಾರಿಗಳು ಇ-ಖಾತ ಇದ್ದಾಗ್ಯೂ ತಪ್ಪಾಗಿ ಅರ್ಥೈಸಿಕೊಂಡು, ಗೊಂದಲ ಸೃಷ್ಟಿ ಮಾಡುತ್ತಿರುವುದು ಕೇಂದ್ರ ಕಛೇರಿಯ ಗಮನಕ್ಕೆ ಬಂದಿದೆ.

ಈ ಮೂಲಕ ರಾಜ್ಯದಲ್ಲಿನ ಉಪನೋಂದಣಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸ್ಥಿರಾಸ್ತಿಗಳಿಗೆ ಕಡ್ಡಾಯವಾಗಿ ಇ-ತಂತ್ರಾಂಶದಿಂದ ನಿಶ್ಚಿತವಾದ ಇ-ಸ್ವತ್ತು ಹಾಗೂ ಇ-ಆಸ್ತಿಯನ್ನು ಇ-ತಂತ್ರಾಂಶದಿಂದ ಮಾಹಿತಿ ಪಡೆದು ‘ಎ’ ಖಾತೆ ಅಥವಾ ‘ಬಿ’ ಖಾತೆ ಇದ್ದರೂ ಸಹ ನೋಂದಣಿ ಮಾಡಲು ಸೂಚಿಸಲಾಗಿದೆ.

ಉಲ್ಲೇಖಿತ ಸರ್ಕಾರದ ಸುತ್ತೋಲೆ ಹಾಗೂ ಪತ್ರಗಳಲ್ಲಿನ ನಿರ್ದೇಶನಗಳನ್ನು ಉಲ್ಲಂಘಿಸಿ ನೋಂದಣಿ ಮಾಡಲು ಅವಕಾಶವಿರುವುದಿಲ್ಲ. ಸರ್ಕಾರದ ಸುತ್ತೋಲೆ ಹಾಗೂ ಕೇಂದ್ರ ಕಛೇರಿಯ ನಿರ್ದೇಶನಗಳನ್ನು ಉಲ್ಲಂಘಿಸಿ ಸ್ಥಿರಾಸ್ತಿಗಳನ್ನು ನೋಂದಾಯಿಸುವ ಉಪನೋಂದಣಾಧಿಕಾರಿಗಳ ವಿರುದ್ಧ KCSR ನಿಯಮಗಳಡಿಯಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

Key words: Mandatory, implementation, e-Asthi software, Cauvery-2.0 software

The post ಸರ್ಕಾರದ ಸುತ್ತೋಲೆ, ನಿರ್ದೇಶನಗಳನ್ನು ಉಲ್ಲಂಘಿಸಿ ಸ್ಥಿರಾಸ್ತಿ ನೋಂದಣಿ ಮಾಡಿದ್ರೆ ಶಿಸ್ತು ಕ್ರಮ- ಉಪನೋಂದಣಾಧಿಕಾರಿಗಳಿಗೆ ಎಚ್ಚರಿಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕಲ್ಯಾಣ ಕರ್ನಾಟಕ ಭಾಗದಲ್ಲಿ ವಿಮಾನ ನಿಲ್ದಾಣ: ಸಭೆ ಮಾಡಿ ಅಂತಿಮ ನಿರ್ಧಾರ- ಎಂ.ಬಿ ಪಾಟೀಲ್

ಬೆಂಗಳೂರು,ಮಾರ್ಚ್,10,2026 (www.justkannada.in): ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಳ್ಳಾರಿ, ವಿಜಯನಗರ ಮತ್ತು ಕೊಪ್ಪಳ...

ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ಕೇಂದ್ರ ಸಚಿವರಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,10,2026 (www.justkannada.in):  ಮಧ್ಯಪ್ರಾಚ್ಯ ದೇಶಗಳಲ್ಲಿ ಸಂಘರ್ಷ ಪರಿಸ್ಥಿತಿಯ ಬಿಸಿ ಭಾರತಕ್ಕೂ ತಟ್ಟಿದ್ದು...

ನಾಳೆ ಸರ್ಕಾರಿ ವೈದ್ಯರು ಸಿಬ್ಬಂದಿಗಳ ಮುಷ್ಕರ: ಸಂಧಾನ ಸಭೆಗೆ ಮುಂದಾದ ಸಿಎಂ

ಬೆಂಗಳೂರು,ಮಾರ್ಚ್,10,2026 (www.justkannada.in):  ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆಯಿಂದ  ಆರೋಗ್ಯ ಇಲಾಖೆಯ...

ಭಾರತಕ್ಕೆ ಯುದ್ದದ ಎಫೆಕ್ಟ್: 56 ಇಂಚಿನ ಎದೆಯ ಪ್ರಧಾನಿ ಉತ್ತರಕ್ಕಾಗಿ ಕಾಯುತ್ತಿದ್ದೇವೆ- ಸಚಿವ ಸುಧಾಕರ್ ಟಾಂಗ್

ಬೆಂಗಳೂರು,ಮಾರ್ಚ್,10,2026 (www.justkannada.in):  ಇರಾನ್ ಮೇಲೆ ಇಸ್ರೇಲ್ ಮತ್ತು ಅಮೇರಿಕಾ ದಾಳಿಯಿಂದಾಗಿ ಭಾರತ...