ಬೆಂಗಳೂರು, ಜುಲೈ, 9,2025 (www.justkannada.in): ಸಿಎಂ, ಡಿಸಿಎಂ ಹೆಸರಲ್ಲಿ 20ಕ್ಕೂ ಹೆಚ್ಚು ಜನರಿಗೆ ಕೋಟಿ ಕೋಟಿ ರೂ. ಹಣ ವಂಚಿಸಿದ್ದ ಮಹಿಳೆಯನ್ನ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ.
ಸವಿತಾ ಬಂಧಿತ ಮಹಿಳೆ. ಈಕೆ ಕಿಟ್ಟಿ ಪಾರ್ಟಿಯಲ್ಲಿ ಪರಿಚಯವಾದ ಸ್ನೇಹಿತೆಯರಿಗೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದು ವಂಚನೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹೆಸರು ದುರ್ಬಳಕೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.
ಕಿಟ್ಟಿ ಪಾರ್ಟಿಯಲ್ಲಿ ನೆಪದಲ್ಲಿ ಶ್ರೀಮಂತ ಮಹಿಳೆಯರನ್ನೇ ಟಾರ್ಗೇಟ್ ಮಾಡುತ್ತಿದ್ದ ಸವಿತಾ, ಈವರೆಗೆ 20ಕ್ಕೂ ಹೆಚ್ಚು ಮಹಿಳೆಯರಿಗೆ ಬರೋಬ್ಬರಿ 30 ಕೋಟಿ ರೂಪಾಯಿಗೂ ಅಧಿಕ ಹಣ ವಂಚನೆ ಮಾಡಿದ್ದಾಳೆ ಎಂದು ತಿಳಿದುಬಂದಿದ್ದು, ಇದೀಗ ಆರೋಪಿ ಸವಿತಾಳನ್ನ ಪೊಲೀಸರು ಬಂಧಿಸಿದ್ದಾರೆ.
Key words: fraud, money, woman, Arrest
The post ಸಿಎಂ, ಡಿಸಿಎಂ ಹೆಸರಲ್ಲಿ 20ಕ್ಕೂ ಹೆಚ್ಚು ಮಂದಿಗೆ ಕೋಟಿ ಕೋಟಿ ಹಣ ವಂಚಿಸಿದ್ದ ಮಹಿಳೆ ಬಂಧನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.