ಬೆಂಗಳೂರು,ಜುಲೈ,1,2026 (www.justkannada.in): ಸುಪ್ರೀಂ ಕೋರ್ಟ್’ ಆದೇಶದ ಮೇರೆಗೆ ನಾವು ಫುಟ್ ಪಾತ್ ತೆರವು ಕಾರ್ಯ ಮಾಡುತ್ತಿದ್ದೇವೆ ಎಂದು ಬೆಂಗಳೂರು ನಗರಾಭಿವೃದ್ದಿ ಸಚಿವ ಕೃಷ್ಣಭೈರೇಗೌಡ ತಿಳಿಸಿದರು.
ಸಚಿವ ಕೃಷ್ಣಭೈರೇಗೌಡ ಸೂಚನೆ ಮೇರೆಗೆ ಜಿಬಿಎ ಅಧಿಕಾರಿಗಳು ಇಂದಿನಿಂದ ಬೆಂಗಳೂರಿನಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆಗಿಳಿದಿದ್ದಾರೆ. ಜಿಬಿಎ ವ್ಯಾಪ್ತಿಯ ಎಲ್ಲಾ 5 ನಗರ ಪಾಲಿಕೆಗಳಲ್ಲಿ ಒತ್ತುವರಿ ತೆರವು ಕಾರ್ಯ ನಡೆಯುತ್ತಿದ್ದು, ಫುಟ್ ಪಾತ್ ಗಳನ್ನು ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡ್ತಿರುವವರು, ಹೋಟೆಲ್, ಕೆಫೆ, ಸಣ್ಣ ಪುಟ್ಟ ಅಂಗಡಿಗಳನ್ನು ತೆರವುಗೊಳಿಸಿದ್ದಾರೆ.
ಫುಟ್ಪಾತ್ ತೆರವು ಮಾಡುವುದಕ್ಕೆ ವಿರೋಧ ವ್ಯಕ್ತಪಡಿಸಿ ಬೀದಿಬದಿ ವ್ಯಾಪಾರಿಗಳು ಪ್ರತಿಭಟನೆ ನಡೆಸಿದ್ದಾರೆ. ನೀವು ಫುಟ್ ಪಾತ್ ತೆರವು ಮಾಡಿದರೇ ಮತ್ತೆ ಇಲ್ಲೇ ವ್ಯಾಪಾರ ಮಾಡುತ್ತೇವೆ. ಈ ಸ್ಥಳ ಬಿಟ್ಟು ಹೋಗಲ್ಲ ಎಂದು ಬೀದಿ ವ್ಯಾಪಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾವು 2000 ಕಿ.ಮೀ. ಮಾತ್ರ ತೆರವುಗೊಳಿಸಿ ಎಂದು ಸೂಚನೆ- ಕೃಷ್ಣ ಭೈರೇಗೌಡ
ಈ ಕುರಿತು ಮಾತನಾಡಿರುವ ಸಚಿವ ಕೃಷ್ಣಭೈರೇಗೌಡ, ‘ಸುಪ್ರೀಂ ಕೋರ್ಟ್’ ಆದೇಶದ ಮೇರೆಗೆ ತೆರವು ಕಾರ್ಯ ಮಾಡುತ್ತಿದ್ದೇವೆ. ಇದರಿಂದ ನಾಗರಿಕರಿಗೆ ಸಮಸ್ಯೆ ಆಗುತ್ತಿದೆ. ಹೀಗಾಗಿ ಫುಟ್ ಪಾತ್ ತೆರವು ಮಾಡುತ್ತಿದ್ದೇವೆ. ಬೆಂಗಳೂರು ನಗರದಲ್ಲಿ 15 ಸಾವಿರ ಕಿ.ಮೀ. ಫುಟ್ಪಾತ್ ಇದೆ. ಆದರೆ ನಾವು 2000 ಕಿ.ಮೀ. ಮಾತ್ರ ತೆರವುಗೊಳಿಸಿ ಅಂತಾ ಹೇಳಿದ್ದೇವೆ. ಹೆಚ್ಚು ಜನರು ಓಡಾಡುವ ಕಡೆ ಮಾತ್ರ ತೆರವು ಮಾಡುತ್ತಿದ್ದೇವೆ. ಫುಟ್ಪಾತ್ ಒತ್ತುವರಿಯಿಂದಾಗಿ ಅಪಘಾತ ಸಂಭವಿಸುತ್ತಿದ್ದು, ಫುಟ್ಪಾತ್ ತೆರವುಗೊಳಿಸುವಂತೆ ಜನರು ಕೇಳುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು.
Key words: Foot path, clearance, operation, Minister, Krishnabhairegowda
The post ಸುಪ್ರೀಂ ಆದೇಶದ ಮೇರೆಗೆ ಫುಟ್ ಪಾತ್ ತೆರವು ಕಾರ್ಯಾಚರಣೆ- ಸಚಿವ ಕೃಷ್ಣಭೈರೇಗೌಡ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




