28
June, 2026

A News 365Times Venture

28
Sunday
June, 2026

A News 365Times Venture

ಹನೂರು ಭಾಗದ ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಿ: MLC ಕೆ.ಶಿವಕುಮಾರ್

Date:

ಬೆಂಗಳೂರು,ಮಾರ್ಚ್, 16,2026 (www.justkannada.in): ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಹಳ್ಳಿಗಾಡಿನ ಪ್ರದೇಶಗಳಲ್ಲಿ ಕುಡಿಯುವ ನೀರಿಗೆ ತಾತ್ಸಾರ ಉಂಟಾಗಿದ್ದು, ಅಂತರ್ಜಲ ಮಟ್ಟ ಭಾರಿ ಪ್ರಮಾಣದಲ್ಲಿ ಕುಸಿತ ಕಂಡಿದೆ. ಈ ಭಾಗದ ಜನರಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಬೇಕೆಂದು ವಿಧಾನ ಪರಿಷತ್ ಸದಸ್ಯ  ಕೆ.ಶಿವಕುಮಾರ್ ಅವರು ಒತ್ತಾಯಿಸಿದರು.

ವಿಧಾನ ಪರಿಷತ್ ಅಧಿವೇಶನದಲ್ಲಿ ಈ ಕುರಿತು ಪ್ರಶ್ನೆಗೆ ಉತ್ತರ ಪಡೆದು ಮಾತನಾಡಿದ ಕೆ.ಶಿವಕುಮಾರ್ ಅವರು, ಜಿಲ್ಲೆಯ ಅನೇಕ ತಾಲ್ಲೂಕುಗಳು ಬರಪೀಡಿತ ಪ್ರದೇಶವಾಗಿದ್ದು, ನೀರಿನ ಸಮಸ್ಯೆ ಎದುರಿಸುತ್ತಿವೆ. ಅದರಲ್ಲೂ ಹನೂರು ತಾಲ್ಲೂಕಿನಲ್ಲಿ ಅಂತರ್ಜಲ ಮಟ್ಟ ಕುಸಿತ ಕಂಡ ಪರಿಣಾಮ ಅಲ್ಲಿನ ನಿವಾಸಿಗಳು ಹೆಚ್ಚಿನ ಫ್ಲೋರೈಡ್ ಅಂಶವುಳ್ಳ ನೀರಿನ ಸೇವನೆಯಿಂದ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.

ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಸೇರಿದಂತೆ ಸುತ್ತಮುತ್ತಲ ಹಳ್ಳಿಗಳಲ್ಲಿ ಕಳೆದ ಕೆಲವು ದಿನಗಳ ಹಿಂದೆ ಕಿಡ್ನಿ ವೈಫಲ್ಯದಿಂದ ಆರು ಮಂದಿ ಮೃತಪಟ್ಟಿದ್ದಾರೆ. ಇನ್ನಷ್ಟು ಜನರ ಕಿಡ್ನಿಯು ಸಮರ್ಪಕವಾಗಿ ಕಾರ್ಯನಿರ್ವಹಿಸದೆ ಡಯಾಲಿಸಿಸ್ ಚಿಕಿತ್ಸೆಗೆ ಒಳಗಾಗಿರುವ ಧಾರುಣ ಪರಿಸ್ಥಿತಿ ನಿರ್ಮಾಣವಾಗಿದೆ. ಡೆಂಟಲ್ ಫ್ಲೋರೋಸಿಸ್‌ನಿಂದ ಮಕ್ಕಳ ಹಲ್ಲುಗಳಲ್ಲಿ ಬಿಳಿ ಅಥವಾ ಕಂದು ಕಲೆಗಳು ಉಂಟಾಗಿ ಹಲ್ಲುಗಳ ದುರ್ಬಲವಾಗುತ್ತಿವೆ. ಸ್ಕೆಲೆಟಲ್ ಫ್ಲೋರೋಸಿಸ್‌ನಿಂದ ಹಿರಿಯರಲ್ಲಿ ಮೂಳೆಗಳು ದುರ್ಬಲವಾಗಿ ಕೀಲು ನೋವು ಭಾದಿಸುತ್ತಿದೆ ಎಂದು ಸಮಸ್ಯೆಯನ್ನು ತೆರೆದಿಟ್ಟರು.

ಈ ಭಾಗದಲ್ಲಿ ಸುಮಾರು 67 ಸಾವಿರ ಜಾನುವಾರಗಳಿವೆ. ಹಿಂದೊಮ್ಮೆ ಬರ ಉಂಟಾಗಿದ್ದಾಗ ಸಾವಿರಾರು ದನಕರುಗಳು ನೀರಿಲ್ಲದೆ ಮೃತಪಟ್ಟಿದ್ದವು. ಇಲ್ಲಿನ ಜನರಿಗೆ ಜಾನುವಾರಗಳೇ ಜೀವನೋಪಾಯವಾಗಿದೆ. ಆದ್ದರಿಂದ ಸರ್ಕಾವು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು.  ಒಂದಡೆ ಬೀಸಿಲ ತಾಪ ಏರಿಕೆ ಕಾಣುತ್ತಿದೆ. ಮತ್ತೊಂದೆಡೆ ನೀರಿನ ಸಮಸ್ಯೆ ಇದೆ. ಇನ್ನೂ ನಾಲ್ಕೈದು ತಿಂಗಳಲ್ಲಿ ಪರಿಹಾರ ಕಲ್ಪಿಸದಿದ್ದರೆ ಈ ಭಾಗದ ಜನರ ಸ್ಥಿತಿ ಪರಿತಪಿಸುವಂತಾಗಲಿದೆ ಎಂದ ಹೇಳಿದರು.

ಈ‌ ನಿಟ್ಟಿನಲ್ಲಿ ಇಲ್ಲಿನ ಗ್ರಾಮ ಪಂಚಾಯಿತಿಗಳು ಪ್ರತೀ ಹದಿನೈದು ದಿ‌ನಕ್ಕೊಮ್ಮೆ ನಿರಂತರವಾಗಿ ಫ್ಲೋರೈಡ್ ಪರೀಕ್ಷೆ ಮಾಡಬೇಕು, ಕಚೇರಿಯಲ್ಲಿ ಪರೀಕ್ಷಾ ಫಲಕ ಅಳವಡಿಸಬೇಕು. ಈ ಬಗ್ಗೆ ಜಿಲ್ಲಾಧಿಕಾರಿಗಳು ಗಂಭೀರವಾಗಿ ಪರಿಶೀಲಿಸಬೇಕು. ಈಗಾಗಲೇ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಜನರಿಗೆ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಒತ್ತಾಯಿಸಿದರು.

ಈ ಭಾಗದಲ್ಲಿ ನೀರಿನ ಶೇಖರಣೆಗೆ ಹೆಚ್ಚಿನ ಚೆಕ್ ಡ್ಯಾಂ ನಿರ್ಮಿಸಬೇಕು. ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆ ಮಾಡಬೇಕು. ಕೆರೆಗಳಿಗೆ ನೀರು ತುಂಬಿಸಬೇಕು. ಜಂಟಿ ಟಾಸ್ಕ್ ಫೋರ್ಸ್ ಸಮಿತಿ ನೇಮಿಸಿ ಈ ಭಾಗದ ನೀರಿನ ಬವಣೆಯನ್ನು ಪರಿಹರಿಸಬೇಕು ಎಂದು ಹೇಳಿದರು.

ಪ್ರಸ್ತುತ  ಮುಖ್ಯಮಂತ್ರಿಗಳು ಈ ಸಾಲಿನ ಬಜೆಟ್‌ ನಲ್ಲಿ ಈ ಭಾಗದ ನೀರಾವರಿ ಸೌಲಭ್ಯಕ್ಕಾಗಿ ಎಡತೊರೆಹಳ್ಳ ಯೋಜನೆಗೆ 490 ಕೋಟಿ ಅನುದಾನ ಒದಗಿಸಿರುವುದು ಶ್ಲಾಘನೀಯ ಎಂದರು.

ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರತಿಕ್ರಿಯಿಸಿ, ಕಳೆದ ಒಂದುವರೆ ವರ್ಷದಿಂದ ನೀರಿನ ಕೊರತೆ ಎದುರಿಸುತ್ತಿರುವ ಗ್ರಾಮಗಳಲ್ಲಿ ನೀರಿನ ಸೌಲಭ್ಯ ಒದಗಿಸಲು ಅಗತ್ಯ ಕ್ರಮಕೈಗೊಳ್ಳಲಾಗುತ್ತಿದೆ. ಪ್ರಸ್ತುತ ಈ ಭಾಗದ ಸಮಸ್ಯೆ ಪರಿಹರಿಸಲು ಜಿಲ್ಲಾ ಪಂಚಾಯತ್ ಸಿಇಒ ಅವರಿಗೆ ತುರ್ತಾಗಿ ಕ್ರಿಯಾಯೋಜನೆ ಸಲ್ಲಿಸುವಂತೆ ತಿಳಿಸಲಾಗಿದೆ. ಸದ್ಯಕ್ಕೆ ಖಾಸಗಿ ಬೋರ್ ವೆಲ್ ಹಾಗೂ ಟ್ಯಾಂಕರ್‌ ಗಳಿಂದ ನೀರನ್ನು ಒದಗಿಸಲಾಗುತ್ತಿದೆ.

ನಮ್ಮ ಸರ್ಕಾರವು ನೀರಿನ ಗುಣಮಟ್ಟ ಪರೀಕ್ಷೆಗೆ ಹೆಚ್ಚಿನ ಒತ್ತು ನೀಡುತ್ತಿದೆ. ಪ್ರತೀ ತಿಂಗಳು ನಾನೇ ಸಭೆ ನಡೆಸುತ್ತಿದ್ದೇನೆ. ನಿರಂತರವಾಗಿ ಇನ್ನೂ ಹೆಚ್ಚಿನ ಪರೀಕ್ಷೆ ಮಾಡಲು ಸೂಚಿಸಲಾಗುವುದು. ಆರೋಗ್ಯ ಇಲಾಖೆಯ ಸಮನ್ವಯದೊಂದಿಗೆ ಆರೋಗ್ಯ ಶಿಬಿರ ಏರ್ಪಡಿಸಿ ತಪಾಸಣೆ ನಡೆಸಿ ಚಿಕಿತ್ಸೆ ನೀಡಲಾಗುವುದು. ಪ್ರಮುಖವಾಗಿ ಜಲಮೂಲಗಳ ಸಂರಕ್ಷಣೆ ಮಾಡಲು ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

Key words:  clean drinking, Hanur,  MLC, K. Shivakumar

The post ಹನೂರು ಭಾಗದ ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಿ: MLC ಕೆ.ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ್ರತಿ ವರ್ಷ ಬೆಂಗಳೂರಿನ ಒಂದೊಂದು ವಿಧಾನಸಭಾ ಕ್ಷೇತ್ರದಲ್ಲಿ ಕೆಂಪೇಗೌಡ ಜಯಂತಿ- ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು, ಜೂನ್, 27,2026 (www.justkannada.in):  ಇನ್ಮುಂದೆ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ...

“JUST KANNADA” ಸರಣಿ ವರದಿ : ಫಾಕ್ಸ್ ಡೆನ್ ಬಾರ್ ಅಗ್ನಿ ದುರಂತ, ಕಡೆಗೂ ಅಬಕಾರಿ ಡಿಸಿ ನಾಗರಾಜಪ್ಪ ಅಮಾನತು.

  ಮೈಸೂರು, ಜೂ.27: ಮೈಸೂರಿನ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್...

ತಮಿಳು ಚಿತ್ರರಂಗದ ಹಿರಿಯ ನಿರ್ದೇಶಕ, ನಟ ಕೆ. ಭಾಗ್ಯರಾಜ್ ನಿಧನ

ಚೆನ್ನೈ, ಜೂನ್,27,2026 (www.justkannada.in):  ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ, ನಟ, ಕಥೆಗಾರ...

ಪ್ರೇಯಸಿಗೆ ಚಾಕು ಇರಿತ:  ಕಾರು ಸ್ಫೋಟಿಸಿಕೊಂಡು ಪಾಗಲ್ ಪ್ರೇಮಿ ಆತ್ಮಹತ್ಯೆ

ತುಮಕೂರು,ಜೂನ್,27,2026 (www.justkannada.in):  ತನ್ನ ಪ್ರೇಯಸಿಯನ್ನು ಅಪಹರಿಸಿದ ಪಾಗಲ್ ಪ್ರೇಮಿಯೊಬ್ಬ ಆಕೆಗೆ ಚಾಕುವಿನಿಂದ...