4
July, 2025

A News 365Times Venture

4
Friday
July, 2025

A News 365Times Venture

ಹಾಸನ ಜಿಲ್ಲೆಯಲ್ಲಿ ಹೃದಯಘಾತದಿಂದ ಸರಣಿ ಸಾವು: ತಜ್ಞರ ಸಮಿತಿ ರಚನೆ: ವರದಿಗೆ ಸೂಚನೆ

Date:

ಬೆಂಗಳೂರು,ಜುಲೈ,1,2025 (www.justkannada.in): ಹಾಸನ ಜಿಲ್ಲೆಯಲ್ಲಿ ಹೃದಯಘಾತದಿಂದ ಸರಣಿ ಸಾವು ಹಿನ್ನೆಲೆಯಲ್ಲಿ ಸರ್ಕಾರದಿಂದ ತಜ್ಞರ ಸಮಿತಿ ರಚನೆ ಮಾಡಲಾಗಿದ್ದು 10 ದಿನಗಳ ಒಳಗಾಗಿ ಅಧ್ಯಯನ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕಳೆದೊಂದು ತಿಂಗಳಿನಲ್ಲಿ ಹಾಸನ ಜಿಲ್ಲೆಯೊಂದರಲ್ಲೇ ಇಪ್ಪತ್ತಕ್ಕೂ ಅಧಿಕ ಮಂದಿ ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾದ ವಿಚಾರವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸರಣಿ ಸಾವುಗಳಿಗೆ ನಿಖರ ಕಾರಣವನ್ನು ಪತ್ತೆಹಚ್ಚಿ, ಅದಕ್ಕೆ ಪರಿಹಾರ ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ. ರವೀಂದ್ರನಾಥ್ ಅವರ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಿ, 10 ದಿನಗಳ ಒಳಗಾಗಿ ಅಧ್ಯಯನ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಎಳೆಯ ವಯಸ್ಸಿನವರ, ಯುವ ಜನರ ಹಠಾತ್ ನಿಧನಕ್ಕೆ ಕಾರಣಗಳೇನು? ಕೋವಿಡ್ ಲಸಿಕೆಯ ದುಷ್ಪರಿಣಾಮಗಳೇನಾದರೂ ಇರಬಹುದೇ? ಎಂದು ಕೂಲಂಕಷವಾಗಿ ಅಧ್ಯಯನ ನಡೆಸಲು ಇದೇ ಸಮಿತಿಗೆ ಕಳೆದ ಫೆಬ್ರವರಿ ತಿಂಗಳಲ್ಲೇ ಆದೇಶ ನೀಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಹೃದ್ರೋಗಿಗಳನ್ನು ಪರಿಶೀಲನೆಗೊಳಪಡಿಸಿ, ವಿಶ್ಲೇಷಣೆ ಮಾಡುವ ಕಾರ್ಯ ಕೂಡ ಪ್ರಗತಿಯಲ್ಲಿದೆ.

ಬದುಕಿ ಬಾಳಬೇಕಾದ ಚಿಕ್ಕಮಕ್ಕಳು, ಯುವಜನರು, ಅಮಾಯಕರ ಜೀವಗಳ ಬೆಲೆ, ಅವರ ಕುಟುಂಬಸ್ಥರ ಕಾಳಜಿ ನಮಗೂ ಇದೆ. ಇಂತಹ ವಿಚಾರಗಳನ್ನು ಕೂಡ ತಮ್ಮ ರಾಜಕೀಯ ಸಾಧನೆಗೆ ಬಳಕೆ ಮಾಡಿಕೊಳ್ಳುತ್ತಿರುವ ಬಿಜೆಪಿ ನಾಯಕರ ನಡೆಯನ್ನು ನಾನು ಖಂಡಿಸುತ್ತೇನೆ. ಆತುರಾತುರದಲ್ಲಿ ಕೊರೊನಾ ಲಸಿಕೆಗೆ ಅಧಿಕೃತ ಅನುಮೋದನೆ ಕೊಟ್ಟು, ಜನರಿಗೆ ಹಂಚಿದ್ದು ಕೂಡ ಈ ಸಾವುಗಳಿಗೆ ಕಾರಣವಿರಬಹುದು ಎಂಬುದನ್ನು ಅಲ್ಲಗಳೆಯಲಾಗದು, ಕಾರಣ ವಿಶ್ವದ ಅನೇಕ ಅಧ್ಯಯನಗಳು ಇತ್ತೀಚೆಗೆ ಹೆಚ್ಚಾಗಿರುವ ಹೃದಯ ಸ್ತಂಭನಕ್ಕೆ ಕೊವಿಡ್ ಲಸಿಕೆ ಕಾರಣ ಎಂಬುದನ್ನು ಹೇಳಿವೆ. ಈ ವಿಚಾರದಲ್ಲಿ ಬಿಜೆಪಿಯವರು ನಮ್ಮನ್ನು ಟೀಕಿಸುವ ಮುನ್ನ ಆತ್ಮಸಾಕ್ಷಿಯನ್ನೊಮ್ಮೆ ಕೇಳಿಕೊಳ್ಳಲಿ ಎಂದು ಸಿಎಂ ಸಿದ್ದರಾಮಯ್ಯ ಕುಟುಕಿದರು.

ಹಾಸನ ಜಿಲ್ಲೆಯು ಸೇರಿದಂತೆ ರಾಜ್ಯದಲ್ಲಿ ಸಂಭವಿಸುತ್ತಿರುವ ಹಠಾತ್ ಸರಣಿ ಸಾವುಗಳಿಗೆ ನೈಜ ಕಾರಣ ಪತ್ತೆಮಾಡಿ, ತಡೆಯುವ ನಿಟ್ಟಿನಲ್ಲಿ ನಾವು ಸಂಪೂರ್ಣ ಬದ್ಧರಿದ್ದೇವೆ. ಈ ಉದ್ದೇಶದಿಂದಲೇ ಹೃದಯ ಜ್ಯೋತಿ ಮತ್ತು ಗೃಹ ಆರೋಗ್ಯದಂತಹ ಯೋಜನೆಗಳನ್ನು ಈಗಾಗಲೇ ಜಾರಿಗೆಕೊಟ್ಟು, ಸಾರ್ವಜನಿಕರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ. ಡಾ. ರವೀಂದ್ರನಾಥ್ ಅವರ ನೇತೃತ್ವದ ತಜ್ಞರ ಸಮಿತಿ ವರದಿ ಆಧರಿಸಿ ಅಗತ್ಯ ಕ್ರಮಗಳನ್ನು ಕೂಡ ಕೈಗೊಳ್ಳಲಾಗುವುದು.

ಜನರ ಆರೋಗ್ಯ ರಕ್ಷಣೆಗಾಗಿ ಒಂದು ಸರ್ಕಾರವಾಗಿ ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ನಾವು ಮಾಡುತ್ತಿದ್ದು, ಸಾರ್ವಜನಿಕರು ಎದೆನೋವು, ಉಸಿರಾಟದ ತೊಂದರೆ ಕಂಡುಬಂದರೆ ಅಲಕ್ಷ್ಯ ತೋರದೆ ತಕ್ಷಣವೇ ಸಮೀಪದ ಆರೋಗ್ಯ ಕೇಂದ್ರಗಳಿಗೆ ತೆರಳಿ ಪರೀಕ್ಷೆಗೆ ಒಳಗಾಗಬೇಕು ಎಂದು ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.vtu

Key words: heart attacks,  death, Hassan district, experts, Report, CM Siddaramaiah

The post ಹಾಸನ ಜಿಲ್ಲೆಯಲ್ಲಿ ಹೃದಯಘಾತದಿಂದ ಸರಣಿ ಸಾವು: ತಜ್ಞರ ಸಮಿತಿ ರಚನೆ: ವರದಿಗೆ ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

ಹಾಸನ, ಜುಲೈ 4, 2025 (www.justkannada.in): ಕೃಷಿ ಫೀಡರ್ ಗಳನ್ನು ಸೌರೀಕರಣಗೊಳಿಸಿ...

RSS ಬ್ಯಾನ್ ಮಾಡಬೇಕೆಂದ ಸಚಿವ ಪ್ರಿಯಾಂಕ್ ಖರ್ಗೆಗೆ ಮಾಜಿ ಮೇಯರ್ ಶಿವಕುಮಾರ್ ಸವಾಲು

ಮೈಸೂರು,ಜುಲೈ,4,2025 (www.justkannada.in): ಆರ್‌ಎಸ್‌ಎಸ್ ಬ್ಯಾನ್ ಮಾಡಬೇಕೆಂದು ಹೇಳಿಕೆ ನೀಡಿರುವ ಸಚಿವ ಪ್ರಿಯಾಂಕ್...

ಬಂಧನದ ಭೀತಿ: ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ MLC ಎನ್.ರವಿಕುಮಾರ್

ಬೆಂಗಳೂರು,ಜುಲೈ,4,2025 (www.justkannada.in):  ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ  ಬಗ್ಗೆ...