7
March, 2026

A News 365Times Venture

7
Saturday
March, 2026

A News 365Times Venture

ಸಿಎಂ ಸಿದ್ದರಾಮಯ್ಯ ಅವರ ಸೌಜನ್ಯದ ನಡೆ: ದಿ. ಗೋಪಾಲಗೌಡರ ಪುತ್ರ ರಾಮಮನೋಹರ್ ಧನ್ಯವಾದ.

Date:

 

ಬೆಂಗಳೂರು, ಮಾ.೦೭,೨೦೨೬ : ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಗೋಪಾಲಗೌಡರ ಹೆಸರನ್ನು ಇಡುವುದಾಗಿ  ಬಜೆಟ್‌ನಲ್ಲಿ ಘೋಷಿಸಿರುವ ರಾಜ್ಯ ಸರ್ಕಾರದ  ನಿರ್ಧಾರವನ್ನು ಗೋಪಾಲಗೌಡರ ಪುತ್ರ ರಾಮಮನೋಹರ್ ಸ್ವಾಗತಿಸಿ, ಇದು ಸಿಎಂ ಸಿದ್ದರಾಮಯ್ಯ ಅವರ ಸೌಜನ್ಯದ ನಡೆ ಎಂದು ಹೇಳಿ ಅಭಿಮಾನಪೂರ್ವಕವಾಗಿ ಧನ್ಯವಾದ ತಿಳಿಸಿದ್ದಾರೆ.

ಈ ಸಂಬಂಧ ಜಸ್ಟ್‌ ಕನ್ನಡ ಜತೆ ಮಾತನಾಡಿದ ದಿ. ಗೋಪಾಲಗೌಡರ ಪುತ್ರ ರಾಮಮನೋಹರ್ ಹೇಳಿದಿಷ್ಟು..

ಗೋಪಾಲಗೌಡರ ಶತಮಾನೋತ್ಸವ ಸಮಾರಂಭದ ವೇಳೆ ವಿಕ್ಟೋರಿಯಾ ಆಸ್ಪತ್ರೆಗೆ ಅವರ ಹೆಸರಿಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ನಮ್ಮ ಈ ಮನವಿಗೆ ಸರಕಾರ ಸ್ಪಂಧಿಸಿ ನಾಮಕರಣ ಮಾಡಲು ಮುಂದಾಗಿರುವುದು ಖುಷಿಯ ಸಂಗತಿ ಎಂದರು.

ಇದಲ್ಲದೆ, ಆರನೇ ತರಗತಿಯ ಪಠ್ಯಪುಸ್ತಕದಿಂದ ಹಿಂಪಡೆಯಲ್ಪಟ್ಟಿದ್ದ ಗೋಪಾಲಗೌಡರ ಚಳವಳಿ ಕುರಿತ ಪಾಠವನ್ನು ಮತ್ತೆ ಸೇರಿಸುವಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಮಾಡಲಾಗಿದೆ ಎಂದು ರಾಮಮನೋಹರ್ ತಿಳಿಸಿದ್ದಾರೆ.

ಮಾದರಿ ಗ್ರಾಮ:

ಗೋಪಾಲಗೌಡರು ಹುಟ್ಟಿ ಬೆಳೆದ ಮನೆಯನ್ನು ಮಾದರಿ ಗ್ರಾಮದ ರೂಪದಲ್ಲಿ ಅಭಿವೃದ್ಧಿಪಡಿಸುವ ಕುರಿತು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಅವರೊಂದಿಗೆ ಚರ್ಚಿಸಿದ್ದು, ಅವರು ಸಹ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.

ಇದೇ ವೇಳೆ ಮೈಸೂರಿನಲ್ಲಿ ದಿ.ಡಾ. ವಿಷ್ಣುಮೂರ್ತಿ ಅವರು ಗೋಪಾಲಗೌಡರ ಹೆಸರಿನಲ್ಲಿ ಆರಂಭಿಸಿದ್ದ ಆಸ್ಪತ್ರೆಯನ್ನು ಈಗ ಪುತ್ರ ಡಾ. ಸಂತೃಪ್ ನೋಡಿಕೊಳ್ಳುತ್ತಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಗೆ ಗೋಪಾಲಗೌಡರ ಹೆಸರಿಡುವ ಸರ್ಕಾರದ ನಿರ್ಧಾರಕ್ಕೆ ಡಾ.ಸಂತೃಪ್ತ್‌ ಸಹ ಮೆಚ್ಚುಗೆ ವ್ಯಕ್ತಪಡಿಸಿದರು.

key words: CM Siddaramaiah, kind gesture, Gopala Gowda, Rammanohar, thanks him.

SUMMARY:

CM Siddaramaiah’s kind gesture: Gopala Gowda’s son Rammanohar thanks him.

Gopala Gowda’s son Rammanohar welcomed the state government’s decision to name Victoria Hospital in Bengaluru after Gopala Gowda in the budget, saying it was a courtesy move by CM Siddaramaiah and expressed his gratitude.

The post ಸಿಎಂ ಸಿದ್ದರಾಮಯ್ಯ ಅವರ ಸೌಜನ್ಯದ ನಡೆ: ದಿ. ಗೋಪಾಲಗೌಡರ ಪುತ್ರ ರಾಮಮನೋಹರ್ ಧನ್ಯವಾದ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಇರಾನ್-ಇಸ್ರೇಲ್ ಸಂಘರ್ಷ: ಬೆಂಗಳೂರಿನಲ್ಲಿ ಅಡುಗೆ ಎಣ್ಣೆ ದರ ಏರಿಕೆ

ಬೆಂಗಳೂರು,ಮಾರ್ಚ್,7,2026 (www.justkannada.in):  ಇರಾನ್ ಮೇಲೆ ಇಸ್ರೇಲ್,  ಅಮೆರಿಕಾ ಮತ್ತು ದಾಳಿ ನಡೆಸಿದ್ದು...

ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ- ಸಿಎಂ ಸಿದ್ದರಾಮಯ್ಯ

ಮೈಸೂರು, ಮಾರ್ಚ್,7,2026 (www.justkannada.in):  ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ. ಸಮಾಜದ...

ಹೈಕಮಾಂಡ್ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್ ಮಂಡಿಸುತ್ತೇನೆ- ಸಿಎಂ ಸಿದ್ದರಾಮಯ್ಯ

ಮೈಸೂರು, ಮಾರ್ಚ್,7,2026 (www.justkannada.in): ಅಧಿಕಾರ ಹಂಚಿಕೆ, ನಾಯಕತ್ವ ಬದಲಾವಣೆ ಚರ್ಚೆ ನಡುವೆ...

ಸಿಎಂರಿಂದ ಒಳ್ಳೆಯ ಬಜೆಟ್: ಕೇಂದ್ರ ಸಹಕಾರ ನೀಡುತ್ತಿಲ್ಲ- ಸಚಿವ ಎನ್.ಎಸ್ ಬೋಸರಾಜು

ಕಲಬುರುಗಿ,ಮಾರ್ಚ್,7,2026 (www.justkannada.in): ನಿನ್ನೆ ಸಿಎಂ ಸಿದ್ದರಾಮಯ್ಯ 2026-27ನೇ ಸಾಲಿನ ರಾಜ್ಯ ಬಜೆಟ್...